“ಸ್ವಸ್ತ ನಾರಿ ಸಶಕ್ತ ಪರಿವಾರ” ಅಭಿಯಾನಕ್ಕೆ ಚಾಲನೆ ನೀಡಿದ ಸಂಸದ ರಮೇಶ ಜಿಗಜಿಣಗಿ ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಭಾರತ ದೇಶದಲ್ಲಿ ಕಳೆದ ಹಲವು ವರ್ಷಗಳಿಂದ ಅನೇಕ ಜನಪರ ಅಭಿವೃದ್ಧಿ ಕಾರ್ಯಕ್ರಮಗಳು ಅನುಷ್ಠಾನಗೊಳ್ಳುತ್ತಿವೆ. ಇಂದು ದೇಶ ಹಾಗೂ ರಾಜ್ಯಾದ್ಯಂತ “ಸ್ವಸ್ಥ ನಾರಿ ಸಶಕ್ತ ಪರಿವಾರ” ಅಭಿಯಾನವನ್ನು ೦೨-೧೦-೨೦೨೫ರ ವರೆಗೆ ಹಮ್ಮಿಕೊಳ್ಳಲಾಗಿದ್ದು. ಸಮುದಾಯದ ಅಭಿವೃದ್ಧಿಯ ಸಂಕಲ್ಪವನ್ನು ಹೊಂದಲಾಗಿರುತ್ತದೆ. ಮಹಿಳೆಯರು ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ “ಸ್ವಸ್ತ ನಾರಿ ಸಶಕ್ತ ಪರಿವಾರ “ಅಭಿಯಾನಕ್ಕೆ ಮಹಾನಗರ ಪಾಲಿಕೆಯ ಮಹಾಪೌರ ಎಮ್.ಎಸ್. ಕರಡಿಯವರೊಂದಿಗೆ ಜಂಟಿಯಾಗಿ ಚಾಲನೆ ನೀಡಿ ಅವರು ಮಾತನಾಡಿದರು.
ಮಹಾನಗರ ಪಾಲಿಕೆಯ ಮಹಾಪೌರ ಮಡಿವಾಳಪ್ಪ ಕರಡಿ ಮಾತನಾಡಿ, ಸಮಾಜದ ಏಳಿಗೆಗಾಗಿ ಮಹಿಳೆಯರು ಸ್ವಾವಲಂಬಿ ಬದಕನ್ನು ಕಟ್ಟಿಕೊಳ್ಳಲು ಅವರು ಮಾನಸಿಕ, ದೈಹಿಕ, ಕೌಟಂಬಿಕ ಸಮಾಜಿಕವಾಗಿ ಆರೋಗ್ಯವಂತರಾಗಿ ಇರಲು ಈ ಅಭಿಯಾನದಲ್ಲಿ ನಡೆಯುವ ಮಹಿಳೆಯರಿಗಾಗಿ ವೈದ್ಯಕೀಯ ಆರೋಗ್ಯ ತಪಾಸಣೆ ಮಾಡಿಸುವದರಿಂದ ಆರೋಗ್ಯವಂತ ಸಮಾಜವನ್ನು ಕಾಪಾಡುವದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಹೇಳಿದರು
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ|| ಸಂಪತ್ತ ಗುಣಾರಿ ಮಾತನಾಡಿ, ವಿಶೇಷವಾಗಿ ಮಹಿಳೆಯರ ಆರೋಗ್ಯ ತಪಾಸಣೆ, ತಾಯಿ ಮತ್ತು ಮಕ್ಕಳ ಆರೈಕೆ, ಜಾಗೃತಿ ಮತ್ತು ವರ್ತನೆಯ ಬದಲಾವಣೆ, ರಕ್ತದಾನ ಶಿಬಿರಗಳು ಹೀಗೆ ಹಲವಾರು ಕಾರ್ಯಕ್ರಮಗಳನ್ನು ಈ ಅಭಿಯಾನದಲ್ಲಿ ಹಮ್ಮಿಕೊಳ್ಳಲಾಗಿದೆ. ಉಪಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ತಾಲೂಕಾ ಆಸ್ಪತ್ರೆ ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಉಚಿತವಾಗಿ ಇಂದಿನಿಂದ ೦೨-೧೦-೨೦೨೫ರ ವರೆಗೆ ಮಹಿಳಾ ಆರೋಗ್ಯ ತಪಾಸಣೆಯನ್ನು ಹಮ್ಮಿಕೊಳ್ಳಲಾಗಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ|| ಶಿವಾನಂದ ಮಾಸ್ತಿಹೊಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಉಪ ಮಹಾಪೌರ ಸುಮಿತ್ರಾ ಜಾಧವ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಹಾನಗರ ಪಾಲಿಕೆಯ ಸದಸ್ಯರುಗಳಾದ ರಾಜಶೇಖರ್ ಮಗಿಮಠ, ಶಿವರುದ್ರ ಬಾಗಲಕೋಟ, ರಾಹುಲ್ ಜಾಧವ ಸೇರಿದಂತೆ ಅನೇಕರು ಭಾಗವಹಿಸಿದ್ದರು.
ಜಿಲ್ಲಾ ಆಸ್ಪತ್ರೆಯ ಹಿರಿಯ ಆಪ್ತಸಮಾಲೋಚಕ ರವಿ ಕಿತ್ತೂರ ನಿರೂಪಿಸಿ, ವಂದಿಸಿದರು.

