ವಿಜಯಪುರ: ಕೃಷಿ ಇಲಾಖೆ ಆಯುಕ್ತರಾದ ವೈ.ಎಸ್.ಪಾಟೀಲ ಅವರು ಅಕ್ಟೋಬರ್ ೬ ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಅಕ್ಟೋಬರ್ ೬ ರಂದು ಬರ ಪರಿಸ್ಥಿತಿ ಅಧ್ಯಯನ ತಂಡದೊAದಿಗೆ ಬೆಳಗಾವಿಯಿಂದ ವಿಜಯಪುರಕ್ಕೆ ಆಗಮಿಸಿ ಜಿಲ್ಲೆಯ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. ರಾತ್ರಿ ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಅ.೭ರಂದು ಬೆಳಿಗ್ಗೆ ವಿಜಯಪುರದಿಂದ ಬಾಗಲಕೋಟೆಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Related Posts
Add A Comment