ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ ೨೦೨೫-೨೬ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಲ್ಲಿ ಸಹಾಯಧನ ಸೌಲಭ್ಯಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮುಸ್ಲಿಂ, ಜೈನರು, ಬೌದ್ಧರು, ಸಿಖ್ ಹಾಗೂ ಪಾರ್ಸಿ ಜನಾಂಗದವರು ಸ್ವಾವಲಂಬಿ ಸಾರಥಿ ಯೋಜನೆ, ವೃತ್ತಿ ಪ್ರೋತ್ಸಾಹ ಸಾಲ ಯೋಜನೆ, ನೇರ ಸಾಲ ಯೋಜನೆ, ಶ್ರಮಶಕ್ತಿ ಸಾಲ ಯೋಜನೆ, ವಿದೇಶಿ ವಿದ್ಯಾಭ್ಯಾಸ ಸಾಲ ಯೋಜನೆ (ಫ್ರೆಶ್), ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ ಪ್ರೋತ್ಸಾಹಧನ ಯೋಜನೆ ಹಾಗೂ ಸಾಂತ್ವನ ಯೋಜನೆಗಾಗಿ ಸಹಾಯಧನ ಸೌಲಭ್ಯ ಪಡೆಯಲು ಅಕ್ಟೋಬರ್ ೧೬ರೊಳಗಾಗಿ https://kmdconline.karnataka.gov.in/ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ವಿಜಯಪುರದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ದೂರವಾಣಿ ಸಂಖ್ಯೆ: ೦೮೩೫೨-೨೭೮೩೪೪ ಹಾಗೂ ಮೊಬೈಲ್ ಸಂಖ್ಯೆ: ೮೨೭೭೯೪೪೨೦೯ ಸಂಪರ್ಕಿಸಬಹುದಾಗಿದೆ ಎಂದು ವಿಜಯಪುರದ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಪ್ರಕಟಣೆ ತಿಳಿಸಿದೆ.
