ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನ ಹಾಗೂ ಮಹಾತ್ಮ ಗಾಂಧಿ ಜಯಂತಿ ಅಂಗವಾಗಿ ಮಂಡಲ ಸೇವಾ ಪಾಕ್ಷಿಕ ಕಾರ್ಯಾಗಾರ ಜರುಗಿತು.
ಪಟ್ಟಣದ ಪ್ರವಾಸಿಮಂದಿರದಲ್ಲಿ ಶುಕ್ರವಾರ ಮಂಡಲ ಸೇವಾ ಪಾಕ್ಷಿಕ ಕಾರ್ಯಾಗಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆಪ್ಟೆಂಬರ್ ೧೭ ರಿಂದ ಮಹಾತ್ಮಾ ಗಾಂಧಿ ಜನ್ಮದಿನವಾದ ಅಕ್ಟೋಬರ್ ೨ರವರೆಗೆ ಸಾಮಾಜಿಕ ಸೇವಾ ಕಾರ್ಯಗಳ ಕುರಿತಾಗಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಮಂಡಲ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ, ತಾಯಿಯ ಹೆಸರಿನಲ್ಲಿ ಒಂದು ಸಸಿ, ರಕ್ತದಾನ, ಆರೋಗ್ಯಶಿಬಿರ, ಕ್ರೀಡೆ, ಹಾಗೂ ಚಿತ್ರಕಲಾ ಸ್ಪರ್ಧೆಯಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.
ಮಂಡಲ ಅಧ್ಯಕ್ಷ ಅವ್ವಣ್ಣ ಗ್ವಾತಗಿ ಹಾಗೂ ಜಿಲ್ಲಾ ಕಾರ್ಯದರ್ಶಿ ರಮೇಶ ಮಸಬಿನಾಳ ಮಾತನಾಡಿ, ಪ್ರಧಾನಿ ಮೋದಿಯವರ ಜೀವನ ಮತ್ತು ಸಾಧನೆ ಪಕ್ಷದ ಕಾರ್ಯಕರ್ತರಿಗೆ ಪ್ರೇರಣೆಯಾಗಿದೆ. ಅವರ ನಾಯಕತ್ವದಲ್ಲಿ ಜಾಗತಿಕ ವೇದಿಕೆಗಳಲ್ಲಿ ಭಾರತದ ಹೊಸನೋಟ ಹಾಗೂ ಕಲ್ಯಾಣ ಯೋಜನೆಗಳನ್ನು ಇಂದು ಗ್ರಾಮೀಣ ಭಾರತದ ಜನತೆಗೆ ತಿಳಿಸುವುದು ಅಗತ್ಯವಾಗಿದೆ ಎಂದರು.
ಜಿಲ್ಲಾ ಸಂಚಾಲಕ ಗೋಪಾಲ ಘಟಕಾಂಬಳೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಈರಣ್ಣ ರಾವೂರ, ಸಾಬು ಮಾಶ್ಯಾಳ ಮಾತನಾಡಿದರು.
ನಂತರ ಬೂತ್ ಅಧ್ಯಕ್ಷರ ಮನೆಗಳಿಗೆ ಭೇಟಿ ನೀಡಿ ಆನಂತರ ಅತಿವೃಷ್ಟಿಯಿಂದ ಹಾಳಾದ ಬೆಳೆಗಳ ವೀಕ್ಷಣೆ ಕೈಗೊಂಡರು.
ರೈತ ಮೋರ್ಚಾ ಪ್ರಧಾನಕಾರ್ಯದರ್ಶಿ ಬಾಲರಾಜ್ ರೆಡ್ಡಿ, ಅಶ್ವಿನಿ ಪಟ್ಟಣಶೆಟ್ಟಿ, ಭಾರತಿ ಭುಯ್ಯಾರ, ಜಿಲ್ಲಾ ಸಹ ಸಂಚಾಲಕ ರಾಜೇಶ ತಾವ್ಸೆ, ಪ್ರಕಾಶ ದೊಡ್ಡಮನಿ, ಮಹಾಂತೇಶ ಬಿರಾದಾರ, ದಾವೂದ್ ಇನಾಮದಾರ, ಸೋಮು ದೇವೂರ, ಕಲ್ಮೇಶ ಬುದ್ನಿ, ವಿಠ್ಠಲ ಯಂಕಂಚಿ, ಶ್ರೀಮಂತ ತಳವಾರ, ರಮೇಶ ಹಂಚಲಿ, ಭೀಮನಗೌಡ ಲಚ್ಯಾಣ, ಪಿಂಟೂ ಬಾಸುತ್ಕರ್, ನಿಂಗನಗೌಡ ಬಿರಾದಾರ ಇದ್ದರು.