ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ-ಕಾಲೇಜು ವಿದ್ಯಾರ್ಥಿನಿಯರಿಗೆ ೬ ತಿಂಗಳ ಕರಾಟೆ- ಸ್ವಯಂ ರಕ್ಷಣಾ ಕೌಶಲ್ಯ ತರಬೇತಿ ನೀಡಲು ಅರ್ಹ ಮಹಿಳಾ ತರಬೇತಿದಾರರಿಂದ ಅರ್ಜಿ ಆಹ್ವಾನಿಸಲಾಗಿದೆ
ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ-ಕಾಲೇಜು, ಅಲ್ಪಸಂಕ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ-ಕಾಲೇಜು ಹಾಗೂ ಸರ್ಕಾರಿ ಮುಸ್ಲಿಂ ವಸತಿ ಶಾಲೆ-ಕಾಲೇಜುಗಳಲ್ಲಿ ೬ ರಿಂದ ೯ನೇ ತರಗತಿ ಹಾಗೂ ೧೧ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ೬ ತಿಂಗಳ ಕರಾಟೆ ತರಬೇತಿ ನೀಡಲು ಅರ್ಹ ಮಹಿಳಾ ತರಬೇತಿದಾರರಿಂದ ಅಕ್ಟೋಬರ್ ೩ರೊಳಗಾಗಿ ವಿಜಯಪುರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವವರು ನುರಿತ ತರಬೇತಿದಾರರಾಗಿರಬೇಕು. ಸಾಮಾನ್ಯ ಪದವಿ ಪಡೆದಿರಬೇಕು. ಅಂಗೀಕೃತ ಸಂಸ್ಥೆಯಿಂದ ಬ್ಲ್ಯಾಕ್ ಬೆಲ್ಟ್ ಪಡೆದಿದ್ದು, ಮಾಸ್ಟರ್ ಕಾರ್ಡ್ ಅಥವಾ ಗುರುತಿನ ಚೀಟಿಯನ್ನು ಪಡೆದಿರಬೇಕು ಹಾಗೂ ಕರಾಟೆ ತರಬೇತಿಯಲ್ಲಿ ಸೇವಾನುಭವ ಪ್ರಮಾಣ ಪತ್ರ ಪಡೆದಿರಬೇಕು.
ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿಯ ದೂರವಾಣಿ ಸಂಖ್ಯೆ: ೦೮೩೫೨-೨೯೫೫೨೩ ಸಂಪರ್ಕಿಸಬಹುದಾಗಿದೆ ಎಂದು ವಿಜಯಪುರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.
