Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕೇಂದ್ರದ ಡಿಜಿಟಲ್ ಉಪಕ್ರಮಗಳಿಂದ ಜನತೆಗೆ ಪ್ರಯೋಜನ
(ರಾಜ್ಯ ) ಜಿಲ್ಲೆ

ಕೇಂದ್ರದ ಡಿಜಿಟಲ್ ಉಪಕ್ರಮಗಳಿಂದ ಜನತೆಗೆ ಪ್ರಯೋಜನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ವಿಜಯಪುರದ ಮಾಧ್ಯಮ ಪ್ರತಿನಿಧಿಗಳಿಗೆ “ವಾರ್ತಾಲಾಪ” ಕಾರ್ಯಾಗಾರ | ಸಂಸದ ರಮೇಶ ಜಿಗಜಿಣಗಿ ಅಭಿಮತ

ಉದಯರಶ್ಮಿ ದಿನಪತ್ರಿಕೆ

ವಿಜಯಪುರ: ಭಾರತ ಸರ್ಕಾರದ ವಾರ್ತಾ ಶಾಖೆ (ಪಿಐಬಿ) ಬೆಂಗಳೂರು, ಕೇಂದ್ರ ಸಂವಹನ ಇಲಾಖೆ, ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ (ಎನ್‌ಟಿಪಿಸಿ) ಕೂಡಗಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ), ಕರ್ನಾಟಕ ಕಾರ್ಯನಿರತ ಸಂಪಾದಕರ ಸಂಘ (ರಿ), ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ (ರಿ) ಮತ್ತು ಕರ್ನಾಟಕ ಸಂಪಾದಕೀಯರ ಸಂಘ (ರಿ) ಇವರ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ “ವಾರ್ತಾಲಾಪ” ಕಾರ್ಯಾಗಾರ ಆಯೋಜಿಸಲಾಗಿತ್ತು.
ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಲೋಕಸಭಾ ಸದಸ್ಯ ರಮೇಶ ಜಿಗಜಿಣಗಿ ಅವರು, ಕೇಂದ್ರ ಸರ್ಕಾರದ ಅನೇಕ ಯೋಜನೆಗಳಿಂದ ಜನರು ಫಲಾನುಭವಿಗಳಾಗುತ್ತಿದ್ದಾರೆ. ಡಿಜಿಟಲೀಕರಣದಿಂದ ಯೋಜನೆಗಳ ಲಾಭ ಸುಲಭವಾಗಿ ಎಲ್ಲರಿಗೂ ದೊರೆಯುವಂತಾಗಿದೆ. ಆನ್ ಲೈನ್ ಹಣಕಾಸು ವಹಿವಾಟು ನಡೆಸುವ ಅಪ್ಲಿಕೇಶನ್ ಗಳನ್ನು ಜನರು ವ್ಯಾಪಕವಾಗಿ ಬಳಸುತ್ತಿರುವುದು ಅಭಿವೃದ್ಧಿಯ ಸಂಕೇತ ಎಂದು ಹೇಳಿದರು.
ಕೇಂದ್ರ ವಾರ್ತಾ ಶಾಖೆಯ ಹೆಚ್ಚುವರಿ ಮಹಾನಿರ್ದೇಶಕ ಎಸ್.ಜಿ. ರವೀಂದ್ರ ಮಾತನಾಡಿ, ಪತ್ರಕರ್ತರಿಗೆ ಕೇಂದ್ರ ಸರ್ಕಾರದ ಯೋಜನೆಗಳ ಅರಿವು ಮೂಡಿಸುವುದು ‘ವಾರ್ತಾಲಾಪ’ ಕಾರ್ಯಾಗಾರದ ಮುಖ್ಯ ಉದ್ದೇಶ ಎಂದರು.
ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ, ಕೂಡಗಿಯ ಪ್ರಧಾನ ವ್ಯವಸ್ಥಾಪಕ ಸಂತೋಷ್ ತಿವಾರಿ, ಎನ್.ಟಿ.ಪಿ.ಸಿ. ನಿಗಮ ತನ್ನ ಸಾಮಾಜಿಕ ಹೊಣೆಗಾರಿಕೆ ನೀತಿಯಡಿ ಅನೇಕ ಶೈಕ್ಷಣಿಕ, ಸಾಮಾಜಿಕ ಚಟುವಟಿಕೆಗಳನ್ನು ಕೈಗೊಂಡಿದೆ. ವಿದ್ಯಾರ್ಥಿಗಳಿಗೆ ಶಿಷ್ಯವೇತನ, ಸೈಕಲ್, ಶೈಕ್ಷಣಿಕ ಸಾಮಗ್ರಿಗಳು, ಮಹಿಳೆಯರಿಗೆ ಹೊಲಿಗೆ ಯಂತ್ರ, ಶೌಚಾಲಯಗಳು ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ಹೇಳಿದರು.
ಕಾರ್ಯಾಗಾರದಲ್ಲಿ ‘ಜಿ.ಎಸ್.ಟಿ. ೨.೦’ ಕುರಿತು ಸಿಜಿಎಸ್‌ಟಿ ವಿಜಯಪುರ ವಿಭಾಗದ ಸಹಾಯಕ ಆಯುಕ್ತರಾದ ಶ್ರೀ ವಾಯ್.ಸಿ. ಪೂಜಾರಿ, ‘ಸ್ವಸ್ಥ ನಾರಿ ಸಶಕ್ತ ಪರಿವಾರ’ ಅಭಿಯಾನ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಯೋಜನೆಗಳ ಅನುಷ್ಠಾನ ಕುರಿತು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸಂಪತ್ ಕುಮಾರ್ ಗುಣಾರಿ, ‘ಕೃಷಿ ತೋಟಗಾರಿಕಾ ವಲಯದ ಯೋಜನೆಗಳ ಅನುಷ್ಠಾನ’ ಕುರಿತು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶ್ರೀ ಶಿವನಗೌಡ ಎಸ್. ಪಾಟೀಲ್, ‘ಹಣಕಾಸು ಸೇರ್ಪಡೆ ಪರಿಪೂರ್ಣತೆ ಅಭಿಯಾನ’ ಕುರಿತು ಕೆನರಾ ಬ್ಯಾಂಕ್ ಮತ್ತು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ವ್ಯವಸ್ಥಾಪಕರಾದ ಬಿ. ಸಿದ್ದಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಹಾಗೂ ಪೋಷಣಾ ಅಭಿಯಾನದ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಹಿಳಾ ಸಬಲೀಕರಣ ಘಟಕದ ಜಿಲ್ಲಾ ಸಂಯೋಜಕರಾದ ಶ್ರೀಮತಿ ಭಾರತಿ ಪಾಟೀಲ್, ಹೃದಯ ರೋಗಗಳ ಕುರಿತು ಹೃದ್ರೋಗ ತಜ್ಞರಾದ ಡಾ. ಶಂಕರಗೌಡ ಪಾಟೀಲ ಅವರು ಮಾಹಿತಿ ನೀಡಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಪ್ರಕಾಶ್ ಜಿ. ಬೆಣ್ಣೂರ, ಕಾರ್ಯನಿರತ ಸಂಪಾದಕರ ಸಂಘದ ಅಧ್ಯಕ್ಷ ಈರ್ಫಾನ್ ಶೇಖ್, ಪತ್ರಕರ್ತರ ಧ್ವನಿ ಸಂಘದ ಅಧ್ಯಕ್ಷ ಗುರುರಾಜ್ ಹೂಗಾರ್, ಕರ್ನಾಟಕ ರಾಜ್ಯ ಮಹಿಳಾ ಸಂಪಾದಕಿಯರ ಸಂಘದ ಅಧ್ಯಕ್ಷೆ ರಶ್ಮಿ ಪಾಟೀಲ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಇಲಾಖೆಯಿಂದ ಆರೋಗ್ಯ ಶಿಬಿರ ಆಯೋಜಿಸಲಾಗಿತ್ತು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪೌಷ್ಟಿಕ ಆಹಾರ ಪ್ರದರ್ಶನ ಏರ್ಪಡಿಸಲಾಗಿತ್ತ

” ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ. ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿರಿಸಿಕೊಳ್ಳುವಲ್ಲಿ ಪ್ರತಿಯೊಬ್ಬರ ಜವಾಬ್ದಾರಿ ಗಣನೀಯವಾಗಿದೆ. ಸಮಾಜದಲ್ಲಿ ಸ್ವಚ್ಛತೆಯ ಕುರಿತು ಅರಿವು ಮೂಡಿದಾಗ ಮಾತ್ರ ನಾವು ಬದಲಾವಣೆ ಕಾಣಲು ಸಾಧ್ಯ.”

– ರಿಷಿ ಆನಂದ್
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ

“ಮಾಧ್ಯಮಗಳು ಸುದ್ದಿ ಬಿತ್ತರಿಸುವ ಮುನ್ನ ಸಾಮಾಜಿಕ ಜವಾಬ್ದಾರಿ ಪಾಲಿಸಬೇಕು. ಸೂಕ್ಷ್ಮ ಘಟನೆಗಳ ವರದಿಗಾರಿಕೆಯ ವೇಳೆ ಕಾನೂನಿನ ಅರಿವಿನೊಂದಿಗೆ ವರದಿ ಮಾಡಿದಾಗ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಸಾಧ್ಯ.”

– ಲಕ್ಷ್ಮಣ ನಿಂಬರಗಿ
ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

“ಉತ್ತಮ ಸಮಾಜ ನಿರ್ಮಾಣದಲ್ಲಿ ಆಡಳಿತ ಹಾಗೂ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಮಾಧ್ಯಮಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿದಾಗ ಸರ್ಕಾರದ ಯೋಜನೆಗಳನ್ನು ಮತ್ತಷ್ಟು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಹಕಾರಿಯಾಗಲಿದೆ.”

– ಡಾ.ಆನಂದ್ ಕೆ
ಜಿಲ್ಲಾಧಿಕಾರಿ, ವಿಜಯಪುರ

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026

ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ

ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ

ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
  • ಸಂಸ್ಕರಣಾ ಘಟಕ ಅನುಷ್ಠಾನಕ್ಕೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮುದ್ದೇಬಿಹಾಳದಲ್ಲಿ ಬೃಹತ್ ಉದ್ಯೋಗ ಮೇಳ ಇಂದು
    In (ರಾಜ್ಯ ) ಜಿಲ್ಲೆ
  • ನಮ್ಮ ಸರಕಾರ ಅಭಿವೃದ್ಧಿಗೆ ಬದ್ಧ :ಸಚಿವ ಎಂ.ಬಿ.ಪಾಟೀಲ
    In (ರಾಜ್ಯ ) ಜಿಲ್ಲೆ
  • ನೀಟ್ ಪರೀಕ್ಷೆ: ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ದ್ವಿತೀಯ ಪಿಯುಸಿ ಪರೀಕ್ಷೆ-೨ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ
    In (ರಾಜ್ಯ ) ಜಿಲ್ಲೆ
  • ಪರಿಶೀಲನಾ ಅದಾಲತ್ ಮುಂದೂಡಿಕೆ: ಡಿಸಿ ಡಾ.ಆನಂದ
    In (ರಾಜ್ಯ ) ಜಿಲ್ಲೆ
  • ಮದ್ಯದಂಗಡಿ ಆರಂಭಿಸದಿರಲು ಆಗ್ರಹಿಸಿ ಮುಸ್ಲಿಂ ಬಾಂಧವರ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.