ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.
ವಿವಿಧ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಅಧಿಕಾರೇತರ ಅಭ್ಯರ್ಥಿಗಳನ್ನು ಹಾಗೂ ಎಂಎಸ್‌ಡಬ್ಲೂ- ಕಾನೂನು ಪದವಿ ಅಥವಾ ಇತರೆ ಯಾವುದೇ ಪದವಿ ವಿದ್ಯಾರ್ಥಿ ಅಥವಾ ಪದವೀಧರರನ್ನು ಗುರುತಿಸಿ ಅವರನ್ನು ಅರೆಕಾಲಿಕ ಸ್ವಯಂ ಸೇವಕರನ್ನಾಗಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ದಿನಾಂಕ : ೦೬-೧೦-೨೦೨೫ರೊಳಗಾಗಿ ವಿಜಯಪುರ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್https://districts.ecourts.gov ನಲ್ಲಿ ಲಭ್ಯವಿರುವ ಅರ್ಜಿ ನಮೂನೆ ಪಡೆದು, ಭರ್ತಿ ಮಾಡಿ ಜಿಲ್ಲಾ ನ್ಯಾಯಾಲಯ ಕಚೇರಿಗೆ ಸಲ್ಲಿಸುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಎಸ್.ಹಾಗರಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
