ವಿಜಯಪುರ: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸದು), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ), ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಸ್ವಾವಲಂಬಿ ಸಾರತಿ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದ್ದು, ಬೆಂಗಳೂರು ಒನ್, ಕರ್ನಾಟಕ ಒನ್, ಅಟಲ್‌ಜೀ ಜನಸ್ನೇಹಿ ಕೇಂದ್ರ ಮತ್ತು ನಾಗರಿಕರ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟ್ಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೦೨-೧೧-೨೦೨೩ ಕೊನೆಯ ದಿನವಾಗಿದೆ. .ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ.
ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್: https://ambigaradevelopment.karnataka.gov.inಹಾಗೂ ಸಹಾಯವಾಣಿ ಸಂಖ್ಯೆ : ೦೮೦-೨೨೮೬೪೦೯೯, ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವ್ಯವಸ್ಥಾಪಕ ಕೆ.ಎಂ.ಭಾವಿಕಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ ಸಾಲ-ಸೌಲಭ್ಯಕ್ಕೆ ಅರ್ಜಿ ಆಹ್ವಾನ
Related Posts
Add A Comment