ವಿಜಯಪುರ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಸನ್ ೨೦೨೩ರಿಂದ ೨೦೨೮ನೇ ಸಾಲಿನ ೫ ವರ್ಷಗಳ ಅವಧಿಯ ಆಡಳಿತ ಮಂಡಳಿ ಚುನಾವಣೆಗೆ ಒಟ್ಟು ೫೫ ನಾಮಪತ್ರಗಳು ಸ್ವೀಕೃತವಾಗಿದ್ದು, ಅಕ್ಟೊಬರ್ ೪ರಂದು ನಾಮಪತ್ರಗಳನ್ನು ಪರಿಶೀಲಿಸಲಾಗಿ, ಒಟ್ಟು ೪೩ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ವಿಜಯಪುರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಚುನಾವಣಾಧಿಕಾರಿಗಳಾದ ವಿಜಯಪುರ ಉಪವಿಭಾಗಾಧಿಕಾರಿಗಳು ತಿಳಿಸಿದ್ದಾರೆ.