ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಮಹಿಳೆಯರ ಋತುಚಕ್ರ ಅಥವಾ ಮುಟ್ಟಾಗುವುದು ಒಂದು ನೈಸರ್ಗಿಕ ಪ್ರಕ್ರಿಯೆ. ಪ್ರೌಢಾವಸ್ಥೆಗೆ ಬಂದಾಗ ಪ್ರತಿಯೊಬ್ಬ ಮಹಿಳೆಯೂ ಕೂಡಾ ಈ ಹಂತವನ್ನು ದಾಟಲೇಬೇಕು. ಈ ಸಂದರ್ಭದಲ್ಲಿ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಅತೀ ಮುಖ್ಯ ಎಂದು ಭಾರತೀಯ ಕುಟುಂಬ ಯೋಜನಾ ಸಂಘದ ವೈದ್ಯಾಧಿಕಾರಿ ಡಾ.ಅನುರಾಧಾ ಜೋಶಿ ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಸಮಾಜಕಾರ್ಯ ಅಧ್ಯಯನ ವಿಭಾಗ ಹಾಗೂ ಮಮದಾಪುರ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ, ಭಾರತ ಸರ್ಕಾರದ ಪ್ರಧಾನಮಂತ್ರಿ ರಾಷ್ಟ್ರೀಯ ಉಚ್ಚತರ ಶಿಕ್ಷಣ ಅಭಿಯಾನ (ಪಿಎಂ–ಉಷಾ) ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಅನುದಾನದ ನೆರವಿನಿಂದ “ಮಹಿಳೆಯರ ಋತುಚಕ್ರ ರ‍್ಯೋಗ’ದ ಕುರಿತು ಮಮದಾಪುರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಮಹಿಳೆಯರು ಮುಟ್ಟಿನ ದಿನಗಳಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳದಿದ್ದರೆ ಹಲವಾರು ಬ್ಯಾಕ್ಟೀರಿಯಾ ಉತ್ಪತ್ತಿಯಾಗಿ ಸೋಂಕು ಹರಡುವುದರ ಜೊತೆಗೆ ಮಾರಣಾಂತಿಕ ಕಾಯಿಲೆಗಳಿಗೆ ಒಳಗಾಗುವ ಸಾಧ್ಯೆತಗಳಿವೆ ಎಂದರು.
ಮಹಿಳೆಯರ ಋತುಚಕ್ರದ ಸಂದರ್ಭದಲ್ಲಿ ಮಹಿಳೆಯರ ದೇಹದಲ್ಲಿ ಹಾರ್ವೋನ್‌ಗಳಲ್ಲಿ ಕಂಡು ಬರುವ ಬದಲಾವಣೆಗಳು ಮಹಿಳೆಯರಲ್ಲಿ ಹಲವಾರು ರೀತಿಯ ಮಾನಸಿಕ ಹಾಗೂ ದೈಹಿಕ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ, ಪ್ರಮುಖವಾಗಿ ಈ ಸಮಯದಲ್ಲಿ ವಿಪರೀತ ಹೊಟ್ಟೆನೋವು, ಕಾಲುಗಳಲ್ಲಿ ಸೆಳೆತ, ಕೆಲವರಲ್ಲಿ ಬೆನ್ನುನೋವು, ವಿಪರೀತ ಸ್ರವಿಕೆಯಂತಹ ದೈಹಿಕ ಸಮೆಸ್ಯೆಗಳು ಸಾಕಷ್ಟು ತೊಂದರೆಗಳೆಗೆ ಕಾರಣವಾಗುತ್ತವೆ. ಈ ತೊಂದರೆಗಳನ್ನು ಸಮಚಿತ್ತದಿಂದ ನಿಭಾಯಿಸಬೇಕು ಎಂದು ಅವರು ಕಿವಿಮಾತು ಹೇಳಿದರು.
ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಶಿವಾನಂದ ಹಿರೇಮಠ ಅವರು, ವಿದ್ಯಾರ್ಥಿಗಳು ಮುಟ್ಟಿನ ಆರೋಗ್ಯದ ಬಗ್ಗೆ ಕಾರ್ಯಾಗಾರದಲ್ಲಿ ಅರಿತುಕೊಂಡಿರುವ ಸಂಗತಿಗಳನ್ನು ಸದುಪಯೋಗ ಪಡೆದುಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ಕಾರ್ಯಾಗಾರದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಪ್ರೊ.ಜಿ.ಬಿ.ಸೋನಾರ ಅವರು, ಇಂದಿನ ದಿನಗಳಲ್ಲಿ ಹದಿಹರೆಯದ ವಿದ್ಯಾರ್ಥಿನಿಯರು ಆರೋಗ್ಯದ ಬಗ್ಗೆ ಅರಿವು ಮತ್ತು ಜ್ಞಾನ ಹೊಂದುವುದು ಅಗತ್ಯ ಎಂದರು.
ಕಾರ್ಯಾಗಾರದಲ್ಲಿ, ಡಾ.ಎಸ್ ಎಸ್ ಮೇತ್ರಿ, ಡಾ.ಪ್ರಕಾಶ ಹಡಪದ, ಕು.ರುಕ್ಸಾನ್ ಎಫ್ ಹಾಗೂ ಕಾಲೇಜಿನ ಎಲ್ಲ ಬೋಧಕ, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

