ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ದೇಶದ ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಪಟ್ಟಣದ ಕಲ್ಮೇಶ್ವರನಿಗೆ ಅಭಿಷೇಕ ನೆರವೇರಿಸಿ ಪೂಜೆ ಸಲ್ಲಿಸುವುದರ ಮೂಲಕ ಅವರ ಆಯುಷ್ಯ, ಆರೋಗ್ಯ, ಯಶಸ್ಸಿಗಾಗಿ ಪ್ರಾರ್ಥಿಸಿದರು.
ಪಟ್ಟಣದ ಕಲ್ಮೇಶ್ವರ ದೇವಸ್ಥಾನಕ್ಕೆ ಭಾನುವಾರ ಬೆಳಿಗ್ಗೆ ೬ ಗಂಟೆಗೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಹಾಗೂ ನರೇಂದ್ರ ಮೋದಿಯವರ ಅಭಿಮಾನಿಗಳು ಅಭಿಷೇಕ ನೆರವೇರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಉಪಾಧ್ಯಕ್ಷ ಪ್ರಭುಗೌಡ ಬಿರಾದಾರ(ಅಸ್ಕಿ) ಮಾತನಾಡಿದರು.
ಜಿಲ್ಲಾ ಕಾರ್ಯದರ್ಶಿ ರಮೇಶ ಮಸಬಿನಾಳ, ಜಂಗಮಾಭಿವೃದ್ಧಿ ಸಂಘದ ತಾಲ್ಲೂಕು ಅಧ್ಯಕ್ಷ ಸೋಮಶೇಖರ ಹಿರೇಮಠ, ಬಿಜೆಪಿ ಕಾರ್ಯಕರ್ತರಾದ ಕಲ್ಮೇಶ ಬುದ್ನಿ, ಚೇತನ ಇಂಡಿ, ವಿಜಯಕುಮಾರ ಹಿರೇಮಠ, ಮಹಾಂತೇಶ ಬಿರಾದಾರ (ಡೋಣಿ ಬೂದಿಹಾಳ), ಪ್ರಶಾಂತ ಹೊನ್ನುಟಗಿ, ಶ್ರೀಶೈಲ ಯಂಭತ್ನಾಳ, ಪ್ರಕಾಶ ಡೋಣೂರ, ಸಚೀನ ಕೋರಿ, ಅಭಿಷೇಕ ಅಂಬಲಗಿ, ಪಿಂಟೂ ಭಾಸುತ್ಕರ್ ಇದ್ದರು.

