ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಸಿದ್ಧಸಿರಿ ಸೌಹಾರ್ದ್ ಸಹಕಾರಿ ಸಂಘ ನಿಯಮಿತದ 2024-25ನೇ ಸಾಲಿನ 19ನೇ ಸಾಮಾನ್ಯ ಸಭೆಯನ್ನು ಇದೇ ಸೆ.21 ರ ಭಾನುವಾರ ಮಧ್ಯಾಹ್ನ 12ಕ್ಕೆ ಇಲ್ಲಿಯ ಜ್ಞಾನಯೋಗಾಶ್ರಮ ರಸ್ತೆಯಲ್ಲಿರುವ ಸದಾಶಿವ ನಗರದ ಕಿತ್ತೂರು ರಾಣಿ ಚನ್ನಮ್ಮ ಮಂಗಲ ಕಾರ್ಯಾಲಯದಲ್ಲಿ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರ ಅಧ್ಯಕ್ಷತೆಯ ನಡೆಯಲಿದೆ. ಸದರಿ ಸಭೆಯಲ್ಲಿ ಆಡಳಿತ ಮಂಡಳಿ ಸದಸ್ಯರು, ಷೇರುದಾರರು, ಗ್ರಾಹಕರು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಲಿದ್ದಾರೆ ಎಂದು ಸಹಕರಾರಿ ಸಂಘದ ವ್ಯವಸ್ಥಾಪಕ ನಿರ್ದೇಶಕ ಜೊತಿಬಾ ಖಂಡಾಗಳೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
