Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಿಮ್ಮಲಗಿ ಉಪಕಾಲುವೆಗೆ ನೀರು ಹರಿಸಿ :ಎಂಎಲ್ಸಿ ಸುನೀಲಗೌಡ
(ರಾಜ್ಯ ) ಜಿಲ್ಲೆ

ಚಿಮ್ಮಲಗಿ ಉಪಕಾಲುವೆಗೆ ನೀರು ಹರಿಸಿ :ಎಂಎಲ್ಸಿ ಸುನೀಲಗೌಡ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ದೇವರ ಹಿಪ್ಪರಗಿ ಮತಕ್ಷೇತ್ರದ ನಾನಾ ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಚಿಮ್ಮಲಗಿ ಏತ ನೀರಾವರಿ ಯೋಜನೆಯ ನಾಗಠಾಣ ಉಪಕಾಲುವೆ ಮೂಲಕ ಕೆರೆಗಳಿಗೆ ನೀರು ಹರಿಸುವಂತೆ ಕೆಬಿಜೆಎನ್ಎಲ್ ಆಲಮಟ್ಟಿ ಮತ್ತು ರಾಂಪೂರ ವಿಭಾಗದ ಅಧಿಕಾರಿಗಳಿಗೆ ವಿಧಾನ ಪರಿಷತ ಸದಸ್ಯ ಸುನೀಲಗೌಡ ಪಾಟೀಲ ಸೂಚನೆ ನೀಡಿದ್ದಾರೆ.
ಕಾಂಗ್ರೆಸ್ ಮುಖಂಡ ಡಾ. ಪ್ರಭುಗೌಡ ಲಿಂಗದಳ್ಳಿ ಚಬನೂರ ನೇತೃತ್ವದಲ್ಲಿ ದೇವರ ಹಿಪ್ಪರಗಿ ಮತಕ್ಷೇತ್ರದ ನಾನಾ ಗ್ರಾಮಸ್ಥರು ವಿಜಯಪುರದಲ್ಲಿ ಸುನೀಲಗೌಡ ಪಾಟೀಲ ಅವರನ್ನು ಇಂದು ಬುಧವಾರ ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮಸ್ಥರು ದೇವರ ಹಿಪ್ಪರಗಿ, ಹರನಾಳ, ಇಂಗಳಗಿ, ಮುಳಸಾವಲಗಿ, ಕಡ್ಲೇವಾಡ ಪಿ.ಸಿಎಚ್. ಚಿಕ್ಕರೂಗಿ, ಗಂಗನಳ್ಳಿ, ನಿವಾಳಖೇಡ, ಅಂಕಲಗಿ, ಜಂಬಗಿ ಮುಂತಾದ ಗ್ರಾಮಗಳ ಕೆರೆಗಳಿಗೆ ನೀರು ಹರಿಸಬೇಕು. ಇದರಿಂದ ನಮ್ಮ ಭಾಗದಲ್ಲಿ ಜನ ಮತ್ತು ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರಾದ ಡಾ. ಪ್ರಭುಗೌಡ ಲಿಂಗದಳ್ಳಿ ಚಬನೂರ, ಅಜೀಜ್ ಯಲಗಾರ ಹಾಗೂ ಶಂಕರಗೌಡ ಕೋಟಿಖಾನೆ ಅವರು, ಎಂ. ಬಿ. ಪಾಟೀಲ ಅವರು ಈ ಹಿಂದೆ ಜಲಸಂಪನ್ಮೂಲ ಸಚಿವರಾಗಿದ್ದಾಗ ಮಾಡಿರುವ ನೀರಾವರಿ ಯೋಜನೆಯಿಂದಾಗಿ ನಮ್ಮ ಭಾಗದ ರೈತರು ಗುಳೆ ಹೋಗುವುದು ತಪ್ಪಿದೆ. ಈ ಬಾರಿ ಬರ ಮತ್ತು ಕೆರೆಗಳಿಗೆ ನೀರು ಹರಿಸದ ಕಾರಣ ಕುಡಿಯುವ ನೀರಿಗೂ ತೀವ್ರ ತೊಂದರೆಯಾಗಿದೆ. ಕೂಡಲೇ ಕೆರೆಗಳಿಗೆ ನೀರು ಹರಿಸದಿದ್ದರೆ ಮತ್ತೆ ನಾವು ಗುಳೆ ಹೋಗುವ ಪರಿಸ್ಥಿತಿ ಎದುರಾಗಲಿದೆ ಎಂದು ಅಳಲು ತೋಡಿಕೊಂಡರು.
ಆಗ ರೈತರ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸಿದ ಸುನೀಲಗೌಡ ಪಾಟೀಲ ಅವರು, ಕೆಬಿಜೆಎನ್ಎಲ್ ಆಲಮಟ್ಟಿ ಮತ್ತು ರಾಂಪೂರ ವಿಭಾಗದ ಹಿರಿಯ ಅಧಿಕಾರಿಗಳಿಗೆ ಮೊಬೈಲ್ ಕರೆ ಮಾಡಿ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ನಾನಾ ರೈತ ಮುಖಂಡರಾದ ಬಸೀರ ಅಹ್ಮದ ಬೇಪಾರಿ, ಶ್ರಿಮಂತ ತಳವಾರ, ರೇವಣಯ್ಯ ಮಠ, ಸಾಹೇಬಗೌಡ ರೆಡ್ಡಿ, ಶಾಂತಗೌಡ ಕೊಣ್ಣೂರ, ಶ್ರೀಪತಿ ದಳವಾಯಿ, ಮಹಾದೇವಪ್ಪ ನಾಟೀಕಾರ, ನಿಂಗಣ್ಣ ಬಿರಾದಾರ, ಎ. ಎಂ. ಬಾಗವಾನ, ಡಾ. ಗುರುರಾಜ ಗಡೇದ, ಮುರ್ತುಜ ತಾಂಬೋಳಿ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public news udaya rashmi udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ

ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ

ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ

ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರದಲ್ಲಿ ಹಜ್ ಭವನ ನಿರ್ಮಾಣಕ್ಕೆ ಆಗ್ರಹ
    In (ರಾಜ್ಯ ) ಜಿಲ್ಲೆ
  • ಶಾಸಕ ಬಸನಗೌಡ ಸಿಎಂ ಆಗಲೆಂದು ಬಾಲಕರಿಂದ ಸೈಕಲ್ ಯಾತ್ರೆ
    In (ರಾಜ್ಯ ) ಜಿಲ್ಲೆ
  • ಉಪ ವಿಭಾಗಾಧಿಕಾರಿ ಹುದ್ದೆಗೆ ಬಡ್ತಿ ಪಡೆದ ಸಿದ್ಧರಾಯಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲೆ ಅಭಿವೃದ್ಧಿಗೆ ೩೭೧(ಜೆ) ಸೌಲಭ್ಯ ಕಲ್ಪಿಸಲು ಆಗ್ರಹ
    In (ರಾಜ್ಯ ) ಜಿಲ್ಲೆ
  • ಅಗತ್ಯ ಬಿದ್ದರೆ ಕಬ್ಬು ಬೆಳೆಗಾರರ ಪರ ಹೋರಾಟಕ್ಕೂ ಸಿದ್ಧ
    In (ರಾಜ್ಯ ) ಜಿಲ್ಲೆ
  • ಶಾಸಕರಿಂದ ನನಗೆ ಬಹಿರಂಗವಾಗಿ ಜೀವಬೆದರಿಕೆ :ರಜಪೂತ
    In (ರಾಜ್ಯ ) ಜಿಲ್ಲೆ
  • ರಾಷ್ಟ್ರೀಯ ಹೆದ್ದಾರಿ ತಡೆ – ಪಟ್ಟು ಬಿಡದ ರೈತ ಸಮೂಹ
    In (ರಾಜ್ಯ ) ಜಿಲ್ಲೆ
  • ಅಲ್ಪಸಂಖ್ಯಾತರ ಸರಳ ವಿವಾಹ ಸಹಾಯಧನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅಂಗನವಾಡಿ ಕಂ-ಕ್ರಷ್ ಕೇಂದ್ರಗಳ ಕಾರ್ಯಕರ್ತೆ-ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಕಿತ್ತೂರು ಚೆನ್ನಮ್ಮ ವಿಜಯ ಜ್ಯೋತಿ ಯಾತ್ರೆಗೆ ಸ್ವಾಗತ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.