ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದಲ್ಲಿ ಬೆಂಗಳೂರಿನ ಕೌಶಲಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಪ್ರಾಯೋಜಿಸಿದ ಉದ್ಯಮಶೀಲತಾಭಿವೃದ್ಧಿಯ ಕುರಿತು ೧೦ ದಿನಗಳ ತರಬೇತಿ ಕಾರ್ಯಕ್ರಮಕ್ಕೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿಯಲ್ಲಿ ಉದ್ಯಮದ ಆಯ್ಕೆ, ಮಾರುಕಟ್ಟೆ ಸಮೀಕ್ಷೆ, ಕೈಗಾರಿಕಾ ಇಲಾಖೆಯ ಯೋಜನೆಗಳು, ಬ್ಯಾಂಕಿಂಗ್ ಯೋಜನೆಗಳನ್ನು ಪ್ರಸ್ತುತಪಡಿಸುವ ವಿಧಾನ, ಬಿಸಿನೆಸ್ ಪ್ಲಾö್ಯನ್, ಜಿಎಸ್‌ಟಿ, ಲೆಕ್ಕಶಾಸ್ತçಗಳ ಕುರಿತು ಮಾಹಿತಿ ನೀಡಲಾಗುವುದು. ಆಸಕ್ತರು ಸೆಪ್ಟೆಂಬರ್ ೧೯ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ೮೮೮೪೧೮೪೪೩೯, ೮೭೬೨೪೮೩೪೭೮ ಸಂಪರ್ಕಿಸಬಹುದಾಗಿದೆ ಎಂದು ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.