ವಿಜಯಪುರ: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಶ್ರೀ ಶಹಜೀರಾಜೇ ಸಮೃದ್ದಿ ಯೋಜನೆ (ಸ್ವಯಂ ಉದ್ಯೊಗ ನೇರ ಸಾಲ ಮತ್ತು ಸಹಾಯಧನ), ಜೀಜಾವು-ಜಲಭಾಗ್ಯ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ರಾಜಶ್ರೀ ಶಾಹುಮಹಾರಾಜ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಸಾಲ ಯೋಜನೆ, ಮರಾಠ ಮಿಲ್ಟಿಹೋಟೆಲ್ ಯೋಜನೆ, ಸ್ವಯಂ ಉದ್ಯೋಗ (ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ), ಸ್ವಾವಲಂಬಿ ಸಾರಥಿ ಯೋಜನೆಯಡಿ ಸೇವಾಸಿಂಧು ಪೋರ್ಟ್ಲ್ : https://www.sevasindhu.karnataka.gov.in ಮೂಲಕ ಹಾಗೂ ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯಡಿ ಸೌಲಭ್ಯ ಪಡೆಯಲು ಕೌಶಲ್ಯ ಕರ್ನಾಟಕ ತಂತ್ರಾಂಶ(https://www.kaushalkar.com) ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅರ್ಹ ಅರ್ಜಿದಾರರು ದಿನಾಂಕ : ೩೦-೧೦-೨೦೨೩ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ : https://www.kmcdc.karnataka.gov.in ಹಾಗೂ ಸಹಾಯವಾಣಿ ೮೮೬೭೫೩೭೭೯೯, ದೂ:೦೮೦-೨೯೯೦೩೯೯೪ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕ ಕೆ.ಎಂ.ಭಾವಿಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮರಾಠ ಸಮುದಾಯ ಅಭಿವೃದ್ದಿ ನಿಗಮದಿಂದ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ
Related Posts
Add A Comment