ಉದಯರಶ್ಮಿ ದಿನಪತ್ರಿಕೆ
ಅಫಜಲಪುರ: ತಾಲೂಕಿನ ಮಣ್ಣೂರ ಗ್ರಾಮದ ಸಮೀಪದ ಭೀಮಾ ನದಿಯಲ್ಲಿ ಮಹಾನವಮಿ ಪ್ರಯುಕ್ತ ಹಾಸಿಗೆ ತೊಳೆಯಲು ಹೋಗಿದ್ದ ಯುವಕ ಭಾಗೇಶ ಎರಡು ದಿನಗಳ ಬಳಿಕ ಶವವಾಗಿ ಪತ್ತೆಯಾಗಿದ್ದಾನೆ.
ನೀರುಪಾಲಾಗಿದ್ದ ಯುವಕನ ಮೃತದೇಹ ಎರಡು ದಿನಗಳ ಬಳಿಕ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ. ನದಿಯಲ್ಲಿ ಯುವಕ ಕೊಚ್ಚಿ ಹೋದ ಬಳೊಕ ಆತನ ಶೋಧ ಕಾರ್ಯ ತೀವ್ರಗೊಳಿಸಲಾಗಿತ್ತು.ಎರಡು ದಿನಗಳ ನಿರಂತರ ಕಾರ್ಯಾಚರಣೆಯ ನಂತರ ದೇವಣಗಾಂವ ಗ್ರಾಮದ ಭೀಮಾ ನದಿಯ ತೀರದಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮೃತದೇಹ ಪತ್ತೆಯಾದ ನಂತರ ಕುಟುಂಬಸ್ಥರು ಗುರುತಿಸಿದ್ದು,ಅಫಜಲಪುರ ಸರಕಾರಿ ಆಸ್ಪತ್ರೆಗೆ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಕ್ಕೆ ಹಸ್ತಾಂತರ ಮಾಡಲಾಯಿತು.ಮೃತ ಭಾಗೇಶ್ ಅವರ ಅಂತಿಮ ಸಂಸ್ಕಾರವನ್ನು ಕುಟುಂಬಸ್ಥರು ಸೋಮವಾರ ಮಧ್ಯಾಹ್ನ ನೆರವೇರಿಸಿದರು.
