ವಿಜಯಪುರ: ಕೇಂದ್ರ ಬರ ತಂಡ ಆಗಮನ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಗುರುವಾರ ಜಿಲ್ಲೆಯ ಹೊರ್ತಿ ಹಾಗೂ ಕಪನಿಂಬರಗಿ ಗ್ರಾಮಗಳಿಗೆ ಭೇಟಿ ನೀಡಿ, ಬರದಿಂದ ಹಾನಿಗೊಳಗಾದ ತೋಟಗಾರಿಕೆ ಬೆಳೆಗಳಾದ ಲಿಂಬೆ, ಈರುಳ್ಳಿ, ಮೆಣಸಿನಕಾಯಿ, ಕೃಷಿ ಬೆಳೆಗಳಾದ ಸಜ್ಜೆ, ಮೆಕ್ಕೆಜೋಳ ಬೆಳೆಗಳ ಕುರಿತು ಮಾಹಿತಿ ಪಡೆದುಕೊಂಡರು. ಕೋಳೂರಗಿ ಗ್ರಾಮದ ರೈತರೋರ್ವ ಜಮೀನಿನಲ್ಲಿ ಸೂರ್ಯಕಾಂತಿ ಬೆಳೆ ಕಟಾವು ವೀಕ್ಷಿಸಿದರು.
ಈ ಸಂದರ್ಭದಲ್ಲಿ ಕಪನಿಂಬರಗಿ ಕೆರೆ ವೀಕ್ಷಣೆ ಮಾಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶಿಂಧೆ, ಇಂಡಿ ಉಪವಿಭಾಗಾಧಿಕಾರಿ ಆಬೀದ ಗದ್ಯಾಳ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಾಹುಲ್ ಭಾವಿದೊಡ್ಡಿ, ಕೃಷಿ ಇಲಾಖೆ ಉಪನಿರ್ದೇಶಕ ಪ್ರಕಾಶ ಚವ್ಹಾಣ ಸೇರಿದಂತೆ ಇತರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
ಡಿಸಿ ಟಿ.ಭೂಬಾಲನ್ ಹೊರ್ತಿ ಗ್ರಾಮಕ್ಕೆ ಭೇಟಿ :ಬೆಳೆ ಹಾನಿ ವೀಕ್ಷಣೆ
Related Posts
Add A Comment

