ಉದಯರಶ್ಮಿ ದಿನಪತ್ರಿಕೆ
ಚಿಮ್ಮಡ: ಬಾಗಲಕೋಟ ಜಿಲ್ಲಾ ಆಡಳಿತ ಗ್ರಾಮದ ಸರಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ನಿರ್ಮಲಾ ಮ. ಬೀಳಗಿಯವರಿಗೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ನೀಡಿ ಗೌರವಿಸಿದೆ.
ಬಾಗಲಕೋಟ ಜಿಲ್ಲಾ ಪಂಚಾಯತ ಹಾಗೂ ಶಾಲಾ ಶಿಕ್ಷಣ ಇಲಾಖೆ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಶಾಲೆಗಳಲ್ಲಿ ಮಕ್ಕಳಿಗಾಗಿ ಅವಿರತವಾಗಿ ಶ್ರಮಿಸಿದ ಶಿಕ್ಷಕರಿಗೆ ಶಿಕ್ಷಕರ ಕಲ್ಯಾಣ ನಿಧಿ ಮತ್ತು ಜಿಲ್ಲಾ ಪಂಚಾಯತನಿಂದ ನೀಡಲಾಗುವ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಗ್ರಾಮದ ಸರಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆಯ ವಿಜ್ಞಾನ ಶಿಕ್ಷಕಿ ಶ್ರೀಮತಿ ನಿರ್ಮಲಾ ಮ. ಬೀಳಗಿಯವರು ಭಾಜನರಾಗಿದ್ದು ಶಾಲೆಯ ಎಸ್ಡಿಎಂಸಿ ಅಧ್ಯಕ್ಷ ಅಡಿವೆಪ್ಪ ಪರೀಟ ಮತ್ತು ಸದಸ್ಯರು ಹಾಗೂ ಸಮಸ್ತ ಶಿಕ್ಷಕರ ಬಳಗ ಅಭಿನಂದನೆ ಸಲ್ಲಿಸಿದೆ.