ಬಸವನಬಾಗೇವಾಡಿ: ಧಾರ್ಮಿಕ ಕ್ಷೇತ್ರದಲ್ಲಿ ಹಾನಗಲ್ಲ ಕುಮಾರ ಸ್ವಾಮೀಜಿ ಅವರ ಜಯಂತ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಶ್ಲಾಘನೀಯ. ಕುಮಾರ ಸ್ವಾಮೀಜಿ ಅವರು ಶಿವಯೋಗ ಮಂದಿರ ಸ್ಥಾಪನೆ ಮಾಡುವ ಮೂಲಕ ಅನೇಕ ಮಠಾಧೀಶರನ್ನು ಈ ನಾಡಿಗೆ ನೀಡಿದ್ದಾರೆ. ಧಾರ್ಮಿಕ, ಸಾಮಾಜಿಕ ಕಾರ್ಯದಲ್ಲಿ ಅವರು ಸಲ್ಲಿಸಿದ ಸೇವೆ ಸದಾ ಸ್ಮರಣೀಯವಾಗಿದೆ ಎಂದು ಗದಗ, ಡಂಬಳದ ಯಡಿಯೂರು ಸಂಸ್ಥಾನ ಮಠದ ಡಾ.ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.
ಪಟ್ಟಣದ ಬಸವೇಶ್ವರ ದೇವಾಲಯದ ಅಂತರಾಷ್ಟ್ರೀಯ ಶಾಲೆಯ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಹಾನಗಲ್ಲ ಕುಮಾರ ಸ್ವಾಮೀಜಿ ಅವರ 156ನೇ ಜಯಂತ್ಯೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಜವಳಿ, ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಮಾತನಾಡಿ, ಗುರು ವಿರಕ್ತರನ್ನು ಬೇಸುಗೆ ಮಾಡಿದ ಕುಮಾರ ಸ್ವಾಮೀಜಿಯವರ ಕುರಿತ 10 ದಿನಗಳ ವರೆಗೆ ಪ್ರವಚನ ಮೂಲಕ ಅವರ ಜೀವನ ಸಾಧನೆಗಳನ್ನು ತಿಳಿಸುವ ಕಾರ್ಯ ಪಟ್ಟಣದಲ್ಲಿ ನಡೆಸುವ ಮೂಲಕ ಹೆಚ್ಚಿನ ಸಂಖ್ಯೆಯ ಜನರು ಧಾರ್ಮಿಕ ಕಾರ್ಯದಲ್ಲಿ ತೊಡಗುವಂತೆ ಜಯಂತ್ಯೋತ್ಸವ ಸಮಿತಿಯವರು ಮಾಡಿದ್ದಾರೆ.
ಮಹಿಳೆಯಿಂದ ಮನೆಯಲ್ಲಿ ಉತ್ತಮ ಸಂಸ್ಕಾರ ಬೆಳೆಯುತ್ತವೆ. ಸಂಸ್ಕಾರ ಪಡೆದ ಮಕ್ಕಳು ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಳ್ಳುತ್ತಾರೆ. ಮುಂಬರುವ ದಿನಗಳಲ್ಲಿ ಪಟ್ಟಣವು ಧಾರ್ಮಿಕ ಕಾರ್ಯಕ್ರಮದ ಮೂಲಕ ಮೂಲಕ ಗುರುತಿಸಿಕೊಳ್ಳಲಿದೆ ಎಂದು ಹೇಳಿದರು.
ಪ್ರವಚನಕಾರ ಉಪ್ಪಿನ ಬೇಟಗೇರಿಯ ಕುಮಾರ ವೀರೂಪಾಕ್ಷಿ ಸ್ವಾಮೀಜಿ ಮಾತನಾಡಿದರು.
ಮುರಘೇಂದ್ರ ಸ್ವಾಮೀಜಿ, ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಮಾತನಾಡಿದರು.
ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಗುರುಪಾದೇಶ್ವರ ಶಿವಾಚಾರ್ಯ ಸ್ವಾಮೀಜಿ, ಚನ್ನಬಸವ ಸ್ವಾಮೀಜಿ, ಸಿದ್ಧರಾಮ ಸ್ವಾಮೀಜಿ, ಕಲ್ಲಿನಾಥ ದೇವರು, ಚರಲಿಂಗೇಶ್ವರ ಸ್ವಾಮೀಜಿ, ಈರಣ್ಣ ಪಟ್ಟಶೆಟ್ಟಿ, ಬಸವರಾಜ ಹಾರಿವಾಳ, ಅನಿಲ ಅಗರವಾಲ, ಎಸ್.ಎಸ್.ಝಳಕಿ, ಶೇಖರ ಗೊಳಸಂಗಿ, ಸುರೇಶ ಹಾರಿವಾಳ, ಸಂಗಮೇಶ ಓಲೇಕಾರ ಇದ್ದರು.
ಗುರುಪಾದೇಶ್ವರ ಶಿವಾಚಾರ್ಯ ಸ್ವಾಮೀಜಿ ಸ್ವಾಗತಿಸಿದರು, ಎಚ್.ಬಿ.ಬಾರಿಕಾಯಿ ನಿರೂಪಿಸಿದರು.
Related Posts
Add A Comment