ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಸಮುದಾಯಗಳ ಕುಂದು ಕೊರತೆ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ ಸೂಚನೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಅಲೆಮಾರಿ ಜನಾಂಗಕ್ಕೆ ಸರ್ಕಾರದ ಜಾರಿಗೊಳಿಸಿದ ವಿವಿಧ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿ, ಈ ಜನಾಂಗಕ್ಕೆ ಸರ್ಕಾರದಿಂದ ದೊರೆಯುವ ವಿವಿಧ ಸೌಲಭ್ಯಗಳ ಕುರಿತು ಸೂಕ್ತ ಜಾಗೃತಿ ಹಾಗೂ ಅರಿವು ಮೂಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಸಮುದಾಯಗಳ ಕುಂದು ಕೊರತೆ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಸಮುದಾಯದವರಿಗೆ ಸರ್ಕಾರ ನೀಡುವ ಯೋಜನೆಗಳನ್ನು ಸದುಪಯೋಗ ಪಡೆಸಿಕೊಂಡು ಇವರು ಆರ್ಥಿಕವಾಗಿ ಸಬಲ ಹಾಗೂ ಸದೃಢವಾಗಿ ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು ಸರ್ಕಾರದ ಯೋಜನೆಗಳ ಲಾಭ ದೊರಕಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸಿವಿ ಕುಂಬಾರ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಬದ್ರುದ್ದೀನ ಸೌಧಾಗರ, ಸಮಾಜ ಕಲ್ಯಾಣದ ಉಪ ನಿರ್ದೇಶಕರಾದ ಮಹೇಶ ಪೋತ್ದಾರ, ಸಹಾಯಕ ನಿರ್ದೇಶಕರಾದ ಬಿ.ಜೆ.ಇಂಡಿ, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಸಂಗಣಗೌಡ ಪಾಟೀಲ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಲೆಮಾರಿ ಮತ್ತು ಬುಡಕಟ್ಟು ಸಮುದಾಯ ಯೋಜನೆಗಳ ಜಿಲ್ಲಾ ಮಟ್ಟದ ಅನುಷ್ಠಾನ ಸಮಿತಿಯ ಸದಸ್ಯರುಗಳಾದ ಸುನೀಲ ಭಜಂತ್ರಿ, ಸಂಜೀವಕುಮಾರ ದಶವಂತ, ಧರ್ಮಣ್ಣ ವಿಭೂತಿ, ರಾಹುಲ ಶಿಳ್ಳಿಕ್ಯಾತರ ಸೇರಿದಂತೆ ತಾಲೂಕಿನ ಮುಖ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

