ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಡಾ.ಇ.ಮೋಹನ್ ರಾವ್ ಅಭಿಮತ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ಖಾದಿ ಧರಿಸುವುದರಿಂದ ಪ್ರತಿ ಭಾರತೀಯನು ದೇಶದ ಆರ್ಥಿಕ ಸ್ವಾತಂತ್ರ‍್ಯಕ್ಕೆ ಕೊಡುಗೆ ನೀಡಬಹುದು ಎಂದು ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ನಿರ್ದೇಶಕ ಡಾ.ಇ.ಮೋಹನ್ ರಾವ್ ಹೇಳಿದರು.
ನಗರದ ಬಿ.ಎ.ಲ್.ಡಿ.ಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ. ವಿಜ್ಞಾನ ಕಾಲೇಜಿನಲ್ಲಿ ಇನ್‌ಸ್ಟಿಟೂಟ್ ಇನ್ನೋವೇಶನ್ ಕೌನ್ಸಿಲ್ (ಐಐಸಿ), ಐಕ್ಯೂಎಸಿ, ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ (ಕೆವಿಐಸಿ) ಹಾಗೂ ಎ.ಸ್ ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಸಹಯೋಗದಲ್ಲಿ ಅಯೋಜಿಸಲಾದ ಖಾದಿ ಮಹೋತ್ಸವ ೨೦೨೫ ಹಾಗೂ ಆಜಾದಿ ಕಾ ಅಮೃತ್ ಮಹೋತ್ಸವ -೨೦೨೫ ದಡಿಯಲ್ಲಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸ್ವದೇಶಿ, ಸ್ವಾವಲಂಬನೆ ಮತ್ತು ಸ್ವಚ್ಛತೆಯನ್ನು ಉತ್ತೇಜಿಸಲು ರಾಷ್ಟ್ರವ್ಯಾಪಿ ಆಚರಣೆಯಡಿಯಲ್ಲಿ ನಡೆಯುತ್ತಿರುವ ಅಭಿಯಾನ ಗ್ರಾಮೀಣರಿಗೆ ಸ್ವಾವಲಂಬನೆಯಾಗಿಸಲು ಯೋಜನೆ ಕೈಗೊಳ್ಳಲಾಗಿದೆ. ಖಾದಿ ಬಳಕೆ ಮೂಲಕ ಮಹಾತ್ಮಾ ಗಾಂಧೀಜಿಯವರು ದೇಶಕ್ಕೆ ಸ್ವಾತಂತ್ರತ್ರ‍್ಯ ತಂದುಕೊಟ್ಟಿದ್ದಾರೆ ಎಂದರು.
ಗಾಂಧೀಜಿಯವರು ಭಾರತೀಯರನ್ನು ವಿದೇಶಿ ಬಟ್ಟೆಗಳನ್ನು ಬಹಿಷ್ಕರಿಸುವಂತೆ ಪ್ರೇರೇಪಿಸಿದರು, ಹಳ್ಳಿಗಳಲ್ಲಿ ಉದ್ಯೋಗಗಳನ್ನು ಸೃಷ್ಟಿಸಿದರು ಮತ್ತು ಆರ್ಥಿಕ ಸ್ವಾತಂತ್ರ‍್ಯವನ್ನು ಉತ್ತೇಜಿಸಿದರು. ಗ್ರಾಮೀಣ ಕಸಬುದಾರರ ಜೀವನಮಟ್ಟವನ್ನು ಸುಧಾರಿಸಲು ಮತ್ತು ಭಾರತದ ಗ್ರಾಮ ಆರ್ಥಿಕತೆಯನ್ನು ಬಲಪಡಿಸಲು ಅಸ್ತಿತ್ವದಲ್ಲಿದೆ ಎಂದು ಹೇಳಿದರು.
ಈ ವೇಳೆಯಲ್ಲಿ ಪ್ರಾಚಾರ್ಯೆ ಡಾ.ಆರ್.ಎಂಮಿರ್ಧೆ ಮಾತನಾಡಿ, ಸ್ವಾವಲಂಬನೆ ಮತ್ತು ಸ್ವಾತಂತ್ರ‍್ಯದ ಸಂಕೇತ ಗಾಂಧೀಜಿಯವರಿಗೆ ಖಾದಿ ಕೇವಲ ಬಟ್ಟೆಯಲ್ಲ, ಅದು ಭಾರತೀಯರ ಆರ್ಥಿಕ ಸ್ವಾತಂತ್ರ‍್ಯದ ಮತ್ತು ಸ್ವಾವಲಂಬನೆಯ ಸಂಕೇತವಾಗಿದೆ. ಎಂದು ಹೇಳಿದರು.
ಈ ವೇಳೆಯಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಸಹಾಯಕ ನಿರ್ದೇಶಕ .ಜಿ. ರಾಜಣ್ಣ ಹಾಗೂ ಕೆಕೆಜಿಎಸ್ ಮುಖ್ಯಸ್ಥ ಶ್ರೀ.ಬಿ.ಬಿ ಪಾಟೀಲ ಖಾದಿ ಮತ್ತು ಗ್ರಾಮೋದ್ಯೋಗದ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಉಪಪ್ರಾಚಾರ್ಯ ಡಾ.ಅನೀಲ.ಭೀ.ನಾಯಕ, ಎ.ಸ್ ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎಸ್.ಬಿ ಕಮತಿ, ಡಾ.ಕೃಷ್ಣಾ ಮಂಡ್ಲ, ಡಾ.ಅನಿಲ ಪಾಟೀಲ, ಡಾ.ಉಷಾದೇವಿ ಹಿರೇಮಠ, ಡಾ.ರವಿಂದ್ರ, ಡಾ.ಶ್ರೀನಿವಾಸ ದೊಡ್ಡಮನಿ, ರಾಜೇಶ್ವರಿ ಪುರಾಣಿಕ ಸೇರಿದಂತೆ ಇನ್ನಿತರ ಬೋಧಕ,ಬೋಧಕೇತರ ಸಿಬ್ಬಂದಿ ಹಾಗೂ ಎಸ್.ಪಾಟೀಲ ಮಹಾವಿದ್ಯಾಲಯದ ಬೋಧಕ ಸಿಬ್ಬಂದಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

