ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ನಗರದ ಬಿ.ಎಲ್.ಡಿ.ಇ.ಎಲ್.ಡಿ.ಇ. ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ನಲ್ಲಿ ಎಂಜಿನಿಯರ್ ದಿನಾಚರಣೆ ಅಂಗವಾಗಿ ಬಿ.ಎಲ್.ಡಿಇ ವೈದ್ಯಕೀಯ ಆಸ್ಪತ್ರೆಯ ಸಹಯೋಗದಲ್ಲಿ ಸೋಮವಾರ ರಕ್ತದಾನ ಶಿಬಿರ ನಡೆಯಿತು.
ಈ ಸಂದರ್ಭದಲ್ಲಿ ಮತನಾಡಿದ ಕಾಲೇಜಿನ ಪ್ರಾಚಾರ್ಯ ಪಿ. ಬಿ. ಕಳಸಗೊಂಡ, ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರು ಕನ್ನಡಿಗರಾಗಿದ್ದು, ಅವರ ಜನ್ಮದಿನದಂದು ಎಂಜಿನಿಯರ್ಸ್ ದಿನ ಆಚರಿಸುವುದು ಹೆಮ್ಮೆಯ ವಿಷಯವಾಗಿದೆ. ಬಡತನವನ್ನು ಮೆಟ್ಟಿನಿಂತು ಕಷ್ಟಪಟ್ಟು ಅಂದು ಎಂಜಿನಿಯರಿಂಗ್ ಪದವಿ ಪಡೆದು ತಮ್ಮ ಕಾಯಕದ ಮೂಲಕ ದೇಶದ ಅಭಿವೃದ್ಧಿಗೆ ಅವರದೇ ಆದ ಕೊಡುಗೆ ನೀಡಿದ್ದಾರೆ. ತಮ್ಮ ಜನ್ಮದಿನವನ್ನು ರಾಷ್ಟ್ರೀಯ ಎಂಜಿನಿಯರ್ ದಿನವನ್ನಾಗಿ ಆಚರಿಸುವಂತೆ ಕರೆ ನೀಡಿದ್ದು, ಅವರು ತಮ್ಮ ವೃತ್ತಿ ಮತ್ತು ವೃತ್ತಿ ಬಾಂಧವರ ಬಗ್ಗೆ ಹೊಂದಿರುವ ಪ್ರೀತಿ, ವಿಶ್ವಾಸ, ಕಾಳಜಿಗೆ ಸಾಕ್ಷಿಯಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಯೋಜನೆ ಸಂಯೋಜನಾಧಿಕಾರಿ ಆನಂದ ಚವ್ಹಾಣ, ಎಂ. ಎಸ್. ಹಿರೇಮಠ, ಕಾಲೇಜಿನ ಎಲ್ಲ ವಿಭಾಗಗಳ ಮುಖ್ಯಸ್ಥರು, ಬೋಧಕ ಬೋಧಕರ ಹೊರತಾದ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.