Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಿರಿಯ ಸಾಹಿತಿ, ಪದ್ಮಭೂಷಣ ಎಸ್.ಎಲ್.ಬೈರಪ್ಪ ಇನ್ನಿಲ್ಲ!
(ರಾಜ್ಯ ) ಜಿಲ್ಲೆ

ಹಿರಿಯ ಸಾಹಿತಿ, ಪದ್ಮಭೂಷಣ ಎಸ್.ಎಲ್.ಬೈರಪ್ಪ ಇನ್ನಿಲ್ಲ!

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ | ಶುಕ್ರವಾರ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ

ಉದಯರಶ್ಮಿ ದಿನಪತ್ರಿಕೆ

ಬೆಂಗಳೂರು: ಸರಸ್ವತಿ ಸಮ್ಮಾನ್, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ, ಹಿರಿಯ ಸಾಹಿತಿ, ಎಸ್ಎಲ್ ಬೈರಪ್ಪ (94) ಬುಧವಾರ ನಿಧನರಾದರು.
ಪರ್ವ, ಉತ್ತರಕಾಂಡ, ವಂಶವೃಕ್ಷ, ಆವರಣ ಸೇರಿ ಹಲವು ಕೃತಿಗಳನ್ನು ಎಸ್ಎಲ್ ಬೈರಪ್ಪ ರಚಿಸಿದ್ದರು. ಇಂದಿಗೂ ಕೂಡ ಎಸ್ಎಲ್ ಭೈರಪ್ಪನವರ ಕೃತಿಗಳು ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿವೆ.
ಮೈಸೂರಿನಲ್ಲಿ ವಾಸವಿದ್ದ ಎಸ್ಎಲ್ ಬೈರಪ್ಪ ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಎಸ್ಎಲ್ ಭೈರಪ್ಪ ಅವರ ಅನೇಕ ಕೃತಿಗಳು ಮರಾಠಿ, ಗುಜರಾತ್ ಸೇರಿದಂತೆ ದೇಶದ ಅನೇಕ ಭಾಷೆಗಳಿಗೆ ಅನುವಾದಗೊಂಡಿವೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಎಸ್ ಎಲ್ ಬೈರಪ್ಪ ನಿಧನರಾಗಿದ್ದಾರೆ.
ಗುರುವಾರ ಬೆಳಿಗ್ಗೆ 8 ಗಂಟೆಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ದರ್ಶನಕ್ಕೆ ಪಾರ್ಥಿವ ಶರೀರವನ್ನು ಇರಿಸಲಾಗುತ್ತದೆ. ಆ ಬಳಿಕ ಎಸ್​ ಭೈರಪ್ಪ ಅವರ ಅಂತ್ಯಕ್ರಿಯೆ ಶುಕ್ರವಾರ ಅಂದರೆ ಸೆಪ್ಟೆಂಬರ್ 26ರಂದು ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ನೆರವೇರಲಿದೆ.

ಸುವರ್ಣ ಪದಕದೊಂದಿಗೆ ತೇರ್ಗಡೆಯಾದ ಭೈರಪ್ಪನವರು

ಎಂ.ಎ.ನಲ್ಲಿ ಸುವರ್ಣ ಪದಕದೊಂದಿಗೆ ತೇರ್ಗಡೆಯಾದ ಭೈರಪ್ಪನವರು ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಿಂದ “ಸತ್ಯ ಮತ್ತು ಸೌಂದರ್ಯ”, ಎಂಬ ಇಂಗ್ಲಿಷ್‌ನಲ್ಲಿ ರಚಿಸಿದ ಮಹಾ ಪ್ರಬಂಧಕ್ಕಾಗಿ ಡಾಕ್ಟರೇಟ್ ಪದವಿ ಗಳಿಸಿದರು.
ಹುಬ್ಬಳ್ಳಿ, ಗುಜರಾತಿನ ಸರದಾರ್ ಪಟೇಲ್ ವಿಶ್ವ ವಿದ್ಯಾಲಯ, ದೆಹಲಿಗಳಲ್ಲಿ ತಮ್ಮ ಉಪನ್ಯಾಸಕ ವೃತ್ತಿ ಕೈಗೊಂಡ ಭೈರಪ್ಪನವರು, ಶಾಸ್ತ್ರಿಯ ಶಿಸ್ತಿನ ಓದಿನ ನಡುವೆ ಮಹತ್ವದ ಕಾದಂಬರಿಗಳನ್ನು ರಚಿಸಿದ್ದಾರೆ. 1961 ರಲ್ಲಿ ಧರ್ಮಶ್ರೀ' ಕಾದಂಬರಿ ಪ್ರಕಟಿಸಿ ಇದುವರೆವಿಗೆ ನಾಲ್ಕು ದಶಕಗಳಲ್ಲಿ 21 ಕಾದಂಬರಿಗಳನ್ನು ಬರೆದಿದ್ದಾರೆ. ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ, ಮತದಾನ ಕಾದಂಬರಿಗಳು ಚಲನಚಿತ್ರವಾಗಿ ಪ್ರಶಸ್ತಿ ಗಳಿಸಿವೆ. ವಂಶವೃಕ್ಷಕ್ಕೆ 1966 ರಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 1975ರಲ್ಲಿ ದಾಟು ಕಾದಂಬರಿಗೆ ರಾಜ್ಯ ಹಾಗೂ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿದೆ.ಪರ್ವ’ ಭೈರಪ್ಪನವರು ರಚಿಸಿದ ಕಾದಂಬರಿಗಳಲ್ಲೇ ಭಾರೀ ಚರ್ಚೆಗೆ ಒಳಗಾದದ್ದು. ಮಹಾಭಾರತ ಕಾಲದ ಭಾರತೀಯ ಸಮಾಜದ ರೀತಿ ನೀತಿಗಳನ್ನೂ, ಆ ಕಾಲದ ಜೀವನ ಮೌಲ್ಯಗಳನ್ನು, ಮೃತ್ಯುವಿನ ರಹಸ್ಯಾತ್ಮಕತೆಯನ್ನು ಕಾದಂಬರಿಯಲ್ಲಿ ಅರ್ಥಪೂರ್ಣವಾಗಿ ಬಿಂಬಿಸಲಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 

2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ

ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ತಿಕೋಟಾ ಭಾಗದ ರೈತರಿಗೆ ನೀರಿನ ಸಮಸ್ಯೆ ಬಗೆಹರಿಯಲಿದೆ
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ 
    In (ರಾಜ್ಯ ) ಜಿಲ್ಲೆ
  • 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ :ವಿಜಯೇಂದ್ರ ಸಿಎಂ
    In (ರಾಜ್ಯ ) ಜಿಲ್ಲೆ
  • ಬಿಸಿಲು ತಣಿಸಲು ಎಳನೀರು, ಕಲ್ಲಂಗಡಿಗೆ ಮೊರೆ ಹೋದ ಜನತೆ
    In (ರಾಜ್ಯ ) ಜಿಲ್ಲೆ
  • ಸರ್ಕಾರಿ ಆಸ್ಪತ್ರೆಗಳಲ್ಲಿ ಎಚ್‌ಪಿವಿ ಲಸಿಕೆ ಲಭ್ಯ :ಡಾ.ಮುಕುಂದ
    In (ರಾಜ್ಯ ) ಜಿಲ್ಲೆ
  • ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡಿ :ಮಹಾಲಿಂಗ ಶ್ರೀ
    In (ರಾಜ್ಯ ) ಜಿಲ್ಲೆ
  • ನೂತನ ತರಕಾರಿ ಮಾರುಕಟ್ಟೆ ನಿರ್ಮಿಸುವಂತೆ ಆಗ್ರಹಿಸಿ ಮನವಿ
    In (ರಾಜ್ಯ ) ಜಿಲ್ಲೆ
  • ಖೋಖೊ ದೈಹಿಕ ಸದೃಡತೆಯನ್ನು ಉತ್ತೇಜಿಸುವ ಸಾಂಪ್ರದಾಯಿಕ ಕ್ರೀಡೆ
    In (ರಾಜ್ಯ ) ಜಿಲ್ಲೆ
  • ಮಹಿಳೆ ಎಂದರೆ ತನ್ನದೇ ಆದ ಹೆಜ್ಜೆಯಲ್ಲಿ ನಡೆಯುವವಳು :ಭಾಗ್ಯಶ್ರೀ
    In (ರಾಜ್ಯ ) ಜಿಲ್ಲೆ
  • ಪಪೂ ಕಾಲೇಜು ಮಂಜೂರಾತಿಗೆ ಸಚಿವರಿಗೆ ಅಭಿನಂದನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.