Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಜಿಲ್ಲೆ ಭಾವೈಕ್ಯತೆಗೆ ಹೆಸರಾಗಿದೆ :ಸಚಿವ ಪಾಟೀಲ

ಬಸವ ಜಯಂತಿ: ವಿವಿಧ ಸ್ಪರ್ಧಾ ಕಾರ್ಯಕ್ರಮಗಳಿಗೆ ನೊಂದಣಿ ಆರಂಭ

ಎಲ್‌ಪಿಜಿ ಕೊರತೆ ನೀಗಿಸಲು ‘ಎಥೆನಾಲ್ ಸ್ಟೌವ್’ ಬಳಕೆಗೆ ಒತ್ತು ನೀಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮಿಶ್ರ- ಸಮಗ್ರ ಕೃಷಿಯಿಂದ ರೈತರಿಗೆ ಲಾಭ :ಸಚಿವ ಶಿವಾನಂದ
(ರಾಜ್ಯ ) ಜಿಲ್ಲೆ

ಮಿಶ್ರ- ಸಮಗ್ರ ಕೃಷಿಯಿಂದ ರೈತರಿಗೆ ಲಾಭ :ಸಚಿವ ಶಿವಾನಂದ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ರೈತರು ಕೃಷಿ ಆಧಾರಿತ ವ್ಯವಸ್ಥೆಯಲ್ಲಿ ಲಾಭ ಗಳಿಸಿ, ಆರ್ಥಿಕವಾಗಿ ಸುಭದ್ರವಾಗಬೇಕಿದೆ. ಆದರೆ ತೋಟಗಾರಿಕೆ ಬೆಳೆಯಲ್ಲಿ ಏಕ ಬೆಳೆಯಾಗಿ ದ್ರಾಕ್ಷಿ ಬೆಳೆಯದೇ ಮಿಶ್ರ ಬೆಳೆ ಹಾಗೂ ಸಮಗ್ರ ಕೃಷಿಯಲ್ಲಿ ಮಾಡಿದಲ್ಲಿ ಯಶಸ್ಸು ಸಾಧ್ಯ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಸಲಹೆ ನೀಡಿದರು.
ಭಾನುವಾರ ತಿಕೋಟಾ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ದ್ರಾಕ್ಷಿ ಬೆಳೆಗಾರರ ಸಂಘದಿಂದ ಹಮ್ಮಿಕೊಂಡಿದ್ದ ದ್ರಾಕ್ಷಿ ಬೆಳೆಗಾರರ ರಾಷ್ಟ್ರೀಯ ವಿಚಾರ ಸಂಕಿರಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ದ್ರಾಕ್ಷಿ ಬೆಳೆಗಾರರು ಪ್ರಸಕ್ತ ವರ್ಷ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರತಿ ಕೆಜಿ ಒಣದ್ರಾಕ್ಷಿಗೆ 4-5 ನೂರು ದರ ಪಡೆದು ಸಂತಸದಲ್ಲೀರಿ. ಆದರೆ ಈಗ ದರ ಇಳಿಮುಖವಾಗಿದ್ದು, ಮತ್ತೆ 100-150 ರೂ. ಗೆ ಕುಸಿಯುವ ಭೀತಿ ಎದುರಾಗಿದೆ. ಹೀಗಾಗಿ ದ್ರಾಕ್ಷಿ ಬೆಳೆಯುವುದು ಅಂದುಕೊಂಡಷ್ಟು ಸುಲಭವಲ್ಲ ಎಂದು ವಿವರಿಸಿದರು.
ತೋಟಗಾರಿಕೆ ಬೆಳೆಯಲ್ಲಿ ದ್ರಾಕ್ಷಿ ಮಾತ್ರವಲ್ಲದೆ ಸಪೋಟಾ, ಡ್ರ್ಯಾಗನ್ ಫ್ರೂಟ್, ಪೇರಲದಂತ ಮಿಶ್ತ ಬೆಳೆ ಬೆಳೆಯಬೇಕು. ಇದರಿಂದ ರೈತರು ಯಾವುದೇ ಒಂದು ಬೆಳೆಗೆ ಬೆಲೆ ಕುಸಿತ ಸೇರಿದಂತೆ ಇತರೆ ಸಮಸ್ಯೆ ಎದುರಾದರೂ ಇನ್ನೊಂದು ಬೆಳೆಯಿಂದ ಲಾಭ ಗಳಿಸಲು ಸಾಧ್ಯವಿದೆ ಎಂದರು.
ತೋಟಗಾರಿಕೆ ಬೆಳೆಗಾರರು ನೀರಿನ ಮಿತ ಬಳಕೆ ಜೊತೆಗೆ ಮಾರುಕಟ್ಟೆಗೆ ತಕ್ಕಂತೆ ವೈಜ್ಞಾನಿಕ ತಂತ್ರಜ್ಞಾನ ಅಳವಡಿಸಿಕೊಂಡು ಕೃಷಿ ಮಾಡಬೇಕು ಎಂದು ಕಿವಿ ಮಾತು ಹೇಳಿದರು.
ರೈತರು ಬೆಳೆಯುವ ದ್ರಾಕ್ಷಿ ಸೇರಿದಂತೆ ಇತರೆ ಯಾವುದೇ ಬೆಳೆಗೆ ಅವೈಜ್ಞಾನಿಕ ರೀತಿಯಲ್ಲಿ ಕ್ರಿಮಿನಾಶಕ ಹಾಗೂ ರೋಗ ನಾಶಕ ಬಳಸದೇ ಸುಧಾರಿತ ತಂತ್ರಜ್ಞಾನದಿಂದ ಕೃಷಿ ಮಾಡಬೇಕು. ಮಿತ ನೀರಿನಲ್ಲಿ ಅಧಿಕ ಇಳುವರಿ ನೀಡುವ ಹಾಗೂ ಮಾರುಕಟ್ಟೆ ಸ್ಥಿರತೆ ಇರುವಂತೆ ತೋಟಗಾರಿಕೆ ಬೆಳೆಗಳನ್ನು ಬೆಳೆಯಬೇಕು ಎಂದು ಸಲಹೆ ನೀಡಿದರು.
ತಿಕೋಟಾ ವಿರಕ್ತ ಮಠದ ಚನ್ನಮಲ್ಲಿಕಾರ್ಜುನ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಸಚಿವ ಎಂ.ಬಿ. ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಸಂಸದ ರಮೇಶ ಜಿಗಜಿಣಗಿ, ಅಥಣಿ ಶಾಸಕ ಲಕ್ಷ್ಮಣ ಸವದಿ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ ಕುಲಪತಿ ಡಾ.ವಿಷ್ಣುವರ್ಧನ, ದ್ರಾಕ್ಷಿ ಬೆಳೆಯುವ ಪ್ರಗತಿಪರ ರೈತರಾದ ಎಂ.ಎಸ್. ರುದ್ರಗೌಡರ, ಎಸ್.ಎಚ್. ನಾಡಗೌಡ, ಎ.ಎಂ.ಪಾಟೀಲ, ಆರ್.ಜಿ. ಯರಗಲ್, ಜಗದೀಶ ಪಾಟೀಲ, ಸಂಘಟನೆಯ ಪ್ರಮುಖರಾದ ಯಾಖೂಬ್ ಜತ್ತಿ, ಮಲ್ಲಿಕಾರ್ಜುನ ಲೋಣಿ, ಭರತೇಶ ಜಮಖಂಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸತೀಶ ಮಾಳಿ, ಸುಧಾಮ ಮಾಳಿ, ಗಗನ ಅಗರವಾಲ, ಪಂಜಾಬರಾವ್ ಮಾನೆ ಪಾಟೀಲ, ಭೂಪಾಲ ಪಾಟೀಲ, ಕುಮಾರಗೌಡ ಬಿರಾದಾರ ಸೇರಿದಂತೆ ಇತರೆ ದ್ರಾಕ್ಷಿ ಬೆಳೆಗಾರರನ್ನು ಸನ್ಮಾನಿಸಲಾಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಜಿಲ್ಲೆ ಭಾವೈಕ್ಯತೆಗೆ ಹೆಸರಾಗಿದೆ :ಸಚಿವ ಪಾಟೀಲ

ಬಸವ ಜಯಂತಿ: ವಿವಿಧ ಸ್ಪರ್ಧಾ ಕಾರ್ಯಕ್ರಮಗಳಿಗೆ ನೊಂದಣಿ ಆರಂಭ

ಎಲ್‌ಪಿಜಿ ಕೊರತೆ ನೀಗಿಸಲು ‘ಎಥೆನಾಲ್ ಸ್ಟೌವ್’ ಬಳಕೆಗೆ ಒತ್ತು ನೀಡಿ

ಎಸ್.ಎಸ್.ಎಲ್.ಸಿ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿ :ಇಂಗಳೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಜಿಲ್ಲೆ ಭಾವೈಕ್ಯತೆಗೆ ಹೆಸರಾಗಿದೆ :ಸಚಿವ ಪಾಟೀಲ
    In (ರಾಜ್ಯ ) ಜಿಲ್ಲೆ
  • ಬಸವ ಜಯಂತಿ: ವಿವಿಧ ಸ್ಪರ್ಧಾ ಕಾರ್ಯಕ್ರಮಗಳಿಗೆ ನೊಂದಣಿ ಆರಂಭ
    In (ರಾಜ್ಯ ) ಜಿಲ್ಲೆ
  • ಎಲ್‌ಪಿಜಿ ಕೊರತೆ ನೀಗಿಸಲು ‘ಎಥೆನಾಲ್ ಸ್ಟೌವ್’ ಬಳಕೆಗೆ ಒತ್ತು ನೀಡಿ
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಎಲ್.ಸಿ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿ :ಇಂಗಳೆ
    In (ರಾಜ್ಯ ) ಜಿಲ್ಲೆ
  • ಸಿದ್ದರಾಮೇಶ್ವರ ಲೀಲಾಮೃತ ಪುರಾಣ ಮುಕ್ತಾಯ ಸಮಾರಂಭ.
    In (ರಾಜ್ಯ ) ಜಿಲ್ಲೆ
  • ವಿಷಮುಕ್ತ ಬೆಲ್ಲ ಉತ್ಪಾದನೆಗೆ ಆದ್ಯತೆ ನೀಡಿ :ಸಚಿವ ಶಿವಾನಂದ
    In (ರಾಜ್ಯ ) ಜಿಲ್ಲೆ
  • ಸಮಾಜದಲ್ಲಿ ಮಹತ್ವದ ಪಾತ್ರ ವಹಿಸುತ್ತಿರುವ ಮಹಿಳೆ :ಆನಂದ ಪಿ.
    In (ರಾಜ್ಯ ) ಜಿಲ್ಲೆ
  • ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.