ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ವತಿಯಿಂದ ಕರ್ನಾಟಕ ರಾಜ್ಯ ಕೌಶಲ್ಯ ಓಲಿಂಪಿಕ್ಸ್–೨೦೨೫ನ್ನು ಆಯೋಜಿಸಲಾಗಿದೆ. ೧೬ ರಿಂದ ೨೫ ವರ್ಷದ ಯುವಜನತೆ ೬೩ಕ್ಕೂ ಹೆಚ್ಚು ಕೌಶಲ್ಯದ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸುವ ಅವಕಾಶವಿದೆ. ಜಿಲ್ಲಾಮಟ್ಟದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸುಧಾರಿತ ತರಬೇತಿ ನೀಡಿ ವಿಭಾಗ ಮಟ್ಟ ಮತ್ತು ರಾಜ್ಯ ಮಟ್ಟಕ್ಕೆ ಆಯ್ಕೆ ಮಾಡಲಾಗುತ್ತಿದೆ. ೨೦೨೬ನೇ ಸಾಲಿನ ವಿಶ್ವ ಕೌಶಲ್ಯ ಸ್ಪರ್ಧೆ ಚೀನಾದ ಶಾಂಘೈ ನಗರದಲ್ಲಿ ನಡೆಯಲಿದೆ. ಇದರಲ್ಲಿ ಭಾರತವನ್ನು ಪ್ರತಿನಿಧಿಸಲು ಅವಕಾಶವಿರುತ್ತದೆ. ಈ ಕೌಶಲ್ಯ ಸ್ಪರ್ಧೆಗೆ hಣಣಠಿ://ತಿತಿತಿ.sಞiಟಟiಟಿಜiಚಿಜigiಣಚಿಟ.gov.iಟಿ/home ಲಿಂಕ್ ಬಳಸಿ ಸೆಪ್ಟೆಂಬರ್ ೩೦ರೊಳಗಾಗಿ ನೋಂದಾಯಿಸಿಕೊಳ್ಳಬಹುದು.
ಇತ್ತೀಚೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲಿ ಇಂಡಿಯಾ ಸ್ಕಿಲ್ಸ್-೨೦೨೫ರ ಕುರಿತ ಕರಪತ್ರವನ್ನು ಬಿಡುಗಡೆ ಮಾಡಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ವಿಶ್ವ ಕೌಶಲ್ಯ ಸ್ಪರ್ಧೆಯು ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುವ ವಿಶ್ವದ ಅತಿ ದೊಡ್ಡ ವೃತ್ತಿಪರ ಕೌಶಲ್ಯ ಸ್ಪರ್ಧೆಯಾಗಿದ್ದು, ಚೀನಾದ ಶಾಂಘೈ ನಗರದಲ್ಲಿ ೨೦೨೬ರಲ್ಲಿ ನಡೆಯಲಿದೆ. ಈ ಸ್ಪರ್ಧೆಯ ಭಾಗವಾಗಿ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಕರ್ನಾಟಕ ರಾಜ್ಯ ಕೌಶಲ್ಯ ಒಲಿಂಪಿಕ್ಸ್ ೨೦೨೫ನ್ನು ಪ್ರಾರಂಭಿಸಿದೆ. ಈ ಸ್ಪರ್ಧೆಯ ವಿಜೇತರಿಗೆ ಉನ್ನತ ಮಟ್ಟದ ತರಬೇತಿ ಮತ್ತು ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಅವರು ಭಾರತವನ್ನು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರತಿನಿಧಿಸುವ ಅವಕಾಶವನ್ನು ಪಡೆಯಲಿದ್ದಾರೆ. ಜಿಲ್ಲೆಯ ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತರು ಲಿಂಕ್ ಬಳಸಿಕೊಂಡು ನೋಂದಣಿ ಮಾಡಿಕೊಳ್ಳುವುದರ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಿ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಅಧಿಕಾರಿಯಾದ ಮಹೇಶ ಮಾಳವಾಡೇಕರ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕರಾದ ಮಹಾಂತೇಶ ಬಾಗೇವಾಡಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಕೆ.ಚವ್ಹಾಣ ಅವರು ಉಪಸ್ಥಿತರಿದ್ದರು.
ಈ ಕುರಿತಾಗಿ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಛೇರಿ,ಮಹಾ ನಗರ ಪಾಲಿಕೆ ಹತ್ತಿರ,ಬಾಗಲಕೋಟೆ ರಸ್ತೆ, ವಿಜಯಪುರ-೦೮೩೫೨-೨೯೭೦೧೯,ಮೊ: ೯೭೪೧೭೫೩೫೬೫, ಮೊ: ೮೨೧೭೬೧೫೨೫೭ ಹಾಗೂ ಮೊ: ೯೬೨೦೨೦೨೧೦೨ ಸಂಪರ್ಕಿಸಬಹುದಾಗಿದೆ ಎಂದು ಕೌಶಲ್ಯಾಭಿವೃದ್ಧಿ ಇಲಾಖೆಯ ಪ್ರಕಟಣೆ ತಿಳಿಸಿದೆ.

