ಜಾಗೃತಿ ಕಾರ್ಯಾಗಾರಕ್ಕೆ ಚಾಲನೆ ನೀಡಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿಕೆ
ಉದಯರಶ್ಮಿ ದಿನಪತ್ರಿಕೆ
ವಿಜಯಪುರ: ತಂತ್ರಜ್ಞಾನ, ಆಹಾರ ಉತ್ಪಾದನೆ, ನ್ಯಾಯದಾನ ವ್ಯವಸ್ಥೆ ಹೀಗೆ ಎಲ್ಲ ಕ್ಷೇತ್ರಗಳಲ್ಲಿಯೂ ಅನೇಕ ಸುಧಾರಣೆಗಳನ್ನು ತರಲಾಗಿದ್ದು ಆತ್ಮನಿರ್ಭರ ಸಾಕ್ಷಾತ್ಕಾರವಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.
ವಿಜಯಪುರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನ ಅಂಗವಾಗಿ ಜಾಗೃತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸ್ವಾವಲಂಬನೆ ಹಾಗೂ ಸ್ವದೇಶಿ ಉತ್ಪಾದನೆಗೆ ಆದ್ಯತೆ ಕಲ್ಪಿಸಿದ ಪರಿಣಾಮ ಆತ್ಮ ನಿರ್ಭರ ಭಾವ ಸಾಕಾರ ರೂಪ ತೆಳೆದಿದೆ ಎಂದರು.
೨೦೧೪ ರಲ್ಲಿ ಕೇವಲ ೨೫.೫ ಕೋಟಿ ಅಂತರ್ಜಾಲ ಸಂಪರ್ಕವಿದ್ದು, ಈ ಸಂಖ್ಯೆ ೯೭ ಕೋಟಿಗೆ ಏರಿಕೆಯಾಗಿದ್ದು, ಅಂತರ್ಜಾಲ ಬಳಕೆ ಶೇ.೨೮೫ಕ್ಕೆ ಏರಿಕೆಯಾಗಿರುವುದು ಗಮನಾರ್ಹ ಸಾಧನೆಗಳಲ್ಲಿ ಒಂದು, ೨.೧೪ ಲಕ್ಷ ಗ್ರಾಮ ಪಂಚಾಯಿತಿಗಳಿಗೆ ಬ್ರಾಡ್ ಬ್ಯಾಂಡ್ ಸಂಪರ್ಕವನ್ನು ಕಲ್ಪಿಸಿ ಆಧುನಿಕತೆ ಸ್ಪರ್ಶ ಸಾಧ್ಯವಾಗಿದೆ ಎಂದರು.
ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಸ್ಟಾರ್ಟ್ ಅಪ್ ಇಂಡಿಯಾ ಮೂಲಕ ೧.೬ ಲಕ್ಷಕ್ಕೂ ಅಧಿಕ ಸ್ಟಾರ್ಟ್ ಅಪ್‌ಗಳಿಗೆ ಉತ್ತೇಜನ ಮಾಡುವ ಮೂಲಕ ೧೭.೬ ಲಕ್ಷ ಉದ್ಯೋಗಗಳ ಸೃಷ್ಟಿ ಮಾಡಲಾಗಿದ್ದು ಬಡತನ ಪ್ರಮಾಣ ಕಡಿಮೆ ಮಾಡುವಲ್ಲಿ ಆದ್ಯ ಪಾತ್ರ ವಹಿಸಿದೆ. ಈ ಎಲ್ಲ ಮಹತ್ವದ ಕಾರ್ಯ ಯೋಜನೆಗಳ ಮಹತ್ವಗಳನ್ನು ಮನೆ-ಮನೆಗೂ ತಲುಪಿಸುವ ಕಾರ್ಯವನ್ನು ಬಿಜೆಪಿ ಕಾರ್ಯಕರ್ತರು ಮಾಡಬೇಕು ಎಂದು ಕರೆ ನೀಡಿದರು.
ಆತ್ಮ ನಿರ್ಭರ ಜಿಲ್ಲಾ ಸಂಚಾಲಕ ಎಸ್.ಎ. ಪಾಟೀಲ, ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ, ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ, ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಮಾಜಿ ಶಾಸಕ ಸೋಮನಗೌಡ ಪಾಟೀಲ ಸಾಸನೂರ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ, ಉಪ ಮೇಯರ್ ಸುಮಿತ್ರಾ ಜಾಧವ, ಮುಖಂಡರಾದ ಚಂದ್ರಶೇಖರ ಕವಟಗಿ, ಉಮೇಶ ಕಾರಜೋಳ, ಮಳುಗೌಡ ಪಾಟೀಲ, ಕಾಸುಗೌಡ ಬಿರಾದಾರ, ಸಂಜೀವ ಐಹೊಳಿ, ಸಾಬು ಮಾಶ್ಯಾಳ, ಮಲ್ಲಿಕಾರ್ಜುನ ಜೋಗೂರ, ಕೃಷ್ಣಾ ಗುನ್ನಾಳಕರ, ಶಿಲ್ಪಾ ಕುದರಗೊಂಡ, ಪ್ರಭುಸ್ವಾಮಿ ಹಿರೇಮಠ, ಮಲ್ಲಿಕಾರ್ಜುನ ದೇವರಮನಿ, ಡಾ.ಸುರೇಶ ಬಿರಾದಾರ, ಸ್ವಪ್ನಾ ಕಣಮುಚನಾಳ, ಪಾಲಿಕೆ ಸದಸ್ಯರು, ಮಹಿಳಾ ಮೋರ್ಚಾ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರ

“ಪ್ರತಿಯೊಬ್ಬ ನಾಗರಿಕ ಸ್ವಾವಲಂಬಿಯಾಗಬೇಕು ಎನ್ನುವ ದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಅನೇಕ ಜನಪರ ಯೋಜನೆಗಳನ್ನು ಕಾರ್ಯಗತಗೊಳಿಸಿದ್ದಾರೆ, ಜೀವನಾವಶ್ಯಕ ವಸ್ತುಗಳ ಮೇಲೆ ಜಿಎಸ್‌ಟಿ ಕಡಿತಗೊಳಿಸುವ ಮೂಲಕ ಜನಸಾಮಾನ್ಯರಿಗೆ ದೊಡ್ಡ ಉಡುಗೊರೆ ನೀಡಿದ್ದು, ಸ್ವಾವಲಂಬಿ, ಸ್ವದೇಶಪ್ರೇಮ, ಸ್ವಾಭಿಮಾನದ ಸೂತ್ರಗಳು ಬದುಕಿನ ಭಾಗವಾಗಿಸಿಕೊಳ್ಳಲು ಕೇಂದ್ರ ಸರ್ಕಾರ ನೀಡುತ್ತಿರುವ ಕೊಡುಗೆ ಅನನ್ಯ.”
– ರಮೇಶ ಜಿಗಜಿಣಗಿ
ಸಂಸದರು, ವಿಜಯಪುರ

