ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪಟ್ಟಣದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆಯ ಅಂಗ ಸಂಸ್ಥೆಯಾದ ಶ್ರೀ ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಸೆ.೧೬ರಂದು ಬೆಳಿಗ್ಗೆ ೧೦ಗಂಟೆಗೆ ಪಠ್ಯಪೂರಕ ಚಟುವಟಿಕೆಗಳ ಉದ್ಘಾಟನೆ ಹಾಗೂ ಉಚಿತ ಪುಸ್ತಕ ವಿತರಣಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಪ್ರಾಚಾರ್ಯ ಎಸ್.ಎಮ್.ಪೂಜಾರಿ ತಿಳಸಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಸಂಸ್ಥೆಯ ಚೇರಮನ್ನರು ಹಾಗೂ ಸಾರಂಗಮಠದ ಪೀಠಾಧಿಪತಿ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ನೆರವೇರಿಸಲಿದ್ದಾರೆ. ಸಾನಿಧ್ಯವನ್ನು ಸಾರಂಗಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು ವಹಿಸುವರು. ಅಧ್ಯಕ್ಷತೆಯನ್ನು ಪ್ರಾಚಾರ್ಯ ಎಸ್.ಎಂ.ಪೂಜಾರಿ ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮವಿವಿ ಕುಲಸಚಿವರಾದ ಶಂಕರಗೌಡ ಎಸ್.ಸೋಮನಾಳ ಆಗಮಿಸಲಿದ್ದಾರೆ. ಅತಿಥಿಗಳಾಗಿ ಸಂಸ್ಥೆಯ ಸಹ ಕಾರ್ಯದರ್ಶಿ ಅಶೋಕ ವಾರದ, ಉಪಸ್ಥಿತಿಯನ್ನು ನಿವೃತ್ತ ದೈಹಿಕ ಉಪನ್ಯಾಸಕ, ಸಾಹಿತಿ ಎಂಜೆಎಫ್ ಲಾಯನ್ ಕೆ.ಹೆಚ್.ಸೋಮಾಪೂರ ವಹಿಸುವರು. ವಿದ್ಯಾರ್ಥಿ ಒಕ್ಕೂಟ ಕಾರ್ಯಾಧ್ಯಕ್ಷೆ ಜಿ.ವಿ.ಪಾಟೀಲ, ಪ್ರಧಾನ ಕಾರ್ಯದರ್ಶಿ ಸಂಗಮ್ಮ ಪೂಜಾರಿ ವೇದಿಕೆಯ ಮೇಲೆ ಇರಲಿದ್ದಾರೆ ಎಂದು ಪತ್ರಿಕಾ ವಿಭಾಗದ ಕಾರ್ಯಾಧ್ಯಕ್ಷ ಮಹಾಂತೇಶ ನೂಲಾನವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.