Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ದ್ರಾಕ್ಷಿ ಬೆಳೆಗಾರರಿಗೆ ವಿಶೇಷ ಅನುದಾನ ನೀಡುವಂತೆ ಆಗ್ರಹ
(ರಾಜ್ಯ ) ಜಿಲ್ಲೆ

ದ್ರಾಕ್ಷಿ ಬೆಳೆಗಾರರಿಗೆ ವಿಶೇಷ ಅನುದಾನ ನೀಡುವಂತೆ ಆಗ್ರಹ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಜಿಲ್ಲೆಯ ದ್ರಾಕ್ಷಿ ಬೆಳೆಗಾರರ ಸಮಸ್ಯೆ ಕುರಿತು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಆಗ್ರಹ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲೆಯಲ್ಲಿ ದ್ರಾಕ್ಷಿ ಬೆಳೆಗಾರರು ನೂರಾರುನಮಸ್ಯೆಗಳ ಮಧ್ಯ ಸಾವು ನೋವಿನ ಮಧ್ಯ ಹೋರಾಟ ಮಾಡುತ್ತಾ ಜೀವನ ಸಾಗಿಸುವಂತಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ದ್ರಾಕ್ಷಿ ಬೆಳೆಗಾರರ ಸಮಸ್ಯೆ ಕುರಿತು ಆಗ್ರಹ ಮಾಡಿ ಮನವಿ ಸಲ್ಲಿಸಲಾಯಿತು.
ಈ ವೇಳೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು ಮಾತನಾಡುತ್ತಾ, ಇಡೀ ಕರ್ನಾಟಕದಲ್ಲಿ ಅಂದಾಜು ೧ ಲಕ್ಷ ಎಕರೆ ದ್ರಾಕ್ಷಿ ಬೆಳೆಯಲಾಗುತ್ತದೆ, ವಿಜಯಪುರದಲ್ಲಿ ೭೦% ದ್ರಾಕ್ಷಿ ಬೆಳೆಯುತ್ತಿದ್ದು, ಇದನ್ನು ನಂಬಿ ೧೫-೨೦ ಸಾವಿರ ರೈತ ಕುಟುಂಬಗಳು ಹಾಗೂ ಸಾವಿರಾರು ರೈತ ಕಾರ್ಮಿಕರು ಬದುಕು ಸಾಗಿಸುತ್ತಿದ್ದಾರೆ, ಆದರೆ ದಲ್ಲಾಳಿಗಳ ಹಾವಳಿ, ಮಾರುಕಟ್ಟೆಯ ಕೊರತೆ, ಕೋಲ್ಡ್ ಸ್ಟೋರೆಜ್ ಕೊರತೆ, ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಖರ್ಚು, ಕೂಲಿಯವರ ಪಗಾರ, ಔಷಧ, ಗೊಬ್ಬರ ಇನ್ನಿತರ ಖರ್ಚು ಹತ್ತು ಪಟ್ಟು ಹೆಚ್ಚಾಗಿದೆ, ಇವುಗಳಿಂದ ಗೆದ್ದು ಬಂದ್ದರೆ, ರೋಗ ಹಾಗೂ ಸರಿಯಾದ ಬೆಲೆ ಸಿಗದೇ ಬೀದಿಗೆ ಬಿದ್ದು ಅನೇಕ ರೈತರು ರೈತ ಆತ್ಮಹತ್ಯೆ ಮಾಡಿಕೊಂಡಿರುವುದು ಇದೆ. ಕಳೆದ ತಿಂಗಳು ಸುರಿದಿರುವ ಅತೀ ಹೆಚ್ಚಿನ ಮಳೆಯಿಂದಾಗಿ ಅನೇಕ ರೈತರ ಜಮೀನಿನಲ್ಲಿ ನೀರು ನಿಂತು ನಷ್ಟ ಅನುಭವಿಸುವಂತಾಗಿದೆ, ಇದನ್ನು ಮನಗಂಡು ವಿಮೆ ಹಾಗೂ ಸರಕಾರದಿಂದ ಪರಿಹಾರ ಕೊಡಬೇಕೆಂದು ಈ ಮೂಲಕ ಆಗ್ರಹಿಸುತ್ತೇವೆ ಎಂದರು.
ಈ ಕೆಳಗಿನ ದ್ರಾಕ್ಷಿ ಬೆಳೆಗಾರರ ಪ್ರಮುಖ ಬೇಡಿಕೆಗಳನ್ನು ಈಡೇರಿಸಬೇಕೆಂದು ಮನವಿ ಮಾಡಿಕೊಂಡರು.
೨೦೨೪-೨೫ ನೇ ಸಾಲಿನ ದ್ರಾಕ್ಷಿ ಬೆಳೆ ವಿಮೆ ಅವದಿ ಮುಗಿದರು ಇನ್ನುವರೆಗೂ ವಿಮೆ ಹಣ ಜಮಾ ಮಾಡಿಲ್ಲ, ಬೇಗ ವಿಮೆ ಹಣ ಜಮಾ ಮಾಡಬೇಕು,
ದ್ರಾಕ್ಷಿಗೆ ಸಂಬಂಧಿಸಿದ ವಿಮೆ ಕಂಪನಿಯ ಕಚೇರಿಯನ್ನು ವಿಜಯಪುರದಲ್ಲಿ ತೆರೆಯಬೇಕು
೨೦೨೫-೨೬ ನೇ ಸಾಲಿನ ವಾತಾವರಣದಲ್ಲಿ ದ್ರಾಕ್ಷಿ ಬೆಳೆಯಲು ಯೋಗ್ಯ ವಾತಾವರಣ ಇಲ್ಲ, ಕೂಡಲೇ ಜಂಟಿ ಸಮೀಕ್ಷೆ ಕೈಕೊಂಡು ಪ್ರಕೃತಿ ವಿಕೋಪದಿಂದ ಆಗಿರುವ ನಷ್ಟಕ್ಕೆ ಪರಿಹಾರವನ್ನು ನ್ಯಾಯಯುತವಾಗಿ ನೀಡಬೇಕು.
ದ್ರಾಕ್ಷಿಗೆ ಹವಾಮಾನ ಆದಾರಿತ ವಿಮೆ ನೀಡುವುದಾಗಿ ಹೇಳಿ ಪ್ರಭಾವಿಗಳ ಆದೇಶದಂತೆ ಇದರಲ್ಲಿ ಕೂಡಾ ಅಕ್ರಮ ಕಂಡು ಬರುತ್ತಿದ್ದು, ಇದನ್ನು ಸರಿ ಪಡಿಸಿ ನ್ಯಾಯಯುತವಾಗಿ ನಷ್ಟ ಪರಿಹಾರ ನೀಡಬೇಕು.
ಅವಶ್ಯಕತೆಗೆ ಅನುಗುಣವಾಗಿ ಕೋಲ್ಡ್ಸ್ಟೋರೆಜ್ ಸ್ಥಾಪನೆ ಮಾಡಬೇಕು, ಸರ್ಕಾರಿ ಕೋಲ್ಡ್ಸ್ಟೋರೆಜ್ ಭೂಮಿ ಪೂಜೆಯಾಗಿ ಬಹುದಿನಗಳೆ ಕಳೆದಿವೆ, ಅದು ಪ್ರಾರಂಭವಾಗಬೇಕು.
ಜಿಲ್ಲೆಯಲ್ಲಿ ನೆನೆಗುದಿಗೆ ಬಿದ್ದ ವೈನ್ ಪಾರ್ಕ ಕೂಡಲೇ ಪ್ರಾರಂಭವಾಗಬೇಕು
ಎ.ಪಿ.ಎಮ್.ಸಿ ಅಡಿಯಲ್ಲಿ ದ್ರಾಕ್ಷಿ (ಮನುಕು) ಖರೀಧಿ ಪುನಃ ಆರಂಭವಾಗಬೇಕು, ಇದರಿಂದ ಮಹಾರಾಷ್ಟçಕ್ಕೆ ಹೋಗುವ ಖರ್ಚು ಉಳಿದು ರೈತರಿಗೆ ಹೆಚ್ಚಿನ ಲಾಭ ಸಿಗಲಿದೆ,
ದ್ರಾಕ್ಷಿ ಇಲ್ಲದ ಜಮಿನಿಗೆ ವಿಮೆ ತುಂಬಿ ದ್ರಾಕ್ಷಿ ಎಂದು ರೈತರಿಂದ ಹಣ ಪಡೆದು ಬ್ಯಾನರ ಇಟ್ಟು ಜಿ.ಪಿ.ಎಸ್ ಮಾಡುತ್ತಿದ್ದು, ಇದರಿಂದ ನೈಜ ದ್ರಾಕ್ಷಿ ಬೆಳೆಗಾರರಿಗೆ ಪೆಟ್ಟು ಬಿಳಲಿದೆ, ಇಂತವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.
ಜಿಲ್ಲೆಯಲ್ಲಿ ನಕಲಿ ಬೀಜ , ಗೊಬ್ಬರ ಹಾಗೂ ಕೀಟನಾಶಕಗಳ ಹಾವಳಿ ಹೆಚ್ಚಾಗಿದ್ದು ಇದನ್ನು ಕೂಡಲೇ ನಿಲ್ಲಿಸಬೇಕು.
ಈ ಮೇಲಿನ ಎಲ್ಲಾ ಬೇಡಿಕೆಗಳನ್ನು ಈಡೇರಿಸಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದರು.
ಈ ವೇಳೆ ಮುಖಂಡರಾದ ಜಕರಾಯ ಪೂಜಾರಿ, ಕನ್ನಪ್ಪ ಕೊಂಡಿ, ಈಶ್ವರ ಯಳಜೇರಿ, ಮಲ್ಲಪ್ಪ ಕೋಮಡಿ, ಕುಮಾರ ಚಡಚಣ, ಸದಾಶಿವ ಘಡಾಲಟ್ಟಿ, ರಾಮಚಂದ್ರ ಅಗಸರ, ಬಸಪ್ಪ ಮಾಳಿ, ಶಿವು ಪಟ್ಟಣಶೆಟ್ಟಿ, ಅಶೋಕ ಶಿರೋಳ, ಭೀಮು ತೋನಶೆಟ್ಟಿ, ಭೀಮು ಬಡಕುರಿ, ಅಮರ ಪೂಜರಿ, ಭೀರು ಗಡದಿ, ಬಾಲಿಸಾಬ ಮುಲ್ಲಾ, ಶೀವು ಮಾಳಿ ಸೇರಿದಂತೆ ಇತರರು ಇದ್ದರು.

BIJAPUR NEWS public public news Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026

ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ

ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ

ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಆಗಸ್ಟ್ 21, 2026
    In ದಿನಪತ್ರಿಕೆ
  • ದೇವರಾಜ ಅರಸು ಕರ್ನಾಟಕ ನಾಮಕರಣದ ರೂವಾರಿ :ಅರಳಿ
    In (ರಾಜ್ಯ ) ಜಿಲ್ಲೆ
  • ಸಾಮಾಜಿಕ ಬದಲಾವಣೆಗೆ ಅರಸು ಕೊಡುಗೆ ಸದಾ ಸ್ಮರಣೀಯ
    In (ರಾಜ್ಯ ) ಜಿಲ್ಲೆ
  • ಒಂದು ಛಾಯಾಚಿತ್ರ ಜಗತ್ತಿನ ಇತಿಹಾಸ ನೆನಪಿಸುತ್ತದೆ :ಸಾಲಿ
    In (ರಾಜ್ಯ ) ಜಿಲ್ಲೆ
  • ರೈತನ ಬೆಳೆ ಮಣ್ಣುಪಾಲು ಕಣ್ಣೀರು ಮಾತ್ರ ರೈತನ ಪಾಲು :ಕೋನಳ್ಳಿ
    In (ರಾಜ್ಯ ) ಜಿಲ್ಲೆ
  • ರಂಗಭೂಮಿ ಕಲಾವಿದ ರಾಜಕುಮಾರ್ ಗೆ ನಾಟಕ ಅಕಾಡೆಮಿ ಪ್ರಶಸ್ತಿ
    In (ರಾಜ್ಯ ) ಜಿಲ್ಲೆ
  • ಶ್ರಾವಣ ಸದ್ವಿಚಾರ
    In (ರಾಜ್ಯ ) ಜಿಲ್ಲೆ
  • ಡಿ ದೇವರಾಜ ಅರಸು ಸಾಮಾಜಿಕ ಪರಿವರ್ತನೆಯ ಹರಿಕಾರ
    In (ರಾಜ್ಯ ) ಜಿಲ್ಲೆ
  • ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
  • ಕಲಾ, ಸಾಂಸ್ಕೃತಿಕ ತಂಡಗಳ ಧನಸಹಾಯಅರ್ಜಿ ಸಲ್ಲಿಕೆಗೆ ಸೆ.೪ವರೆಗೆ ಅವಧಿ ವಿಸ್ತರಣೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.