ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪ್ರಜಾಪ್ರಭುತ್ವದ ಆಶಯಗಳ ರಕ್ಷಣೆ, ಆದರ್ಶಗಳನ್ನು ಪಾಲನೆ ಮಾಡುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಪ್ರಾಚಾರ್ಯೆ ಡಾ. ರಾಬಿಯಾ. ಎಂ. ಮಿರ್ಧೆ ಹೇಳಿದರು.
ನಗರದ ಬಿ ಎಲ್ ಡಿ ಇ ಸಂಸ್ಥೆಯ ಎಸ್. ಬಿ. ಕಲಾ ಮತ್ತು ಕೆ. ಸಿ. ಪಿ. ವಿಜ್ಞಾನ ಕಾಲೇಜಿನಲ್ಲಿ ಐಕ್ಯೂಎಸಿ, ರಾಜ್ಯಶಾಸ್ತ್ರ ವಿಭಾಗ, ಮಾನವ ಹಕ್ಕುಗಳ ರಕ್ಷಣಾ ಕೋಶ ಹಾಗೂ ಸಮಾನ ಅವಕಾಶ ಕೋಶಗಳ ಸಹಯೋಗದಲ್ಲಿ ಸೋಮವಾರ ಅಯೋಜಿಸಲಾದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ವಿಶ್ವದ ಗಣತಂತ್ರದ ದೇಶಗಳಲ್ಲಿನ ಜನರಲ್ಲಿ ಜಾಗೃತಿ ಮೂಡಿಸಲು,ಪ್ರಜಾಪ್ರಭುತ್ವದ ಆಶಯಗಳನ್ನು ಗೌರವಿಸುವ ಸಲುವಾಗಿ ಜಾಗತಿಕವಾಗಿ ಪ್ರತಿ ವರ್ಷ ಸೆ.೧೫ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು.
ಈ ವೇಳೆಯಲ್ಲಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ತರನ್ನುಮ್ ಜಬೀನ್ ಖಾನ್ ಮಾತನಾಡಿ, ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಆಶಯ ಮತ್ತು ಮಹತ್ವದ ಬಗ್ಗೆ ಹೇಳಿ, ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಮಹಾವಿದ್ಯಾಲಯದ ಮಾನವ ಹಕ್ಕುಗಳ ರಕ್ಷಣಾ ಕೋಶದ ಅಧ್ಯಕ್ಷ ಡಾ.ಧರ್ಮಗುರು ಪ್ರಸಾದ್, ಸಮಾನ ಅವಕಾಶ ಕೋಶದ ಅಧ್ಯಕ್ಷ ಡಾ. ಎಸ್. ಎನ್. ಉಂಕಿ, ರೂಪಾ ಎಸ್. ಮೋಟಗಿ, ಭೀಮಸಿ ಎಂ. ಮದರಖಂಡಿ, ಅಮೋಗಿ ಪಿ.ಯಂಕವಗೋಳ್, ಇನ್ನಿತರ ಮಹಾವಿದ್ಯಾಲಯದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

