Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಂತಿಮ ಹಂತ ತಲುಪಿದ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ

ಸರಕಾರಿ ಸೌಲಭ್ಯ ಸದ್ಬಳಕೆಯಿಂದ ಗುರಿ ತಲುಪಿ :ಬಿರಾದಾರ

ದೇವರಾಜ ಅರಸು ಚಿಂತನೆಗಳು ಇಂದಿಗೂ ಪ್ರಸ್ತುತ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಜೆಪಿ ಕಾರ್ಯಕರ್ತರಿಂದ ಪ್ರಧಾನಿ ಮೋದಿ ಜನ್ಮದಿನ ಅರ್ಥಪೂರ್ಣ ಆಚರಣೆ
(ರಾಜ್ಯ ) ಜಿಲ್ಲೆ

ಬಿಜೆಪಿ ಕಾರ್ಯಕರ್ತರಿಂದ ಪ್ರಧಾನಿ ಮೋದಿ ಜನ್ಮದಿನ ಅರ್ಥಪೂರ್ಣ ಆಚರಣೆ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಸ್ವಯಂ ಪ್ರೇರಿತ ರಕ್ತದಾನ ಶಿಬಿರ, ರೋಗಿಗಳಿಗೆ ಹಣ್ಣು-ಹಂಪಲು ವಿತರಣೆ ಸೇರಿದಂತೆ ವಿವಿಧ ರೀತಿಯ ಸೇವೆಯ ರೂಪದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿಜಿ ಅವರ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು.
ಬಿಜೆಪಿ ನಗರ ಮಂಡಳ ವತಿಯಿಂದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು. ಹಲವಾರು ಕಾರ್ಯಕರ್ತರು ರಕ್ತದಾನ ಮಾಡುವ ಮೂಲಕ ತಮ್ಮ ನೆಚ್ಚಿನ ನಾಯಕನಿಗೆ ಜನ್ಮದಿನದ ಶುಭಾಷಯ ಕೋರಿದರು. ೭೬ ಜನ ಕಾರ್ಯಕರ್ತರು ರಕ್ತದಾನ ಮಾಡಿದರು.
ಸಂಸದ ರಮೇಶ ಜಿಗಜಿಣಗಿ ನೇತೃತ್ವದಲ್ಲಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಅಲ್ಲಿ ರೋಗಿಗಳಿಗೆ ಹಣ್ಣು-ಹಂಪಲುಗಳನ್ನು ವಿತರಿಸಲಾಯಿತು.
ಈ ವೇಳೆ ಮಾತನಾಡಿದ ಸಂಸದ ರಮೇಶ ಜಿಗಜಿಣಗಿ ಮಾತನಾಡಿ, ನರೇಂದ್ರ ಮೋದಿ ನಾವು ಕಂಡ ಅದ್ಭುತ ಜನನಾಯಕ, ಕೇವಲ ಜನಸೇವೆಯನ್ನೇ ತಮ್ಮ ಬದುಕಿನ ಧ್ಯೇಯವಾಗಿಸಿಕೊಂಡು ಹೋರಾಟ ಹಾಗೂ ದಿವ್ಯ ದೇಶಭಕ್ತಿಯ ಮೂಲಕ ಈ ದೇಶದ ಚುಕ್ಕಾಣಿ ಹಿಡಿದಿರುವ ಈ ಅವಧಿಯಲ್ಲಿ ಭಾರತ ಅಭಿವೃದ್ಧಿಯಲ್ಲಿ ನಾಗಾಲೋಟ ಬೀರುತ್ತಿದೆ, ಮೊನ್ನೆಯಷ್ಟೇ ಜೀವನಾವಶಕ್ಯ ವಸ್ತುಗಳನ್ನು ಜಿಎಸ್‌ಟಿಯ ಪರಿಧಿಯಲ್ಲಿ ಹೊರಗಿಡುವ ಮೂಲಕ ದೊಡ್ಡ ಕೊಡುಗೆ ಕೊಟ್ಟಿದ್ದಾರೆ, ಕಪ್ಪುಹಣದ ಸಮರ ಸೇರಿದಂತೆ ಅನೇಕ ದಿಟ್ಟ ಹೆಜ್ಜೆಗಳನ್ನು ಇರಿಸಿದ ಮೋದಿ ನಮ್ಮ ಹೆಮ್ಮೆಯ ನಾಯಕ ಎಂದರು.
ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಪದೇ ಪದೇ ಮಾನವೀಯತೆ ವಿರೋಧಿಯಾಗಿ ನಡೆದುಕೊಳ್ಳುತ್ತಿರುವ ಉಗ್ರವಾದಿಗಳಿಗೆ ತಕ್ಕ ಪಾಠ ಕಲಿಸಿದ್ದು ಮೋದಿಜಿ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ಭಾರತವನ್ನು ವಿಶ್ವಗುರುವಾಗಿಸುವ ಏಕೈಕ ಸಂಕಲ್ಪದೊಂದಿಗೆ ಮುನ್ನಡೆಯುತ್ತಿರುವ ನರೇಂದ್ರ ಮೋದಿ ಅವರ ನಾಯಕತ್ವವನ್ನು ವಿಶ್ವವೇ ಮೆಚ್ಚಿದೆ ಎಂದರು.
ನಗರ ಮಂಡಳ ಅಧ್ಯಕ್ಷ ಸಂದೀಪ ಪಾಟೀಲ ಮಾತನಾಡಿದರು.
ಮೇಯರ್ ಎಂ.ಎಸ್. ಕರಡಿ, ಉಪ ಮೇಯರ್ ಸುಮಿತ್ರಾ ಜಾಧವ, ಪಕ್ಷದ ಬೆಳಗಾವಿ ವಿಭಾಗದ ಪ್ರಭಾರಿ ಚಂದ್ರಶೇಖರ್ ಕವಟಗಿ, ಮುಖಂಡರಾದ ವಿಜುಗೌಡ ಪಾಟೀಲ್, ಪ್ರಕಾಶ ಅಕ್ಕಲಕೋಟ, ಡಾ.ಸುರೇಶ್ ಬಿರಾದಾರ್, ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ್, ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ಗೋಪಾಲ ಘಟಕಾಂಬಳೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಳನಗೌಡ ಪಾಟೀಲ್, ಸಾಬು ಮಾಶ್ಯಾಳ, ಈರಣ್ಣ ರಾವೂರ, ಮಲ್ಲಿಕಾರ್ಜುನ ಜೋಗುರ, ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಣಿ ಸದಸ್ಯೆ ಮಲ್ಲಮ್ಮ ಜೋಗೂರ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸ್ವಪ್ನಾ ಕಣಮುಚನಾಳ, ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಪಾಪೂಸಿಂಗ ರಜಪೂತ, ಚಿನ್ನು ಚಿನಗುಂಡಿ, ವಿಜಯ ಜೋಶಿ ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಂತಿಮ ಹಂತ ತಲುಪಿದ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ

ಸರಕಾರಿ ಸೌಲಭ್ಯ ಸದ್ಬಳಕೆಯಿಂದ ಗುರಿ ತಲುಪಿ :ಬಿರಾದಾರ

ದೇವರಾಜ ಅರಸು ಚಿಂತನೆಗಳು ಇಂದಿಗೂ ಪ್ರಸ್ತುತ

‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ ಪುರಸ್ಕೃತ ಮಠೋಳಿ ಗೆ ಸನ್ಮಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಂತಿಮ ಹಂತ ತಲುಪಿದ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಸರಕಾರಿ ಸೌಲಭ್ಯ ಸದ್ಬಳಕೆಯಿಂದ ಗುರಿ ತಲುಪಿ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ದೇವರಾಜ ಅರಸು ಚಿಂತನೆಗಳು ಇಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ ಪುರಸ್ಕೃತ ಮಠೋಳಿ ಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕೇವಲ 5 ಗಂಟೆಯಲ್ಲೇ ೧೧ಎಕರೆ ಜಮೀನು ಹರಗಿದ ರೈತ ಗುರುಪಾದ
    In (ರಾಜ್ಯ ) ಜಿಲ್ಲೆ
  • 4 ದಿನ ಪೂರೈಸಿದ ಬಿಜೆಪಿ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಕೂಡಗಿ ಎನ್‌ಟಿಪಿಸಿಯಿಂದ ವಿಶೇಷಚೇತನರಿಗೆ ಸಾಧನಗಳ ವಿತರಣೆ
    In (ರಾಜ್ಯ ) ಜಿಲ್ಲೆ
  • ಎ.ವಿ.ಎಸ್. ಆಯುರ್ವೇದ ಕಾಲೇಜ್: ಆ.24 ರಿಂದ ಆರೋಗ್ಯ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಶ್ವಿನಿ ಹತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ :ನಿಮಾದಾರ
    In (ರಾಜ್ಯ ) ಜಿಲ್ಲೆ
  • ದುಶ್ಚಟಗಳ ಭಿಕ್ಷೆ, ಸದ್ಗುಣಗಳ ದೀಕ್ಷೆ: ಜನಜಾಗೃತಿ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.