ಉದಯರಶ್ಮಿ ದಿನಪತ್ರಿಕೆ
ಆಲಮೇಲ: ಬಳಗಾನೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಬಾಲಭಾರತಿ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುತ್ತಾರೆ.
ಈ ವೇಳೆ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ ಮಾಡಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಎಸ್.ಆಯ್.ಜೋಗೂರ, ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಸತತ ಪ್ರಯತ್ನದ ಫಲವಾಗಿ ಕ್ರೀಡಾ ಸ್ಪೂರ್ತಿ ಇಟ್ಟುಕೊಂಡು ಆಟ ಆಡಿದ್ದರಿಂದ ಓಟ, ಉದ್ದ ಜಿಗಿತ ಹಾಗೂ ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ ಆಗಿರುವುದು ಸಂತಸ ತಂದಿದೆ. ವಿದ್ಯಾರ‍್ಥಿಗಳು ಆಟ ಹಾಗೂ ಪಾಠಗಳನ್ನು ಸಮಾನವಾಗಿ ತೆಗೆದುಕೊಂಡು ಯಶಸ್ಸು ಸಾಧಿಸಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ ಮಾತನಾಡಿ, ಕ್ರೀಡಾ ಸ್ಪೂರ್ತಿಯಿಂದ ಆಟ ಆಡಿದ ವಿದ್ಯಾರ್ಥಿಗಳು ಹಾಗೂ ಸತತವಾಗಿ ತರಬೇತಿ ನೀಡಿದ ಕ್ರೀಡಾ ಶಿಕ್ಷಕಿಯರು ನಮ್ಮ ಶಾಲೆಯ ರತ್ನಗಳು ಇದ್ದಂತೆ ಎಂದು ಶ್ಲಾಘಿಸಿದರು.
ಈ ವೇಳೆ ಶಿಕ್ಷಕರಾದ ಚಂದ್ರಕಾಂತ ದೇವರಮನಿ, ಲಕ್ಷ್ಮೀಬಾಯಿ ಹಳೇಮನಿ, ಸುವರ‍್ಣ ಸಾರಂಗಮಠ, ಸೀತಾ ಆರೇಶಂಕರ, ಸರುಬಾಯಿ ಬಂಡಗರ, ಸುನೀತಾ ಗುಂಡದ, ವೀಣಾ ರಾಂಪೂರಮಠ, ರಕ್ಷೀತಾ ಹಡಪದ ಮುಂತಾದವರು ಉಪಸ್ಥಿತರಿದ್ದರು