ಚಡಚಣ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣ | ಕರ್ನಾಟಕ–ಮಹಾರಾಷ್ಟ್ರ ಪೊಲೀಸರ ಜಂಟಿ ಕಾರ್ಯಾಚರಣೆ
ಉದಯರಶ್ಮಿ ದಿನಪತ್ರಿಕೆ
ಚಡಚಣ: ಮಂಗಳವಾರ ಬ್ಯಾಂಕ್ ದರೋಡೆ ಮಾಡಿದ ಘಟನೆಯ ಹಿನ್ನಲೆಯಲ್ಲಿ ಪಟ್ಟಣದ ಉಮದಿ ಕ್ರಾಸ್ ಬಳಿ ಪೊಲೀಸರು ಎಲ್ಲ ವಾಹನಗಳನ್ನು ತಡೆದು ಪರಿಶೀಲನೆ ನಡೆಸಿ, ಗಡಿ ಭಾಗಗಳಲ್ಲಿ ಹೆಚ್ಚಿನ ಬಿಗಿ ಬಂದೋಬಸ್ತ ಮಾಡಿದ್ದಾರೆ.
ದರೋಡೆಕೋರರು ಮಹಾರಾಷ್ಟ್ರ ರಾಜ್ಯದ ಹುಲಜಂತಿ ಗ್ರಾಮದಲ್ಲಿ ವಾಹನದಲ್ಲಿ ಸ್ವಲ್ಪ ಪ್ರಮಾಣದ ನಗದು ಮತ್ತು ಚಿನ್ನಾಭರಣಗಳನ್ನು ಬಿಟ್ಟು ಪರಾರಿಯಾಗಿದ್ದು, ವಾಹನದಲ್ಲಿ ಸ್ವಲ್ಪ ನಗದು ಮತ್ತು ಸ್ವಲ್ಪ ಚಿನ್ನಾಭರಣ ಸಿಕ್ಕಿದ್ದರ ಕುರಿತು ಪೊಲೀಸರು ಮಾಹಿತಿ ನೀಡಿದ್ದಾರೆ. ಪ್ರಕರಣ ಕುರಿತು ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪೊಲೀಸರು ಇಂದು ಗುರುವಾರ ಕೂಡ ಹುಲಜಂತಿ ಗ್ರಾಮಕ್ಕೆ ತೆರಳಿ ಅಲ್ಲಿನ ಸ್ಥಳೀಯರನ್ನು ವಿಚಾರಿಸಿ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳೀಯ ಎಸ್‌ಬಿಐ ಬ್ಯಾಂಕಿಗೆ ಇನ್ನೂ ಕೂಡ ಹೆಚ್ಚಿನ ಪೊಲೀಸ್ ಬಿಗಿ ಬಂದೋಬಸ್ತ ವ್ಯವಸ್ಥೆ ಮಾಡಲಾಗಿದೆ.

