ಉದಯರಶ್ಮಿ ದಿನಪತ್ರಿಕೆ
ಬಸವನಬಾಗೇವಾಡಿ: ರಾಜ್ಯದಲ್ಲಿ ಸೆ.22 ರಿಂದ ಅ.7 ರವರೆಗೆ ಕರ್ನಾಟಕ ರಾಜ್ಯ ಹಿಂದುಳಿದ ಆಯೋಗದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಂಡಿದ್ದು. ಈ ಸಮೀಕ್ಷೆ ಕಾರ್ಯದಲ್ಲಿ ಪ್ರತಿಯೊಬ್ಬರೂ ಭಾಗವಹಿಸುವ ಮೂಲಕ ಸಮೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕೆಂದು ಸಕ್ಕರೆ,ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ಪಟ್ಟಣದ ವಿದ್ಯಾನಗರದಲ್ಲಿರುವ ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ ಗೊಳಸಂಗಿ ಅವರ ನಿವಾಸದ ಮುಂಭಾಗ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಸೋಮವಾರ ಹಮ್ಮಿಕೊಂಡಿದ್ದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ಅಂಗವಾಗಿ ಸಮೀಕ್ಷೆ ಮಾಡುವ ಶಿಕ್ಷಕರಿಗೆ ಕಿಟ್ ಅನ್ನು ವಿತರಿಸಿ ಮಾತನಾಡಿದ ಅವರು, ಸೆ.22 ರಿಂದ ಅ.7 ರವರೆಗೆ ನಡೆಯಲಿರುವ ಈ ಸಮೀಕ್ಷೆಯಲ್ಲಿ ಯಾರೂ ಹೊರಗುಳಿಯದಂತೆ ಸಮೀಕ್ಷೆದಾರರು ಗಮನಹ ಹರಿಸಬೇಕು. ರಾಜ್ಯದ 7 ಕೋಟಿ ಜನರ ಸಾಮಾಜಿಕ, ಶೈಕ್ಷಣಿಕ ಪರಿಸ್ಥಿತಿ ತಿಳಿದುಕೊಳ್ಳು ಉದ್ದೇಶದಿಂದ ಈ ಸಮೀಕ್ಷೆ ನಡೆಯುತ್ತಿದೆ. ಸಮೀಕ್ಷಾದಾರರು ಪ್ರತಿ ಸದಸ್ಯರ ವಿದ್ಯಾರ್ಹತೆ,ಕೌಶಲ್ಯ ತರಬೇತಿಯ ಅಗತ್ಯತೆ, ಆದಾಯ, ಕುಟುಂಬದ ಸ್ಥಿರ ಮತ್ತು ಚರಾಸ್ತಿ ವಿವರಗಳು ಧರ್ಮ, ಜಾತಿ, ಉಪಜಾತಿ ಹಾಗೂ ಕುಲಕಸುಬು ಮತ್ತಿತರ ಮಾಹಿತಿಗಳನ್ನು ಸಂಗ್ರಹಿಸಿ ಸಮೀಕ್ಷಾ ಆ್ಯಪ್ ನಲ್ಲಿ ಸಂಗ್ರಹಿಸಬೇಕು. ಸಮೀಕ್ಷಾದಾರರೊಂದಿಗೆ ಜನರು ಸಹಾಯ-ಸಹಕಾರ ನೀಡುವ ಮೂಲಕ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಯಶಸ್ವಿಗೊಳಿಸಬೇಕೆಂದರು.
ಈ ಸಂದರ್ಭದಲ್ಲಿ ಗ್ರೇಡ್-2 ತಹಸೀಲ್ದಾರ ಎಸ್.ಎಚ್.ಅರಕೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಕಲ್ಯಾಣಾಧಿಕಾರಿ ಶಾಂತಾಬಾಯಿ ನಿಂಬಾಳ, ರಾಜ್ಯ ಸಹಕಾರ ಮಹಾಮಂಡಳ ನಿರ್ದೇಶಕ ಈರಣ್ಣ ಪಟ್ಟಣಶೆಟ್ಟಿ, ಎಪಿಎಂಸಿ ಮಾಜಿ ಅಧ್ಯಕ್ಷ ಶೇಖರ ಗೊಳಸಂಗಿ, ಟಿಎಪಿಎಂಸ್ ಬ್ಯಾಂಕಿನ ಅಧ್ಯಕ್ಷ ಚಂದ್ರಶೇಖರಗೌಡ ಪಾಟೀಲ, ಪುರಸಭೆ ಅಧ್ಯಕ್ಷೆ ಜಗದೇವಿ ಗುಂಡಳ್ಳಿ, ಬಿಎಓ ವಸಂತ ರಾಠೋಡ, ಕ್ಷೇತ್ರಸಮನ್ವಾಧಿಕಾರಿ ಸುನೀಲ ನಾಯಕ, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರವಿ ರಾಠೋಡ, ಹಿಂದುಳಿದ ವರ್ಗಗಳ ಇಲಾಖೆಯ ವಿಸ್ತೀರ್ಣಾಧಿಕಾರಿ ಸಿ.ಜಿ.ಬಿರಾದಾರ, ಸಿಬ್ಬಂದಿಗಳಾದ ಎಸ್.ಸಿ.ಕುಂಟೋಜಿ, ಸಿದ್ರಾಮ ಕುರಬರ,ಎಸ್.ಎಸ್.ಕಿರಸೂರ, ರವಿ ಪಾಟೀಲ, ಶಿಕ್ಷಣ ಇಲಾಖೆಯ ಎಂ.ವ್ಹಿ.ಗಬ್ಬೂರ, ಎಚ್.ಬಿ.ಬಾರಿಕಾಯಿ, ಸಿದ್ದು ಉಕ್ಕಲಿ, ಆರುಂಧತಿ ಹತ್ತಿಕಾಳ, ಎ.ಎಂ.ಇನಾಮದಾರ, ಬಿ.ಎಸ್.ಚನ್ನಗೊಂಡ, ಎಸ್.ಬಿ.ದಳವಾಯಿ, ಎಂ.ಎಸ್.ಅವಟಿ, ಪಿ.ಎ.ಪಾಟೀಲ ಇತರರು ಇದ್ದರು.

