ಉದಯರಶ್ಮಿ ದಿನಪತ್ರಿಕೆ
ತಿಕೋಟಾ: ಹದಿ ಹರೆಯದವರು ಆರೋಗ್ಯದ ಕುರಿತು ಕಾಳಜಿ ವಹಿಸಬೇಕು ಎಂದು ಸಮುದಾಯ ಆರೋಗ್ಯ ಕೇಂದ್ರದ ನಿರೀಕ್ಷಣಾಧಿಕಾರಿ ಲವ ಚವ್ಹಾಣ ಹೇಳಿದರು.
ತಾಲ್ಲೂಕಿನ ಘೋಣಸಗಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬುಧವಾರ ಸ್ವಸ್ತ ನಾರಿ ಸ್ವಶಕ್ತ ಪರಿವಾರ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಅಭಿಯಾನದ ಅಂಗವಾಗಿ ಎಲ್ಲ ಗರ್ಭಿಣಿ ಮಹಿಳೆಯರಿಗೆ ಹೆರಿಗೆಯ ಸಮಯದಲ್ಲಿ ಆಗುವ ತೊಡಕುಗಳ ಬಗ್ಗೆ ಮತ್ತು ರಕ್ತ ಹೀನತೆ, ರಕ್ತದೊತ್ತಡ ಮಧುಮೇಹ ಕ್ಯಾನ್ಸರ್, ಹದಿಹರೆಯದವರು ಸ್ವ ಕಾಳಜಿ ವಹಿಸಬೇಕು. ಸಮಾಜದಲ್ಲಿ ಮಹಿಳೆಯರು ಆರೋಗ್ಯವಂತ ಮತ್ತು ಸಬಲ ಜೀವನ ನಡೆಸಲು ಸ್ವಚ್ಛತೆಯ ಬಗ್ಗೆ ಜಾಗೃತಿ ತುಂಬಾ ಅವಶ್ಯಕವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಪ್ರಸವ ಪೂರ್ವ ಗರ್ಭಿಣಿ ಆರೈಕೆ ಮತ್ತು ಸಾಂಕ್ರಾಮಿಕ ಮತ್ತು ಅಸಾಂಕ್ರಾಮಿಕ ರೋಗಗಳ ತಪಾಸಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಅಂಜನಾ ಪವಾರ, ಸಮುದಾಯ ಆರೋಗ್ಯ ಅಧಿಕಾರಿ
ಜಮಾಲುದ್ದೀನ್ ಮುಲ್ಲಾ, ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

