ಉದಯರಶ್ಮಿ ದಿನಪತ್ರಿಕೆ
ಚಡಚಣ: ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಸಮಾಜಸೇವೆ,ರಾಷ್ಟ್ರಪ್ರೇಮ ಹಾಗೂ ಸೇವಾ ಮನೋಭಾವ ಮೂಡಿಸಲು ಎನ್.ಎಸ್.ಎಸ್ ಸಹಕಾರಿಯಾಗಿದೆ ಎಂದು ಶ್ರೀ ಅರವಿಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಚಂದ್ರಶೇಖರ್ ಖೇಡಗಿ ಹೇಳಿದರು.
ತಾಲೂಕಿನ ಹಲಸಂಗಿ ಗ್ರಾಮದ ಶ್ರೀ ಅರವಿಂದ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಶನಿವಾರ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಾಸ್ತಾವಿಕವಾಗಿ ಎನ್ ಎಸ್ ಎಸ್ ಯೋಜನಾ ಅಧಿಕಾರಿ ಸಿ ಎ ಬಗಲಿ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳಿಗೆ ಎನ್.ಎಸ್.ಎಸ್ ಒಂದು ಸರಕಾರದ ಯೋಜನೆ. ಗಾಂಧೀಜಿಯವರ ಸರ್ವೋದಯ ತತ್ವದ ಮೇಲೆ ಈ ಯೋಜನೆ ಕಾರ್ಯ ನಿರ್ವಹಿಸುತ್ತಿದ. ವಿದ್ಯಾರ್ಥಿಗಳಲ್ಲಿ ಸಮಾಜ ಸೇವೆಯೊಂದಿಗೆ ರಾಷ್ಟ್ರ ನಿರ್ಮಾಣ ಹಾಗೂ ಶಿಸ್ತು ಮೂಡಿಸಲು ಸಹಕಾರಿಯಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶ್ರೀ ಅರವಿಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ರಾಮಣ್ಣ ರಗಟಿ ಮಾತನಾಡಿದರು.
ವೇದಿಕೆಯ ಮೇಲೆ ಶ್ರೀ ಅರವಿಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಮಹಾದೇವ ಖೇಡಗಿ ನಿರ್ದೇಶಕರುಗಳಾದ ಬಾಬುರಾವ್ ಮನಮಿ, ಪ್ರಕಾಶ್ ಮನಮಿ, ಪ್ರಾಚಾರ್ಯ ಡಿ ಬಿ ತಿಕೋಟಿ, ಉಪನ್ಯಾಸಕ ವ್ಹಿ ಡಿ ಮನಮಿ ಎ ಎನ್ ಜತ್ತಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂ ಸೇವಕ ವಿದ್ಯಾರ್ಥಿಗಳು ಇದ್ದರು.

