ಉದಯರಶ್ಮಿ ದಿನಪತ್ರಿಕೆ
ಚಿಮ್ಮಡ: ಗ್ರಾಮದ ಶ್ರೀ ಪ್ರಭುಲಿಂಗೇಶ್ವರ ಅಂತರಾಷ್ಟ್ರೀಯ ಶಾಲೆಯ ವಿದ್ಯಾರ್ಥಿನಿಯರು ಹೋಬಳಿ ಮಟ್ಟದ ಪಂದ್ಯಾವಳಿಯ ಹದಿನಾಲ್ಕು ವರ್ಷದೊಳಗಿನ ವಿದ್ಯಾರ್ಥಿಗಳ ವಿಭಾಗದಲ್ಲಿ ಪ್ರಥಮಸ್ಥಾನ ಪಡೆದು ತಾಲುಕಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಬನಹಟ್ಟಿಯ ಎಸ್‌ಆರ್‌ಎ ಮೈದಾನದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ಹೋಬಳಿ ಮಟ್ಟದ ಪಂದ್ಯಾವಳಿಯಲ್ಲಿ ಭಾಗವಹಿಸಿದ ಸಿದ್ದು ಸವದಿ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ದಿ ಸಂಸ್ಥೆಯ ಶ್ರೀ ಪ್ರಭುಲಿಂಗೇಶ್ವರ ಅಂತರಾಷ್ಟ್ರೀಯ ಶಾಲೆಯ ವಿದ್ಯಾರ್ಥಿನಿಯರು ಹದಿನಾಲ್ಕು ವರ್ಷದೊಳಗಿನ ವಿದ್ಯಾರ್ಥಿಗಳ ವಿಭಾಗದಲ್ಲಿ ಪ್ರಥಮಸ್ಥಾನ ಪಡೆದು ತಾಲೂಕಾ ಮಟ್ಟಕ್ಕೆ ಆಯ್ಕೆಯಾಗಿ ಗ್ರಾಮದ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಅವರಿಗೆ ಸಂಸ್ಥೆಯ ಅಧ್ಯಕ್ಷರಾದ ಶಾಸಕ ಸಿದ್ದು ಸವದಿ ಕಾರ್ಯದರ್ಶಿ ವಿದ್ಯಾಧರ ಸವದಿ, ಪ್ರಾಚಾರ್ಯ ರಮೇಶ ಪೂಜಾರಿ, ದೈಹಿಕ ಶಿಕ್ಷಕ ಅನೀಲ ಗುಬಚಿ, ಹಾಗೂ ಆಡಳಿತ ಮಂಡಳಿ ಅಭಿನಂದನೆ ಸಲ್ಲಿಸಿದೆ.