ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಮತಕ್ಷೇತ್ರದ ಸಿಂದಗಿ ಮತ್ತು ಆಲಮೇಲ ತಾಲೂಕಿನ ವ್ಯಾಪ್ತಿಯಲ್ಲಿ ಸತತವಾಗಿ ಮಳೆಯಾಗುತ್ತಿರುವುದರಿಂದ ರೈತರ ಬೆಳೆಗಳು ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ. ಈಗಾಗಲೇ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಮತ್ತು ಕಂದಾಯ ಇಲಾಖೆಯವರು ಜಂಟಿಯಾಗಿ ಸಮೀಕ್ಷೆ ಕೈಗೊಂಡು ಸರಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಆಲಮೇಲ ಮತ್ತು ಸಿಂದಗಿ ತಾಲೂಕಿನ ವ್ಯಾಪ್ತಿಯಲ್ಲಿ ಬೆಳೆ ಹಾನಿಗೊಳಗಾದ ರೈತರಿಗೆ ಪರಿಹಾರ ವಿತರಿಸಲು ವಿಶೇಷ ಪ್ಯಾಕೇಜ್ ಘೋಷಣೆ ಮಾಡುವಂತೆ ಶಾಸಕ ಅಶೋಕ ಮನಗೂಳಿ ಮನವಿ ಸಲ್ಲಿಸಿದ್ದಾರೆ.
ಈ ವೇಳೆ ಜಿಲ್ಲಾ ಕೆಡಿಪಿ ಸದಸ್ಯ ನೂರಅಹ್ಮದ ಅತ್ತಾರ ಸೇರಿದಂತೆ ಅನೇಕರು ಇದ್ದರು.

