ವಿಜಯಪುರ: ಉತ್ತಮ ನಾಳೆಗಾಗಿ ಎಂಟಿ-ಬಯೋಟಿಕ್ಸ್ ಉಳಿಸಿ ಕುರಿತು ಕಾರ್ಯಕ್ರಮ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಅಕ್ಟೋಬರ 6ರಂದು ಬೆಳಿಗ್ಗೆ 10.45ಕ್ಕೆ ನಡೆಯಲಿದೆ.
ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಮೈಕ್ರೋ ಬಯಾಲಜಿ ವಿಭಾಗದ ಮುಖ್ಯಸ್ಥೆ ಡಾ. ಅನ್ನಪೂರ್ಣಾ ಸಜ್ಜನ, ಅ. 6 ರಂದು ಶುಕ್ರವಾರ ವೈದ್ಯಕೀಯ ಶಿಕ್ಷಣ ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಡಾ. ಆರ್. ಎಸ್. ಮುಧೋಳ, ಸಮಕುಲಪತಿ ಡಾ. ಅರುಣ ಚಂ. ಇನಾಮದಾರ, ರಜಿಸ್ಟ್ರಾರ್ ಡಾ. ರಾಘವೇಂದ್ರ ಕುಲಕರ್ಣಿ, ಪ್ರಾಚಾರ್ಯ ಡಾ. ಅರವಿಂದ ವಿ. ಪಾಟೀಲ, ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ, ಕಾರ್ಯಕ್ರಮದ ಸಂಘಟನಾ ಕಾರ್ಯದರ್ಶಿ ಡಾ. ಲಕ್ಷ್ಮಿ ಕಾಖಂಡಕಿ ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದ್ದಾರೆ.
Related Posts
Add A Comment