ಮಣ್ಣೂರ ಗ್ರಾಮದ ಭೀಮಾ ನದಿಯಲ್ಲಿ ಘಟನೆ | ಅಗ್ನಿಶಾಮಕ ಸಿಬ್ಬಂದಿಯಿಂದ ಮೃತ ದೇಹಕ್ಕಾಗಿ ಹುಡುಕಾಟ
ಉದಯರಶ್ಮಿ ದಿನಪತ್ರಿಕೆ
ಅಫಜಲಪುರ:ಮಣ್ಣೂರ ಗ್ರಾಮದ ಭೀಮಾ ನದಿಯಲ್ಲಿ ಶನಿವಾರ ಬೆಳಿಗ್ಗೆ ಬಟ್ಟೆ ತೊಳೆಯಲು ಹೋಗಿದ್ದಾಗ ಕಾಲು ಜಾರಿ ಬಿದ್ದು ಭಾಗೇಶ ರೇವಣಸಿದ್ದಪ್ಪ ಬುರುಡ(20 ) ಎಂಬ ಯುವಕ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿರುವ ದುರ್ಘಟನೆ ಶನಿವಾರ ಸಂಭವಿಸಿದೆ.
ಭಾಗೇಶ ಬುರುಡ ಪದವಿ ವಿದ್ಯಾರ್ಥಿ ಆಗಿದ್ದಾನೆ. ಶನಿವಾರ ಬೆಳಿಗ್ಗೆ ಬಟ್ಟೆ ತೊಳೆಯಲು ಭೀಮಾ ನದಿಗೆ ಹೋಗಿ ನದಿಯಲ್ಲಿ ಬಟ್ಟೆ ತೊಳೆಯುವ ಸಂದರ್ಭದಲ್ಲಿ ಕಾಲು ಜಾರಿ ನದಿಗೆ ಬಿದ್ದಿರುವುದರಿಂದ ಈಜಲು ಸಾಧ್ಯವಾಗದೆ ನೀರಿನ ರಭಸಕ್ಕೆ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದಾನೆ. ರಕ್ಷಣೆಗೆ ಹೋಗಿದ್ದ ಗ್ರಾಮಸ್ಥರು, ನೀರಿನಲ್ಲಿ ಹುಡುಕಾಡಿದರೂ ಸುಳಿವು ಸಿಕ್ಕಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ದಳದವರು ಆಗಮಿಸಿ ಭಾಗೇಶನಿಗಾಗಿ ಹುಡುಕಾಟ ನಡೆಸಿದ್ದಾರೆ.
ಈ ಕುರಿತು ಅಫಜಲಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

