Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅ.೨ರಂದು ಗಾಂಧೀಜಿ & ಶಾಸ್ತ್ರೀಜಿ ಜಯಂತಿಅರ್ಥಪೂರ್ಣ ಆಚರಣೆಗೆ ನಿರ್ಧಾರ
(ರಾಜ್ಯ ) ಜಿಲ್ಲೆ

ಅ.೨ರಂದು ಗಾಂಧೀಜಿ & ಶಾಸ್ತ್ರೀಜಿ ಜಯಂತಿಅರ್ಥಪೂರ್ಣ ಆಚರಣೆಗೆ ನಿರ್ಧಾರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಯಂತಿಯ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅಧಿಕಾರಿಗಳಿಗೆ ಸೂಚನೆ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಇದೇ ಅಕ್ಟೋಬರ್ ೨ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಯೋಜನೆಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದರು.
ಸಾರ್ವಜನಿಕರಿಗೆ ಮಹಾತ್ಮ ಗಾಂಧೀಜಿಯವರ ಬದುಕು, ಆದರ್ಶ ಹಾಗೂ ಅವರ ಜೀವನ ಸಂದೇಶದ ಅರಿವು ಮೂಡಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ ೩೦ ರಂದು ಬೆಳಗ್ಗೆ ೬.೩೦ಕ್ಕೆ ಸೈನಿಕ ಶಾಲೆಯ ಎದುರಿಗೆ ಇರುವ ಲಾಲ್ ಬಹದೂರ ಶಾಸ್ತ್ರಿ ಪುತ್ಥಳಿಯಿಂದ ಸೈಕಲ್ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳುವುದು. ಸೈಕಲ್ ಜಾಥಾ ತಂಡವು ಇಂಡಿ ರಸ್ತೆ ಹಾಗೂ ಕೇಂದ್ರ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಶ್ರಮ ದಾನ ಕೈಗೊಳ್ಳಲಾಗುವುದು.ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ, ವಿವಿಧ ಸಂಘ ಸಂಸ್ಥೆಗಳು ಶ್ರಮದಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ತಿಳಿಸಿದರು.
ನಗರದ ಗಾಂಧಿ ಚೌಕದಲ್ಲಿರುವ ಗಾಂಧಿಜಿ ಅವರ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಅವರ ಪುತ್ಥಳಿಗೆ ಮಾಲಾರ್ಪಣೆ, ಅಕ್ಟೋಬರ್ ೨ರಂದು ಬೆಳಗ್ಗೆ ೯.೩೦ಕ್ಕೆ ನಗರದ ಜಿಲ್ಲಾ ಪಂಚಾಯತಿಯ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಈ ಮಹನೀಯರ ಜಯಂತಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲು ನಿರ್ಣಯಿಸಲಾಯಿತು.
ವೇದಿಕೆ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ, ಸರ್ಮಧರ್ಮ ಪ್ರಾರ್ಥನೆ, ನಾಡಗೀತೆ, ಉಪನ್ಯಾಸ ಕಾರ್ಯಕ್ರಮ, ವಿವಿಧ ಶಾಲಾ ಮಕ್ಕಳಿಂದ ಛದ್ಮವೇಷ ಪ್ರದರ್ಶನ, ಗಾಂಧೀಜಿಯವರ ಪ್ರಿಯ ಹಾಡುಗಳ ಭಜನೆ ಕಾರ್ಯಕ್ರಮ ಆಯೋಜನೆ ಮಾಡಲು ಜಿಲ್ಲಾಧಿಕಾರಿಗಳು ಸಭೆಗೆ ತಿಳಿಸಿದರು.
ಮಹಾತ್ಮ ಗಾಂಧೀಜಿಯವರ ೧೫೬ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಜಿಲ್ಲಾ ಮಟ್ಟದಲ್ಲಿ ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ-ಸ್ನಾತಕೋತ್ತರ ಪದವಿ ವಿಭಾಗದ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾದ “ಬಾಪೂಜಿ ಪ್ರಬಂಧ ಸ್ಪರ್ಧೆ”ಯಲ್ಲಿ ವಿವಿಧ ವಿಭಾಗಗಳಲ್ಲಿ ತಲಾ ೩ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಮಹಾತ್ಮಾ ಗಾಂಧೀಜಿ ಜಯಂತಿ ಸಮಾರಂಭದಲ್ಲಿ ಬಹುಮಾನ ಮತ್ತು ಪ್ರಮಾಣಪತ್ರಗಳನ್ನು ಇಲಾಖೆಯಿಂದ ವಿತರಿಸಲು ಕ್ರಮವಹಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಅಮರೇಶ ದೊಡಮನಿ ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ, ಅಪರ ಜಿಲ್ಲಾಧಿಕಾರಿಗಳಾದ ಸೋಮಲಿಂಗ ಗೆಣ್ಣೂರ, ಪಾಲಿಕೆ ಆಯುಕ್ತರಾದ ವಿಜಯ ಮೆಕ್ಕಳಕಿ, ಪಶುಸಂಗೋಪನಾ ಇಲಾಖೆಯ ಉಪ ನಿರ್ದೇಶಕರಾದ ಅಶೋಕ ಗೋಣಸಗಿ, ಆಹಾರ ಇಲಾಖೆಯ ಉಪ ನಿರ್ದೇಶಕರಾದ ವಿನಯಕುಮಾರ ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ, ಪಂಚಾಯತ್ ರಾಜ್ ಇಂಜಿನೀಯರಿಂಗ್ ವಿಭಾಗದ ವಿದ್ಯಾಧರ ನ್ಯಾಮಗೊಂಡ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಹೇಶ ಪೋತದಾರ, ಕೆಕೆಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ನಾರಾಯಣಪ್ಪ ಕುರುಬರ, ಕ್ರೀಡಾಧಿಕಾರಿ ರಾಜಶೇಖರ್ ದೈವಾಡಿ, ನಿಲೇಶ್ ಬೆನಾಳ, ಪೀಟರ್ ಅಲೆಕ್ಸಾಂಡರ್, ಸುರೇಶ ಗೋಣಸಗಿ,ಅಡಿವೆಪ್ಪ ಸಾಲಗಲ್,ಭೀಮರಾಯ ಜಿಗಜಿಣಗಿ, ಸೋಮನಗೌಡ ಕಲ್ಲೂರ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.