ಮುದ್ದೇಬಿಹಾಳ: ಕೆಲಸದ ಬೇಡಿಕೆ ಅರ್ಜಿ ಸಲ್ಲಿಸಿದ ನರೇಗಾ ಕೂಲಿಕಾರರಿಗೆ ಕೆಲಸ ನೀಡಲು ಗ್ರಾಮ ಪಂಚಾಯತಿ ಸಿದ್ಧವಾಗಿದ್ದು, ಯಾರು ವಲಸೆ ಹೋಗದೆ ನಿಮ್ಮೂರಲ್ಲೆ ದುಡಿದು ಆರ್ಥಿಕ ಸಾವಲಂಬಿಗಳಾಗಿ ಎಂದು ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಸಂಗಯ್ಯ ಹಿರೇಮಠ ತಿಳಿಸಿದರು.
ತಾಲೂಕಿನ ಹುಲ್ಲೂರ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸೋಮವಾರ ನಡೆದ ಮಹಾತ್ಮ ಗಾಂಧಿ ನರೇಗಾ ಯೋಜನೆಯ ವಿಶೇಷ ಗ್ರಾಮ ಸಭೆ ಉದ್ದೇಶಿಸಿ ಅವರು ಮಾತನಾಡಿದರು.
ಬರಗಾಲ ಪರಿಸ್ಥಿತಿಯಲ್ಲಿ ಬೆಳೆಗಳು ಒಣಗುತ್ತಿದ್ದು, ರೈತರು, ಕೃಷಿ ಕೂಲಿ ಕಾರ್ಮಿಕರು ನಷ್ಟಕ್ಕೆ ಒಳಗುತ್ತಿದ್ದಾರೆ. ಕೃಷಿ ವಲಯದಲ್ಲಿ ಕೆಲಸ ಇಲ್ಲದೆ ಜನರು ಉದ್ಯೋಗ ಹರಸಿ ಗುಳೆ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ನರೇಗಾ ಕೂಲಿಕಾರರಿಗೆ ಕೆಲಸ ನೀಡಲು ಕ್ರಿಯಾ ಯೋಜನೆ ಸಿದ್ಧಪಡಿಸಲಾಗುತ್ತಿದ್ದು, ಅಗತ್ಯ ಕಾಮಗಾರಿಗಳನ್ನು ಗಮನಕ್ಕೆ ತರುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ನರೇಗಾ ಯೋಜನೆಯ ೨೦೨೪-೨೫ ನೇ ಸಾಲಿನ ಕಾರ್ಮಿಕ ಆಯವ್ಯಯ ಕುರಿತು ಚರ್ಚಿಸಿ ಬೇಡಿಕೆಗೆ ಅನುಗುಣವಾಗಿವಾಗಿ ಕ್ರಿಯಾ ಯೋಜನೆ ಸಿದ್ದಪಡಿಸುವಂತೆ ತಿಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರಾದ ದಯಾನಂದ ಹಲಕವಠಿಗಿ, ಬಸಮ್ಮ ಹೊಲ್ದರ, ಮುಖಂಡರಾದ ವಿನೋದ ಓಲೇಕಾರ, ಭೀಮಣ್ಣ ಮಾದರ, ರಾಮನಗೌಡ ಬಿರಾದಾರ ಮತ್ತಿತರರು ಇದ್ದರು.
Related Posts
Add A Comment