ಉದಯರಶ್ಮಿ ದಿನಪತ್ರಿಕೆ
ಚಡಚಣ: ಇತ್ತೀಚೆಗೆ ಸೆ.೧೩ ಮತ್ತು ೧೪ ರಂದು ಬೆಳಗಾವಿಯಲ್ಲಿ ನಡೆದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಳಗಾವಿ ವಿಭಾಗ ಮಟ್ಟದ ೨೦೨೫-೨೬ ದಸರಾ ಕ್ರೀಡಾಕೂಟದ ಪುರುಷರ ವಿಭಾಗದಲ್ಲಿ ಭಾರ ಎತ್ತುವ (ವೆಟ್ ಲಿಪ್ಟಿಂಗ್) ಸ್ಪರ್ಧೆಯಲ್ಲಿ ಪಟ್ಟಣದ ಶ್ರೀ ಸಂಗಮೇಶ್ವರ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ವಿದ್ಯಾರ್ಥಿ ಅಶೋಕ ರಂಗು ರಾಠೋಡ ಭಾಗವಹಿಸಿ ವೆಟ್ ಲಿಪ್ಟಿಂಗ್ ದ್ವೀತಿಯ ಸ್ಥಾನ ಪಡೆದು, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಚಡಚಣ ಶ್ರೀ ಸಮಗಮೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ಗೌರವ ಕಾರ್ಯದರ್ಶಿ, ನಿರ್ದೇಶಕ, ಆಡಳಿತ ಅಧಿಕಾರಿ, ಪ್ರಾಚಾರ್ಯ ಡಾ.ಎಸ್.ಬಿ. ರಾಠೋಡ, ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಎಸ್.ಎಸ್. ಅವಟಿ, ಮಹಾವಿದ್ಯಾಲಯದ ಎಲ್ಲ ಸಿಬ್ಬಂದಿ ವರ್ಗದವರು ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳು ಶುಭ ಕೋರಿದ್ದಾರೆ.

