Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ

ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ

ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ₹270 ಕೋಟಿ ಕೊಡಲು ಒಪ್ಪಿಗೆ
(ರಾಜ್ಯ ) ಜಿಲ್ಲೆ

ವಿಜಯಪುರ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ₹270 ಕೋಟಿ ಕೊಡಲು ಒಪ್ಪಿಗೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೊಡ್ಡ ವಿಮಾನ, ರಾತ್ರಿ ಹೊತ್ತಿನ ಕಾರ್ಯಾಚರಣೆ ವ್ಯವಸ್ಥೆ ಕಲ್ಪಿಸಲು ಸಚಿವ ಸಂಪುಟ ಅನುಮೋದನೆ | ಸಚಿವ ಎಂ ಬಿ ಪಾಟೀಲ ಮಾಹಿತಿ

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ಏರ್‌ಬಸ್‌-320 ಮಾದರಿಯ ದೊಡ್ಡ ವಿಮಾನಗಳ ಕಾರ್ಯಾಚರಣೆ ಮತ್ತು ರಾತ್ರಿ ವೇಳೆ ಲ್ಯಾಂಡಿಂಗ್‌ ಸೌಲಭ್ಯ ಅಭಿವೃದ್ಧಿ ಸೇರಿದಂತೆ ಇತರ ಅನುಕೂಲಗಳಿಗಾಗಿ ವಿಜಯಪುರ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ 270.83 ಕೋಟಿ ರೂ. ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ಜಿಲ್ಲೆಯ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.
ಈ ಬಗ್ಗೆ ವಿವರ ಮಾಹಿತಿ ನೀಡಿರುವ ಅವರು, ʻಗುರುವಾರ ನಡೆದ ಸಂಪುಟ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾಗಿ ಚರ್ಚಿಸಿ, ಒಪ್ಪಿಗೆ ನೀಡಲಾಗಿದೆ. ಇದರಿಂದಾಗಿ ವಿಜಯಪುರ ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿನ ಒಟ್ಟು ವೆಚ್ಚವು 618.75 ಕೋಟಿ ರೂ.ಗಳಾಗಲಿದೆ. ಎಟಿಆರ್‌ ಮಾದರಿಯ ನಾಗರಿಕ ವಿಮಾನ ಕಾರ್ಯಾಚರಣೆಗೆ ಸೀಮಿತವಾಗಿದ್ದ ವಿಮಾನ ನಿಲ್ದಾಣದ ಮೂಲ ವಿನ್ಯಾಸವನ್ನು ಏರ್‌ಬಸ್‌-320 ಮಾದರಿಯ ವಿಮಾನಗಳ ಕಾರ್ಯಾಚರಣೆಗೂ ಅನುಕೂಲವಾಗುವಂತೆ ಬದಲಿಸಿದ್ದರಿಂದ ವೆಚ್ಚ ಹೆಚ್ಚಾಗುತ್ತಿದೆʼ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ವಿಮಾನ ನಿಲ್ದಾಣದ ಮೂಲವಿನ್ಯಾಸವನ್ನು ಚಿಕ್ಕ ವಿಮಾನಗಳನ್ನು ಗಮನದಲ್ಲಿ ಇಟ್ಟಿಕೊಂಡು ಮಾತ್ರ ಮಾಡಲಾಗಿತ್ತು. ಅದರಲ್ಲಿ ಏರ್‌ಬಸ್‌ ಮಾದರಿಯ ವಿಮಾನ ಕಾರ್ಯಾಚರಣೆಗಳಿಗಾಗಲಿ, ನೈಟ್‌ ಲ್ಯಾಂಡಿಂಗ್‌ಗಾಗಲಿ ಅವಕಾಶವಿರಲಿಲ್ಲ. ಆದರೆ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳು ಸೇರಿದಂತೆ ಉತ್ತರ ಕರ್ನಾಟಕದ ನಗರಗಳು ಕ್ಷಿಪ್ರವಾಗಿ ಬೆಳೆಯುತ್ತಿವೆ. ಜೊತೆಗೆ ಮಹಾರಾಷ್ಟ್ರದ ಸೊಲ್ಲಾಪುರ, ಸತಾರಾ ಜಿಲ್ಲೆಗಳೂ ವಿಜಯಪುರಕ್ಕೆ ಹತ್ತಿರವಾಗಿವೆ. ಇತ್ತ ಬೆಳಗಾವಿ, ಕಲಬುರಗಿ ಜಿಲ್ಲೆಯ ಹಲವು ತಾಲ್ಲೂಕುಗಳ ಒಡನಾಟವೂ ವಿಜಯಪುರದೊಂದಿಗೆ ಹೆಚ್ಚಾಗಿದೆ. ಹೀಗಾಗಿ ಮುಂದಿನ ಐವತ್ತು ವರ್ಷಗಳ ಅಗತ್ಯವನ್ನು ಪರಿಗಣಿಸಿ, ಹಲವು ಹೆಚ್ಚುವರಿ ಸೌಲಭ್ಯಗಳನ್ನು ಈಗ ಸೇರಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಈಗ ಒದಗಿಸಲಾಗಿರುವ ಹಣದಲ್ಲಿ ನೈಟ್‌ ಲ್ಯಾಂಡಿಂಗ್‌ ಸಂಬಂಧಿತ ಕಾಮಗಾರಿಗಳು, ರನ್‌ವೇಯ ಎರಡೂ ಬದಿಗಳಿಗೆ ಪೇವ್ಡ್‌ ಶೋಲ್ಡರ್‌ ನಿರ್ಮಾಣ ಮತ್ತು ಭೂಸ್ವಾಧೀನಕ್ಕೆ ಸಂಬಂಧಿಸಿದ ಪರಿಹಾರ ಬಾಬ್ತಿಗೆ 65 ಕೋಟಿ ರೂ. ವಿನಿಯೋಗಿಸಲಾಗುವುದು. ವಿಜಯಪುರ ವಿಮಾನ ನಿಲ್ದಾಣದಿಂದ ರಾ.ಹೆ.50ಕ್ಕೆ ಸಂಪರ್ಕ ಕಲ್ಪಿಸಲಿರುವ ಮೀಸಲು ರಸ್ತೆಯ ಅಭಿವೃದ್ಧಿಗೆ 52 ಕೋಟಿ ರೂ. ವೆಚ್ಚವಾಗಲಿದೆ. ವಿಮಾನ ನಿಲ್ದಾಣದ ಮೂಲವಿನ್ಯಾಸದಲ್ಲಿ ಇವುಗಳ ಪ್ರಸ್ತಾಪವೇ ಇರಲಿಲ್ಲ ಎಂದು ಅವರು ತಿಳಿಸಿದ್ದಾರೆ.
ಇದಲ್ಲದೆ 25 ಕೋಟಿ ರೂ. ವೆಚ್ಚದಲ್ಲಿ ಎರಡು ವಿಮಾನ ರಕ್ಷಣೆ ಮತ್ತು ಅಗ್ನಿಶಾಮಕ ವಾಹನಗಳು (ಎಆರ್‌ಎಫ್‌ಎಫ್‌) ಮತ್ತು ಉಪಕರಣಗಳನ್ನು ಖರೀದಿಸಲಾಗುವುದು. ಮಿಕ್ಕಂತೆ 2.76 ಕೋಟಿ ರೂ.ಗಳಲ್ಲಿ ಬಾಂಬ್‌ ಪತ್ತೆ ಮತ್ತು ನಿಷ್ಕ್ರಿಯಗೊಳಿಸುವ ಉಪಕರಣಗಳು (ಬಿಡಿಡಿಎಸ್‌) ಮತ್ತು 13.09 ಕೋಟಿ ರೂ. ವೆಚ್ಚದಲ್ಲಿ ಡಿವಿಒಆರ್‌ (ಡೋಪ್ಲರ್‌ ವೆರಿ ಹೈ ಫ್ರೀಕ್ವೆನ್ಸಿ ಓಮ್ನಿ ರೇಂಜ್‌) ಉಪಕರಣಗಳ ಖರೀದಿ ಮತ್ತು ಅಳವಡಿಕೆ ಕೆಲಸಗಳು ನಡೆಯಲಿವೆ ಎಂದೂ ಅವರು ಮಾಹಿತಿ ನೀಡಿದ್ದಾರೆ.
ವಿಮಾನ ನಿಲ್ದಾಣದ ಕಾಮಗಾರಿಗಳನ್ನು ಕೇಂದ್ರ ಸರಕಾರದ ನಾಗರಿಕ ವಿಮಾನಯಾನ ಸಚಿವಾಲಯ ಮತ್ತು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ ತಂಡಗಳು ಕಾಲಕಾಲಕ್ಕೆ ಪರಿಶೀಲಿಸುತ್ತಿದೆ. ಅದು ನಿಗದಿತ ಮಾನದಂಡಗಳಿಗೆ ನೀಡಿದ ಸೂಚನೆಗಳನ್ನು ಪಾಲಿಸಲಾಗುತ್ತಿದೆ. ಹೆಚ್ಚಿನ ಸೌಲಭ್ಯಗಳ ಅಭಿವೃದ್ಧಿಗೆ ಹೆಚ್ಚುವರಿ ಹಣಕಾಸು ನೆರವು ಕೋರಿ ಈ ವರ್ಷದ ಫೆಬ್ರವರಿಯಲ್ಲೇ ರಾಜ್ಯ ಮಟ್ಟದ ತಾಂತ್ರಿಕ ಸಲಹೆ ಮತ್ತು ಅಂದಾಜು ಪಟ್ಟಿ ಪರಿಶೀಲನಾ ಸಮಿತಿಗೆ ಪರಿಷ್ಕೃತ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಅದು ತನ್ನ ಒಪ್ಪಿಗೆ ನೀಡಿದ ನಂತರ ಸಂಪುಟ ಸಭೆಯ ಮುಂದೆ ಬಂದಿತ್ತು ಎಂದು ಅವರು ವಿವರಿಸಿದ್ದಾರೆ.
ವಿಮಾನ ನಿಲ್ದಾಣವನ್ನು ವಿಜಯಪುರ ಮತ್ತು ನೆರೆಹೊರೆಯ ಜಿಲ್ಲೆಗಳಲ್ಲಿ ಕೈಗಾರಿಕಾ, ಆರ್ಥಿಕ, ಶೈಕ್ಷಣಿಕ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಯನ್ನು ಗಮನದಲ್ಲಿ ಇಟ್ಟುಕೊಂಡು ದೂರದೃಷ್ಟಿಯಿಂದ ನಿರ್ಮಿಸಲಾಗುತ್ತಿದೆ. ಈ ನಿಲ್ದಾಣವು ಕಾರ್ಯಾಚರಣೆ ಆರಂಭಿಸಿದ ನಂತರ ಕರ್ನಾಟಕ ಮತ್ತು ಉತ್ತರ ಭಾರತದ ನಡುವೆ ಸೇತುವೆಯಾಗಿ ಪರಿಣಮಿಸಲಿದೆ ಎಂದು ಸಚಿವ ಪಾಟೀಲ ಅಭಿಪ್ರಾಯ ಪಟ್ಟಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ

ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ

ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್

ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಭಯುತ್ಪಾದನೆ ವಿರುದ್ಧ ಭಾರತ-ರಷ್ಯಾ ಒಟ್ಟಾಗಿ ಹೋರಾಟ
    In (ರಾಜ್ಯ ) ಜಿಲ್ಲೆ
  • ಸೈಬರ್ ಅಪರಾಧ ಪ್ರಕರಣಗಳಲ್ಲಿ ಮಹಿಳೆಯರೇ ಹೆಚ್ಚು ಬಲಿ
    In (ರಾಜ್ಯ ) ಜಿಲ್ಲೆ
  • ಫಲಿತಾಂಶ ಆಧಾರಿತ ಶಿಕ್ಷಣ ಅಗತ್ಯ :ಡಾ.ಬಿ.ವೈ.ಖಾಸ್ನಿಸ್
    In (ರಾಜ್ಯ ) ಜಿಲ್ಲೆ
  • ಡಿ.೬ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ರಾಣಿ ಚೆನ್ನಮ್ಮ ವಿವಿ: ಎಂಸಿಎ ಕೋರ್ಸಿಗೆ ಪ್ರವೇಶಾತಿ
    In (ರಾಜ್ಯ ) ಜಿಲ್ಲೆ
  • ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯಿಂದ ಶಿಷ್ಯವೇತನ ಕ್ಕಾಗಿ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಡಿ.೭ ರಂದು ಸಾರ್ವಜನಿಕ ರಸ್ತೆ ಸಂಚಾರ ಮಾರ್ಗ ಬದಲಾವಣೆ
    In (ರಾಜ್ಯ ) ಜಿಲ್ಲೆ
  • ಭೈರವಾಡಗಿ ಪಿಕೆಪಿಎಸ್ ಆಡಳಿತ ಮಂಡಳಿಗೆ ಅವಿರೋಧ ಆಯ್ಕೆ
    In (ರಾಜ್ಯ ) ಜಿಲ್ಲೆ
  • ದೇವರಹಿಪ್ಪರಗಿ: ರೈತರಲ್ಲಿ ಆತಂಕ ತಂದ ಅಕಾಲಿಕ ಮಳೆ
    In (ರಾಜ್ಯ ) ಜಿಲ್ಲೆ
  • ಗೋವಿನ ಜೋಳ & ತೊಗರಿ ಖರೀದಿ ಕೇಂದ್ರ ತೆರೆಯಲು ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2025 udayarashminews.com. Designed by udayarashmi news .

Type above and press Enter to search. Press Esc to cancel.