ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶುಶ್ರೂಷಣಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು ಹಾಗೂ ಸಮುದಾಯ ಆರೋಗ್ಯಾಧಿಕಾರಿಗಳಿಗೆ ಗುಣಮಟ್ಟ ಪ್ರಸವ ಪೂರ್ವ ಆರೈಕೆ ಕುರಿತು ಹಮ್ಮಿಕೊಂಡ ೩ ದಿನಗಳ ತರಬೇತಿ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್‌ಕುಮಾರ ಗುಣಾರಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಡಾ.ಪಿ.ಎ.ಹಿಟ್ನಳ್ಳಿ, ರಾಜ್ಯ ಮಟ್ಟದ ತರಬೇತಿದಾರ ಶಬ್ಬೀರ ನದಾಫ್, ಡಾ.ಕವಿತಾ, ಡಾ.ನಂದಿನಿ, ಡಾ.ಜಾನ್ ಕಟವಟೆ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಎಂ.ಜಿ.ನೀಲಂಗಿ ಉಪಸ್ಥಿತರಿದ್ದರು.
ಆರೋಗ್ಯ ಶಿಕ್ಷಣಾಧಿಕಾರಿ ಸುರೇಶ ಹೊಸಮನಿ ಸ್ವಾಗತಿಸಿ ವಂದಿಸಿದರು.

