ಉದಯರಶ್ಮಿ ದಿನಪತ್ರಿಕೆ
ದೇವರಹಿಪ್ಪರಗಿ: ಪಟ್ಟಣದ ಈರನಗೌಡ ಪಾಟೀಲ ಅವರು ಕಲಬುರ್ಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕೊಡಮಾಡುವ ಸಾರ್ಥಕ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕಲಬುರ್ಗಿ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ ಪ್ರತಿ ವರ್ಷ ಸುಭದ್ರ ಸಮಾಜ ಕಟ್ಟುವ ಕಾರ್ಯದಲ್ಲಿ ತೊಡಗಿರುವ ಜಿಲ್ಲೆಯ ಆಯ್ದ ವಿಶೇಷ ಶಿಕ್ಷಕರಿಗೆ ಈ ಪ್ರಶಸ್ತಿಯನ್ನು ನೀಡುತ್ತಿದ್ದು, ಸದ್ಯ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ಕಲಬುರ್ಗಿಯ ಎಂ.ಎಸ್. ಇರಾಣಿ ಪದವಿಪೂರ್ವ ಕಾಲೇಜಿನಲ್ಲಿ ಇತಿಹಾಸ ಉಪನ್ಯಾಸಕರಾಗಿರುವ ಐ.ಕೆ.ಪಾಟೀಲ ಆಯ್ಕೆಯಾಗಿದ್ದಾರೆ.
ಸೆಪ್ಟೆಂಬರ್ ೨೬ ರಂದು ಬೆಳಿಗ್ಗೆ ೧೧ ಘಂಟೆಗೆ ಕಲಬುರ್ಗಿ ಕನ್ನಡ ಭವನದ ಸುವರ್ಣ ಸಭಾಭವನದಲ್ಲಿ ಈ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದ್ದು , ಹೈದರಾಬಾದ ಕರ್ನಾಟಕ ಶಿಕ್ಷಣಸಂಸ್ಥೆಯ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಶಶೀಲ್ ನಮೋಶಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಡಾ.ಬಿ.ಸುಶೀಲಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭಂವರ್ ಸಿಂಗ್ ಮೀನಾ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಜಿಲ್ಲಾ ಪಂಚಾಯಿತಿ ಮಾಜಿಸದಸ್ಯ ರಾಜೇಶ ಜಗದೇವ ಗುತ್ತೆದಾರ, ಡಿಡಿಪಿಐ ಸೂರ್ಯಕಾಂತ ಮದಾನೆ ಉಪಸ್ಥಿತರಿರಲಿದ್ದಾರೆ. ಪ್ರಶಸ್ತಿ ವಿಜೇತ ಐ.ಕೆ. ಪಾಟೀ¯ರನ್ನು ದೇವರಹಿಪ್ಪರಗಿ ಗೆಳೆಯರ ಬಳಗದ ಸದಸ್ಯರು ಅಭಿನಂದಿಸಿದ್ದಾರೆ.

