ದೇವರಹಿಪ್ಪರಗಿ: ಮತಕ್ಷೇತ್ರದಲ್ಲಿ ಬರುವ ಎಲ್ಲ ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಆರಂಭಗೊಂಡಿದ್ದು, ರೈತರು, ಜಾನುವಾರು ಹಾಗೂ ಸಾರ್ವಜನಿಕರಿಗೆ ಕುಡಿಯುವ ನೀರಿಗಾಗಿ ಅನೂಕೂಲ ಕಲ್ಪಿಸಲಾಗುತ್ತಿದೆ. ಕ್ಷೇತ್ರದ ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ (ಕುದರಿಸಾಲವಾಡಗಿ) ತಿಳಿಸಿದ್ದಾರೆ.
ಬುಧವಾರ ಶಾಸಕರ ಕಚೇರಿ ಮೂಲಕ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮತಕ್ಷೇತ್ರದ ಎಲ್ಲ ಕೆರೆಗಳನ್ನು ತುಂಬಿಸುವ ಸಲುವಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರಂತರ ಮಾತನಾಡಿ, ಕಳೆದ ಬಾರಿ ಹಲವು ಕೆರೆಗಳಿಗೆ ನೀರು ಹರಿದು ಹೊಗಿರುವುದಿಲ್ಲ. ಆದ ಕಾರಣ ಈ ಬಾರಿ ದೇವರಹಿಪ್ಪರಗಿ ಮತಕ್ಷೇತ್ರದ ಎಲ್ಲಾ ಕೆರೆಗಳಿಗೆ ನೀರು ಹರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ಕೆರೆಗಳ ತುಂಬುವ ವಿಷಯಕ್ಕಾಗಿ ಅಬಕಾರಿ ಸಚಿವರು ಹಾಗೂ ಕೃಷ್ಣಾ ಮೇಲ್ದಂಡೆ ಯೋಜನೆ ಸಲಹಾ ಸಮಿತಿ ಅಧ್ಯಕ್ಷರಾದ ಆರ್.ಬಿ. ತಿಮ್ಮಾಪೂರ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಅವರನ್ನು ಖುದ್ದಾಗಿ ಭೇಟಿಯಾಗಿ ಒತ್ತಡ ಹಾಕಲಾಗಿದೆ. ಸಚಿವರು ಸಹ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುತ್ತಾರೆ. ಪ್ರತಿದಿನ ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದೇನೆ. ನೀರಾವರಿಗಾಗಿ ನಾನು ವಿಶೇಷ ಕಾಳಜಿ ವಹಿಸುತ್ತೇನೆ ಎಂದು ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

