ಉದಯರಶ್ಮಿ ದಿನಪತ್ರಿಕೆ
ಕೆಂಭಾವಿ: ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಜನಪ್ರಿಯತೆ ಹೊಂದಿರುವ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಗೊಳಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಜಾಗೃತರಾಗಬೇಕು ಎಂದು ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ ಸಿದ್ದಲಿಂಗ ರಾಠೋಡ್ ಹೇಳಿದರು.
ಪಟ್ಟಣದ ಶ್ರೀಮತಿ ಗಂಗೂಬಾಯಿ ಶಾಂತಗೌಡ ಪೋಲೀಸ್ ಪಾಟೀಲ್ ಮೆಮೋರಿಯಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಸೋಮವಾರ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ವಿಶ್ವದ ಪ್ರಜೆಗಳಾಗಿ ವಿಶ್ವದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಯುವಜನತೆ ಎಚ್ಚೆತ್ತುಕೊಳ್ಳಿ ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ಡಾ ನಾಗಪ್ಪ ಚಾವಲ್ಕರ್ ಮಾತನಾಡಿ ಪ್ರತಿ ವರ್ಷವೂ ಸೆಪ್ಟೆಂಬರ್ 15 ರಂದು ಆಚರಿಸಲಾಗುವ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅರ್ಥಪೂರ್ಣವಾದುದು, ಎಲ್ಲಾ ದಾನಗಳಲ್ಲಿ ಮತದಾನದ ಶ್ರೇಷ್ಠವಾದದ್ದು. ವಿದ್ಯಾರ್ಥಿಗಳು ಯಾವುದೇ ಆಸೆ ಆಮಿಷಗಳಿಗೆ ಬಲಿಯಾಗದೆ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಮೂಲಕ ಕಡ್ಡಾಯ ಮತದಾನದ ಪ್ರಕ್ರಿಯೆಯಲ್ಲಿ ಭಾಗವಹಿಸಿದರೆ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತಷ್ಟು ಬಲಗೊಳ್ಳಲು ಸಾಧ್ಯ ಎಂದರು.
ಪ್ರಮುಖರಾದ ಕಾಲೇಜು ಸಿಡಿಸಿ ಸದಸ್ಯ ಡಾ ಯಂಕನಗೌಡ ಪಾಟೀಲ, ದೈಹಿಕ ನಿರ್ದೇಶಕ ಡಾ ಪ್ರಸಾದ ಭಂಡಾರಿ, ಗಣಕ ವಿಜ್ಞಾನದ ಮುಖ್ಯಸ್ಥೆ ಡಾ ಪೂಜಾ ಹೊನ್ನುಟಗಿ, ಸಮಾಜ ಶಾಸ್ತ್ರದ ಮುಖ್ಯಸ್ಥೆ ನಸ್ರೀನ್ ತಾಜ್, ಕನ್ನಡ ವಿಭಾಗದ ಮುಖ್ಯಸ್ಥ ಮಲ್ಲಿಕಾರ್ಜುನ ಮರಡ್ಡಿ, ಬೋಧಕೇತರ ಸಿಬ್ಬಂದಿ ಸಂಗಮೇಶ ಪಟ್ಟಣಕರ್, ಮಾಸುಮ ಅಲಿ ನಾಶಿ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮಕ್ಕೂ ಮುನ್ನ ವಿದ್ಯಾರ್ಥಿಗಳಿಗೆ ಸಂವಿಧಾನದ ಪೂರ್ವ ಪೀಠಿಕೆ ಪ್ರತಿಜ್ಞೆ ವಿಧಿ ಬೋಧಿಸಿಲಾಯಿತು.

