Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಂತಿಮ ಹಂತ ತಲುಪಿದ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ

ಸರಕಾರಿ ಸೌಲಭ್ಯ ಸದ್ಬಳಕೆಯಿಂದ ಗುರಿ ತಲುಪಿ :ಬಿರಾದಾರ

ದೇವರಾಜ ಅರಸು ಚಿಂತನೆಗಳು ಇಂದಿಗೂ ಪ್ರಸ್ತುತ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರವನ್ನ ಬ್ಲ್ಯಾಕ್‌ಮೇಲ್‌ ಮಾಡೋಕೆ ಬರಬೇಡಿ :ಡಿಸಿಎಂ
(ರಾಜ್ಯ ) ಜಿಲ್ಲೆ

ಸರ್ಕಾರವನ್ನ ಬ್ಲ್ಯಾಕ್‌ಮೇಲ್‌ ಮಾಡೋಕೆ ಬರಬೇಡಿ :ಡಿಸಿಎಂ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಂಗಳೂರಿನ ಸೌಲಭ್ಯಗಳ ಬಗ್ಗೆ ಅಸಮಾಧಾನವಿದ್ದರೆ ಕಂಪನಿಗಳು ತೊರೆಯಲು ಸ್ವತಂತ್ರ | ಹೋಗೋರನ್ನ ತಡೆಯಲ್ಲ | ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

ಬೆಂಗಳೂರು: ಮಹಾನಗರದ ಸೌಲಭ್ಯಗಳ ಬಗ್ಗೆ ಅಸಮಾಧಾನವಿದ್ದರೆ ಕಂಪನಿಗಳು ತೊರೆಯಲು ಸ್ವತಂತ್ರವಾಗಿವೆ. ಆದರೆ ಸರ್ಕಾರಕ್ಕೆ ಬೆದರಿಕೆ ಹಾಕಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಗುರುವಾರ ಹೇಳಿದ್ದಾರೆ.
ರಾಷ್ಟ್ರೀಯ ಮಾಧ್ಯಮವೊಂದರ ಜೊತೆ ಸಂದರ್ಶನದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ‘ನಗರದ ಮೂಲಸೌಕರ್ಯಗಳನ್ನು ಸರಿಪಡಿಸಲು ಸರ್ಕಾರ ಬದ್ಧವಾಗಿದೆ. ರಸ್ತೆ ಗುಂಡಿಗಳನ್ನು ಮುಚ್ಚಲು ನವೆಂಬರ್ ಗಡುವು ನೀಡಲಾಗಿದೆ. ಬೆಂಗಳೂರಿನ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ’ ಎಂದರು.
ಇದೇ ವೇಳೆ ಉದ್ಯಮಿಗಳ ಬೆಂಗಳೂರು ತೊರೆಯುವ ಟ್ವೀಟ್ ಕುರಿತು ಮಾತನಾಡಿದ ಡಿಕೆ ಶಿವಕುಮಾರ್, ‘ಬೆಂಗಳೂರಿನ ಬಗ್ಗೆ ತೃಪ್ತಿ ಇಲ್ಲವೆಂದು ಹೋಗೋರನ್ನ ತಡೆಯಲ್ಲ. ಆದರೆ, ಸರ್ಕಾರಕ್ಕೆ ಬೆದರಿಸಲು, ಬ್ಯಾಕ್‌ಮೇಲ್‌ ಮಾಡೋಕೆ ಬರಬೇಡಿ. ಕಂಪನಿಗಳು ತಮ್ಮ ಸ್ಥಳವನ್ನು ಬದಲಾಯಿಸುವ ನಿರ್ಧಾರವು ವ್ಯಾಪಾರ ಸಮಸ್ಯೆಗಳ ಕಾರಣದಿಂದಾಗಿರಬಹುದು.
ಬೆಂಗಳೂರು ನೀಡುವ ಸೌಲಭ್ಯಗಳು ಮತ್ತು ಪ್ರತಿಭೆಗಳಿಂದ ತೃಪ್ತರಾಗದಿದ್ದರೆ ಯಾರಾದರೂ ಸ್ಥಳಾಂತರಗೊಳ್ಳಲು ಸ್ವತಂತ್ರರು. ಆದರೆ, ಅವರು ಸರ್ಕಾರವನ್ನು ಬೆದರಿಸಲು ಸಾಧ್ಯವಿಲ್ಲ. ಸರ್ಕಾರವನ್ನು ಬ್ಲ್ಯಾಕ್‌ಮೇಲ್ ಮಾಡುವುದು ಕೆಲಸ ಮಾಡುವುದಿಲ್ಲ. ನಾವು ರಾಜ್ಯದ ಜನರಿಗೆ ಸೇವೆ ಸಲ್ಲಿಸಬೇಕು. ಯಾರೂ ಬೆಂಗಳೂರಿನಿಂದ ಹೊರಹೋಗುವುದಿಲ್ಲ. ಇದನ್ನು ದಾಖಲಿಸಿಕೊಳ್ಳಿ ಎಂದರು.
ಅಂತೆಯೇ ಬೆಂಗಳೂರು ಮತ್ತು ನಾವು ಒದಗಿಸುವ ಮೂಲಸೌಕರ್ಯವನ್ನು ಯಾರೂ ಹೊಂದಿಸಲು ಸಾಧ್ಯವಿಲ್ಲ. ಬೆಂಗಳೂರಿಗೆ ಬರುವ ಮೊದಲು, ಅದು ಏನು ನೀಡುತ್ತದೆ ಎಂಬುದನ್ನು ನೋಡಿದರು. ಆ ನಂತರ ನಿರ್ಧಾರ ತೆಗೆದುಕೊಂಡರು.
ಬೆಂಗಳೂರಿನ ಇತಿಹಾಸದಲ್ಲಿ ಮೊದಲ ಬಾರಿಗೆ 112 ಕಿ.ಮೀ. ಫ್ಲೈಓವರ್‌ಗಳು ಮತ್ತು 44 ಕಿ.ಮೀ.ಗಿಂತ ಹೆಚ್ಚು ಎತ್ತರದ ಡಬಲ್ ಡೆಕ್ಕರ್ ರಸ್ತೆಗಳನ್ನು ನಿರ್ಮಿಸುತ್ತಿದ್ದೇವೆ. ಈ ಕೆಲಸ ಶೀಘ್ರದಲ್ಲಿಯೇ ಮುಕ್ತಾಯವಾಗಲಿವೆ. ಬೆಂಗಳೂರು ವೇಗವಾಗಿ ಬೆಳೆಯುತ್ತಿದೆ ಮತ್ತು ಪ್ರತಿದಿನ ನೂರಾರು ಕಂಪನಿಗಳು ಇಲ್ಲಿಗೆ ಬರುತ್ತಿವೆ ಎಂದು ಹೇಳಿದರು.

ನವೆಂಬರ್‌ ಗಡುವು

“ನಾನು ಅಧಿಕಾರಿಗಳಿಗೆ ಬದ್ಧತೆಯಿಂದ ಕೆಲಸ ಮಾಡಿ ಸಮಸ್ಯೆ ಬಗೆ ಹರಿಸಲು ತಿಳಿಸಿದ್ದೇನೆ. ಹಣ ಬಿಡುಗಡೆಯಾಗಿದೆ. ಗುತ್ತಿಗೆದಾರರು ಕೆಲಸ ಕೈಗೊಂಡಿದ್ದಾರೆ. ಬೆಂಗಳೂರಿನ ಸ್ವಚ್ಛತೆ ಮತ್ತು ಗುಂಡಿಗಳನ್ನು ಸರಿಪಡಿಸುವುದು ನಮ್ಮ ಆದ್ಯತೆಯಾಗಿದೆ. ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಯನ್ನು ಬಗೆಹರಿಸಲು ನವೆಂಬರ್ ಒಳಗೆ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಗುತ್ತಿಗೆದಾರರಿಗೆ ಅಂತಿಮ ಗಡುವು ನೀಡಲಾಗಿದೆ. ಸ್ವಚ್ಛ ಬೆಂಗಳೂರು ಹಾಗೂ ಸುಗಮ ಸಂಚಾರವೇ ನಮ್ಮ ಗುರಿಯಾಗಿರುವುದರಿಂದ ಆದಷ್ಟು ಬೇಗ ರಸ್ತೆ ಗುಂಡಿಗಳಿಗೆ ಜಿಬಿಎ ಮುಕ್ತಿ ನೀಡಲಿದೆ “

– ಡಿ.ಕೆ.ಶಿವಕುಮಾರ್
ಉಪ ಮುಖ್ಯಮಂತ್ರಿ

ವ್ಯಾಪಕ ಸದ್ದು ಮಾಡಿದ್ದ ಉದ್ಯಮಿ ಟ್ವೀಟ್

ಗುಂಡಿ ಸಮಸ್ಯೆ, ಮೂಲಸೌಕರ್ಯಗಳ ಕೊರತೆಯಿಂದ ಬೆಂಗಳೂರಿನಿಂದ ಹೊರ ಹೋಗುತ್ತೇವೆ ಎಂದು ಬ್ಲಾಕ್‌ಬಕ್‌ ಕಂಪನಿ ಸಿಇಒ ರಾಜೇಶ್‌ ಯಬಾಜಿ ಟ್ವೀಟ್‌ ಮಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಹಲವು ಉದ್ಯಮಿಗಳು ನಗರದ ಸಮಸ್ಯೆಯನ್ನು ಶೀಘ್ರ ಪರಿಹಾರ ಮಾಡಬೇಕು ಎಂದು ಸರ್ಕಾರ, ಡಿಕೆ ಶಿವಕುಮಾರ್ ಅವರನ್ನು ಟ್ಯಾಗ್‌ ಮಾಡಿ ಟ್ವೀಟ್‌ ಮಾಡಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡಿತ್ತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಂತಿಮ ಹಂತ ತಲುಪಿದ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ

ಸರಕಾರಿ ಸೌಲಭ್ಯ ಸದ್ಬಳಕೆಯಿಂದ ಗುರಿ ತಲುಪಿ :ಬಿರಾದಾರ

ದೇವರಾಜ ಅರಸು ಚಿಂತನೆಗಳು ಇಂದಿಗೂ ಪ್ರಸ್ತುತ

‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ ಪುರಸ್ಕೃತ ಮಠೋಳಿ ಗೆ ಸನ್ಮಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಂತಿಮ ಹಂತ ತಲುಪಿದ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ
    In (ರಾಜ್ಯ ) ಜಿಲ್ಲೆ
  • ಸರಕಾರಿ ಸೌಲಭ್ಯ ಸದ್ಬಳಕೆಯಿಂದ ಗುರಿ ತಲುಪಿ :ಬಿರಾದಾರ
    In (ರಾಜ್ಯ ) ಜಿಲ್ಲೆ
  • ದೇವರಾಜ ಅರಸು ಚಿಂತನೆಗಳು ಇಂದಿಗೂ ಪ್ರಸ್ತುತ
    In (ರಾಜ್ಯ ) ಜಿಲ್ಲೆ
  • ‘ಶಿಕ್ಷಕ ಸೇವಾ ರತ್ನ’ ಪ್ರಶಸ್ತಿ ಪುರಸ್ಕೃತ ಮಠೋಳಿ ಗೆ ಸನ್ಮಾನ
    In (ರಾಜ್ಯ ) ಜಿಲ್ಲೆ
  • ಕೇವಲ 5 ಗಂಟೆಯಲ್ಲೇ ೧೧ಎಕರೆ ಜಮೀನು ಹರಗಿದ ರೈತ ಗುರುಪಾದ
    In (ರಾಜ್ಯ ) ಜಿಲ್ಲೆ
  • 4 ದಿನ ಪೂರೈಸಿದ ಬಿಜೆಪಿ ಧರಣಿ ಸತ್ಯಾಗ್ರಹ ಅಂತ್ಯ
    In (ರಾಜ್ಯ ) ಜಿಲ್ಲೆ
  • ಕೂಡಗಿ ಎನ್‌ಟಿಪಿಸಿಯಿಂದ ವಿಶೇಷಚೇತನರಿಗೆ ಸಾಧನಗಳ ವಿತರಣೆ
    In (ರಾಜ್ಯ ) ಜಿಲ್ಲೆ
  • ಎ.ವಿ.ಎಸ್. ಆಯುರ್ವೇದ ಕಾಲೇಜ್: ಆ.24 ರಿಂದ ಆರೋಗ್ಯ ಶಿಬಿರ
    In (ರಾಜ್ಯ ) ಜಿಲ್ಲೆ
  • ಅಶ್ವಿನಿ ಹತ್ಯಾಚಾರ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ :ನಿಮಾದಾರ
    In (ರಾಜ್ಯ ) ಜಿಲ್ಲೆ
  • ದುಶ್ಚಟಗಳ ಭಿಕ್ಷೆ, ಸದ್ಗುಣಗಳ ದೀಕ್ಷೆ: ಜನಜಾಗೃತಿ ಪಾದಯಾತ್ರೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.