ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಗೀತ ಸಂಗೀತ ಅಕಾಡೆಮಿ (ರಿ) ಟ್ರಸ್ಟ್, ಕಲ್ಪತರು ಸಾಹಿತ್ಯ ಕಲಾ ಟ್ರಸ್ಟ್ (ರಿ) ಬೆಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆ, ಬೆಂಗಳೂರು ಇವರ ಸಹಯೋಗದಲ್ಲಿ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತು, ಅಕ್ಕಮಹಾದೇವಿ ಸಭಾಂಗಣದಲ್ಲಿ ಶರಣೋತ್ಸವ, ವಚನ ಗಾಯನ, ಪ್ರಶಸ್ತಿ ಪ್ರದಾನ ಸಮಾರಂಭ ಇದೇ ಭಾನುವಾರ (28.09.2025) ಮಧ್ಯಾಹ್ನ 3:00 ಗಂಟೆಗೆ ಜರುಗಲಿದೆ.
ಇದೇ ವೇಳೆ ತಾಲೂಕಿನ ಬೋರಗಿ ಗ್ರಾಮದ ಆರಕ್ಷಕ ಮೌಲಾಲಿ ಆಲಗೂರ ಇವರ ಸಾಹಿತ್ಯ ಸೇವೆಯನ್ನು ಪರಿಗಣಿಸಿ ಬಸವ ಕಾಯಕ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಮುಖ್ಯಸ್ಥರಾದ ಎಂ.ವಿ ಷಡಕ್ಷರಿ ಹಾಗೂ ಸಂಗೀತ ನಿರ್ದೇಶಕ ರಾಜು ಎಮ್ಮಿಗನೂರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

