ಉದಯರಶ್ಮಿ ದಿನಪತ್ರಿಕೆ
ಸಿಂದಗಿ: ಪಟ್ಟಣದ ನೆಲೆ ಪ್ರಕಾಶನ ಸಂಸ್ಥೆಯ ಎಂ.ಎಂ.ಪಡಶೆಟ್ಟಿ ಸಾಂಸ್ಕೃತಿಕ ಪ್ರತಿಷ್ಠಾನವು ಜಾನಪದ ವಿದ್ವಾಂಸರಿಗೆ ಕೊಡಮಾಡುವ ರಾಜ್ಯಮಟ್ಟದ ದೇಸಿ ಸನ್ಮಾನ ಪ್ರಶಸ್ತಿಗೆ ಗುಲಬರ್ಗಾ ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ. ಹೆಚ್.ಟಿ.ಪೋತೆ ಅವರಿಗೆ ಆಯ್ಕೆ ಮಾಡಲಾಗಿದೆ.
ಈ ಪ್ರಶಸ್ತಿಯು ೧೧ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ. ಇದರ ಜೊತೆಗೆ ಪ್ರಶಸ್ತಿ ಪುರಸ್ಕೃರ ಸಾಹಿತ್ಯ ಸಾಧನೆ ಕುರಿತು ಕಿರು ಗ್ರಂಥ ಪ್ರಟಕಣೆ ಮಾಡಲಾಗುವುದು ಎಂದು ಪ್ರತಿಷ್ಠಾನದ ಸಂಚಾಲಕ ಡಾ.ಚನ್ನಪ್ಪ ಕಟ್ಟಿ ತಿಳಸಿದ್ದಾರೆ.

